ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BPNL Recruitment 2025: 10ನೇ ತರಗತಿ ಪಾಸಾದವರಿಗೆ ಬಂಪರ್‌ ಚಾನ್ಸ್‌; ಭಾರತೀಯ ಪಶುಪಾಲನ್‌ ನಿಗಮ್‌ ಲಿಮಿಟೆಡ್‌ನಲ್ಲಿದೆ ಬರೋಬ್ಬರಿ 12,981 ಹುದ್ದೆ

Job Guide: 10ನೇ ತರಗತಿ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲದೆ ಗುಡ್‌ನ್ಯೂಸ್‌. ಭಾರತೀಯ ಪಶುಪಾಲನ್‌ ನಿಗಮ್‌ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪಂಚಾಯತ್‌ ಪಶು ಸೇವಕ್‌, ತೆಹಸಿಲ್‌ ಡೆವಲಪ್‌ಮೆಂಟ್‌ ಆಫೀಸರ್‌ ಸೇರಿ ಬರೋಬ್ಬರಿ 12,981 ಹುದ್ದೆಗಳು ಖಾಲಿ ಇವೆ. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಮೇ 11.

ಭಾರತೀಯ ಪಶುಪಾಲನ್‌ ನಿಗಮ್‌ ಲಿಮಿಟೆಡ್‌ನಲ್ಲಿದೆ ಬರೋಬ್ಬರಿ 12,981 ಹುದ್ದೆ

ಸಾಂದರ್ಭಿಕ ಚಿತ್ರ.

Profile Ramesh B Apr 26, 2025 3:01 PM

ಬೆಂಗಳೂರು: 10ನೇ ತರಗತಿ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲದೆ ಗುಡ್‌ನ್ಯೂಸ್‌. ಭಾರತೀಯ ಪಶುಪಾಲನ್‌ ನಿಗಮ್‌ ಲಿಮಿಟೆಡ್‌ (Bhartiya Pashupalan Nigam Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BPNL Recruitment 2025). ಪಂಚಾಯತ್‌ ಪಶು ಸೇವಕ್‌, ತೆಹಸಿಲ್‌ ಡೆವಲಪ್‌ಮೆಂಟ್‌ ಆಫೀಸರ್‌ ಸೇರಿ ಬರೋಬ್ಬರಿ 12,981 ಹುದ್ದೆಗಳು ಖಾಲಿ ಇವೆ. ಈ ಪೈಕಿ ಕರ್ನಾಟಕದಲ್ಲೇ 690 ಹುದ್ದೆಗಳಿವೆ. 10, 12ನೇ ತರಗತಿ ಪಾಸಾದವರೂ ಅರ್ಜಿ ಸಲ್ಲಿಸಬಹುದು (Job Guide). ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಮೇ 11 ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಚೀಫ್‌ ಪ್ರಾಜೆಕ್ಟ್‌ ಆಫೀಸರ್‌ - 44 ಹುದ್ದೆ, ವಿದ್ಯಾರ್ಹತೆ: ಸಿಎ, ಸಿಎಸ್‌, ಸ್ನಾತಕೋತ್ತರ ಪದವಿ, ಎಂ.ವಿ.ಎಸ್‌ಸಿ, ಎಂಬಿಎ, ಎಂ.ಇ ಅಥವಾ ಎಂ.ಟೆಕ್‌, ಎಂ.ಎಸ್‌ಸಿ. ವಯೋಮಿತಿ: 40-65 ವರ್ಷ

ಡಿಸ್ಟ್ರಿಕ್ಟ್‌ ಎಕ್ಸ್‌ಟೆನ್ಷನ್‌ ಆಫೀಸರ್‌ - 440 ಹುದ್ದೆ, ವಿದ್ಯಾರ್ಹತೆ: ಪದವಿ. ವಯೋಮಿತಿ: 25-40 ವರ್ಷ

ತಹಸಿಲ್‌ ಡೆವಲಪ್‌ಮೆಂಟ್‌ ಆಫೀಸರ್‌ - 2,121 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ. ವಯೋಮಿತಿ: 21-40 ವರ್ಷ

ಪಂಚಾಯತ್‌ ಪಶು ಸೇವಕ್‌ - 10,376 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ. ವಯೋಮಿತಿ: 18-40 ವರ್ಷ

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಅರ್ಜಿ ಶುಲ್ಕವಾಗಿ ಚೀಫ್‌ ಪ್ರಾಜೆಕ್ಟ್‌ ಆಫೀಸ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಎಲ್ಲ ಅಭ್ಯರ್ಥಿಗಳು 1,534 ರೂ., ಡಿಸ್ಟ್ರಿಕ್ಟ್‌ ಎಕ್ಸ್‌ಟೆನ್ಷನ್‌ ಆಫೀಸರ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಎಲ್ಲ ಅಭ್ಯರ್ಥಿಗಳು 1,180 ರೂ., ತೆಹಸಿಲ್‌ ಡೆವಲಪ್‌ಮೆಂಟ್‌ ಆಫೀಸರ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಎಲ್ಲ ಅಭ್ಯರ್ಥಿಗಳು 944 ರೂ. ಮತ್ತು ಪಂಚಾಯತ್‌ ಪಶು ಸೇವಕ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಎಲ್ಲ ಅಭ್ಯರ್ಥಿಗಳು 708 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಆನ್‌ಲೈನ್‌ ಟೆಸ್ಟ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನೂ ಓದಿ: BIS Recruitment 2025: ಬಿಐಎಸ್‌ನಲ್ಲಿದೆ 160 ಹುದ್ದೆ; ಹೀಗೆ ಅಪ್ಲೈ ಮಾಡಿ

BPNL Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

* ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
(
https://pay.bharatiyapashupalan.com/onlinerequirment)

* ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.

* ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.

* ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.

* ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

* ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: bharatiyapashupalan.comಗೆ ಭೇಟಿ ನೀಡಿ.