6,215 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ IBPS
Job Guide: ದೇಶಾದ್ಯಂತ ಒಟ್ಟು 6,215 ಪ್ರೊಬೆಷನರಿ ಆಫೀಸರ್, ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿರುವ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ಆಸಕ್ತರು ಜುಲೈ 28ರವರೆಗೆ ಅಪ್ಲೈ ಮಾಡಲು ಅವಕಾಶ ಕಲ್ಪಿಸಲಾಗಿದೆ.