ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BOB Recruitment 2025: 2,500 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಿದ ಬ್ಯಾಂಕ್‌ ಆಫ್‌ ಬರೋಡಾ; ಹೊಸ ಅಪ್‌ಡೇಟ್‌ ಬಗ್ಗೆ ಇಲ್ಲಿದೆ ಮಾಹಿತಿ

Bank Jobs: ಖಾಲಿ ಇರುವ ಲೋಕಲ್‌ ಬ್ಯಾಂಕ್‌ ಆಫೀಸರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿರುವ ಬ್ಯಾಂಕ್‌ ಆಫ್‌ ಬರೋಡಾ ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 24 ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು 10 ದಿನಗಳ ಕಾಲ ವಿಸ್ತರಿಸಲಾಗಿದ್ದು, ಆಸಕ್ತರು ಆಗಸ್ಟ್‌ 3 ತನಕ ಅಪ್ಲೈ ಮಾಡಬಹುದು.

2,500 ಹುದ್ದೆಗಳ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಿದ ಬಿಒಬಿ

ಸಾಂದರ್ಭಿಕ ಚಿತ್ರ.

Profile Ramesh B Jul 21, 2025 2:09 PM

ಬೆಂಗಳೂರು: ಖಾಲಿ ಇರುವ ಲೋಕಲ್‌ ಬ್ಯಾಂಕ್‌ ಆಫೀಸರ್‌ (Local Bank Officer) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿರುವ ಬ್ಯಾಂಕ್‌ ಆಫ್‌ ಬರೋಡಾ (Bank of Baroda) ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ (BOB Recruitment 2025). ದೇಶಾದ್ಯಂತ ಒಟ್ಟು 2,500 ಹುದ್ದೆಗಳು ಖಾಲಿ ಇವೆ (Bank Jobs). ಕರ್ನಾಟಕದಲ್ಲಿ 450 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ (Job Guide). ಪದವಿ ವಿದ್ಯಾರ್ಹತೆ ಹೊಂದಿದವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 24 ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು 10 ದಿನಗಳ ಕಾಲ ವಿಸ್ತರಿಸಲಾಗಿದ್ದು, ಆಸಕ್ತರು ಆಗಸ್ಟ್‌ 3 ತನಕ ಅಪ್ಲೈ ಮಾಡಬಹುದು.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಲೋಕಲ್‌ ಬ್ಯಾಂಕ್‌ ಆಫೀಸರ್‌ ಹುದ್ದೆ ಇದಾಗಿದ್ದು, ದೇಶದ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಸಿಎ, ಎಂಜಿನಿಯರಿಂಗ್‌, ಮೆಡಿಕಲ್‌ ಓದಿದವರೂ ಅಪ್ಲೈ ಮಾಬಹುದು. ಕನಿಷ್ಠ 1 ವರ್ಷಗಳ ಕಾರ್ಯಾನುಭವ ಇರಬೇಕು. ಜತೆಗೆ ಸ್ಥಳೀಯ ಭಾಷೆ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಡಿ/ಮಹಿಳಾ ಅಭ್ಯರ್ಥಿಗಳು 175 ರೂ. ಮತ್ತು ಸಾಮಾನ್ಯ/ಇಡಬ್ಲ್ಯುಎಸ್‌/ಒಬಿಎಸ್‌ ಅಭ್ಯರ್ಥಿಗಳು 850 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಕರ್ನಾಟಕದಲ್ಲಿ ಬೆಂಗಳೂರು, ಕಲಬುರಗಿ, ಉಡುಪಿ, ಶಿವಮೊಗ್ಗ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಮೈಸೂರಿನಲ್ಲಿ ಆನ್‌ಲೈನ್‌ ಪರೀಕ್ಷಾ ಕೇಂದ್ರವಿದೆ.

ದಿನಾಂಕ ವಿಸ್ತರಣೆಯ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಗಮನಿಸಿ: ದಿನಾಂಕ ವಿಸ್ತರಣೆಯಾಗಿದ್ದು ಬಿಟ್ಟರೆ ಅಧುಸೂಚನೆಯ ಇತರ ವಿವರ ಅದೇ ರಿತಿ ಇರಲಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಆನ್‌ಲೈನ್‌ ಟೆಸ್ಟ್‌, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 48,480 ರೂ. - 85,920 ರೂ. ಮಾಸಿಕ ವೇತನ ದೊರೆಯಲಿದೆ.

ಈ ಸುದ್ದಿಯನ್ನೂ ಓದಿ: RRB Recruitment 2025: 10, 12ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್; ರೈಲ್ವೆ ನೇಮಕಾತಿ ಮಂಡಳಿಯಿಂದ 6,238 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸುವ ವಿಧಾನ
    (https://ibpsonline.ibps.in/boblbojun25
  • ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಬ್ಯಾಂಕ್‌ ಆಫ್‌ ಬರೋಡಾದ ಅಧಿಕೃತ ವೆಬ್‌ಸೈಟ್‌ ವಿಳಾಸ: bankofbaroda.inಗೆ ಭೇಟಿ ನೀಡಿ.