About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಆಂಬಿಡೆಂಟ್‌ ಡೀಲ್‌ ಪ್ರಕರಣ: ಜನಾರ್ಧನರೆಡ್ಡಿಗೆ ಜಾಮೀನು

ಬಳ್ಳಾರಿ: ಆಂಬಿಡೆಂಟ್‌ ಚಿಟ್‌ ಫಂಡ್‌ ಕಂಪನಿ ಡೀಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಒಂದನೇ ಎಸಿಎಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನಿನ್ನೆ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬಳಿಕ ಇಂದು ತೀರ್ಪನ್ನು ಕಾಯ್ದಿರಿಸಿತ್ತು. ನವೆಂಬರ್ 10ರಂದು ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದ ಜನಾರ್ದನ ರೆಡ್ಡಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. 1ನೇ ಎಸಿಎಂಎಂಎಂ ನ್ಯಾಯಾಧೀಶ ಜಗದೀಶ್ ಅವರು ನವೆಂಬರ್ 24 ರವರೆಗೂ 14 ದಿನಗಳ ಕಾಲ ಜನಾರ್ದನ ರೆಡ್ಡಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಆಂಬಿಡೆಂಟ್ ಕಂಪನಿ ಜೊತೆ ಬಹುಕೋಟಿ ಡೀಲ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಜನಾರ್ದನ ರೆಡ್ಡಿ ತಲೆಮರೆಸಿಕೊಂಡಿದ್ದರು ಎನ್ನಲಾಗಿತ್ತು. ಆದರೆ ನ.10 ರ ಮಧ್ಯಾಹ್ನ ತಮ್ಮ ವಕೀಲರ ಜೊತೆ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು. ಅಂದು ತಡರಾತ್ರಿವರೆಗೂ ಸುದೀರ್ಘ ವಿಚಾರಣೆ ನಡೆದಿತ್ತು. ಬಳಿಕ ನ.11 ರಂದು ಸಿಸಿಬಿ ಪೊಲೀಸರು ರೆಡ್ಡಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಧೀಶರ ಮುಂದೇ ಹಾಜರು ಪಡಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಸಿದ್ದ ನ್ಯಾಯಾಲಯ ರೆಡ್ಡಿ ಜಾಮೀನು ಅರ್ಜಿ ವಿಚಾರಣೆ ರೆಡ್ಡಿ ಬಂಧನ ವಿಚಾರದಲ್ಲಿ ಸೂಕ್ತ ಸಾಕ್ಷ್ಯಗಳನ್ನು ನೀಡುವಂತೆ ತಿಳಿಸಿತ್ತು. ಇಂದು ಬೆಳಗ್ಗೆಯೇ ಪ್ರಕರಣದ ತನಿಖಾಧಿಕಾರಿ ಎಸಿಪಿ ವೆಂಕಟೇಶ ಪ್ರಸನ್ನ, ಎಸಿಪಿ ಸುಬ್ರಮಣಿ, ಎಸಿಪಿ ಮಂಜುನಾಥ ಚೌಧರಿ ಅವರು ನ್ಯಾಯಾಲಯದ ಮುಂದೇ ಹಾಜರಿದ್ದರು.

ಇತ್ತ ಜನಾರ್ದನ ರೆಡ್ಡಿ ಅವರ ಜಾಮೀನು ಅರ್ಜಿ ವಿಚಾರಣೆ ಸುದ್ದಿ ತಿಳಿದ ಅವರ ಬೆಂಬಲಿಗರು ನಗರದ ಪರಪ್ಪನ ಅಗ್ರಹಾರ ಜೈಲಿನ ಬಳಿ ಆಗಮಿಸಿದ್ದಾರೆ. ರಾಜ್ಯದ ಚಿಕ್ಕಮಗಳೂರು, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ

Tags

Related Articles

Leave a Reply

Your email address will not be published. Required fields are marked *

Language
Close