IPPB Recruitment 2025: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನಲ್ಲಿದೆ 348 ಹುದ್ದೆ; ಹೀಗೆ ಅಪ್ಲೈ ಮಾಡಿ
Job Guide: ಕೇಂದ್ರ ಸರ್ಕಾರದ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಖಾಲಿ ಇರುವ 348 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಗ್ರಾಮೀಣ ಡಕ್ ಸೇವಕ್ (ಎಕ್ಸಿಕ್ಯುಟಿವ್) ಹುದ್ದೆ ಇದಾಗಿದೆ. ದೇಶಾದ್ಯಂತ ನೇಮಕಾತಿ ನಡೆಯಲಿದ್ದು, ಕರ್ನಾಟಕದಲ್ಲಿ 19 ಹುದ್ದೆಗಳಿವೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 29.

ಸಾಂದರ್ಭಿಕ ಚಿತ್ರ -

ಬೆಂಗಳೂರು: ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್. ಕೇಂದ್ರ ಸರ್ಕಾರದ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (India Post Payments Bank) ಖಾಲಿ ಇರುವ 348 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Job Guide). ಗ್ರಾಮೀಣ ಡಕ್ ಸೇವಕ್ (ಎಕ್ಸಿಕ್ಯುಟಿವ್) ಹುದ್ದೆ ಇದಾಗಿದೆ. ದೇಶಾದ್ಯಂತ ನೇಮಕಾತಿ ನಡೆಯಲಿದ್ದು, ಕರ್ನಾಟಕದಲ್ಲಿ 19 ಹುದ್ದೆಗಳಿವೆ (IPPB Recruitment 2025). ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆಯ ದಿನ ಅಕ್ಟೋಬರ್ 29. ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಗ್ರಾಮೀಣ ಡಕ್ ಸೇವಕ್ (Gramin Dak Sevaks (Executive) ಹುದ್ದೆ ಇದಾಗಿದ್ದು, ದೇಶದ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಮತ್ತುಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್.
ಈ ಸುದ್ದಿಯನ್ನೂ ಓದಿ: SSC Recruitment 2025: ದ್ವಿತೀಯ ಪಿಯುಸಿ ಪಾಸಾದವರಿಗೆ ಗುಡ್‌ನ್ಯೂಸ್; 7,565 ಕಾನ್‌ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಮೆರಿಟ್ ಲಿಸ್ಟ್, ಆನ್‌ಲೈನ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆರಂಭದಲ್ಲಿ 1 ವರ್ಷಕ್ಕೆ ನೇಮಕ ನಡೆಯಲಿದೆ. ಉದ್ಯೋಗದಲ್ಲಿನ ನಿಮ್ಮ ಪ್ರದರ್ಶನ ನೋಡಿ ಮುಂದಿನ 2 ವರ್ಷಗಳಿಗೆ ನೇಮಕಾತಿಯನ್ನು ಮುಂದುವರಿಸಲಾಗುತ್ತದೆ. ಪ್ರತಿ 6 ತಿಂಗಳಿಗೊಮ್ಮೆ ನಿಮ್ಮ ಕೆಲಸವನ್ನು ಪರಿಶೀಲಿಸಲಾಗುತ್ತದೆ. ಸತತ 2 ಬಾರಿ ತೃಪ್ತಿಕರವಾಗಿಲ್ಲವೆಂದರೆ 1 ತಿಂಗಳ ನೊಟೀಸ್ ಪಿರೀಡ್ ಬಳಿಕ ಉದ್ಯೋಗದಿಂದ ತೆಗೆದು ಹಾಕಲಾಗುತ್ತದೆ. ಆಯ್ಕೆಯಾದವರಿಗೆ 30,000 ರೂ. ಮಾಸಿಕ ವೇತನ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
IPPB Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://ibpsonline.ibps.in/ippblaug25/) - ಹೆಸರು ನೋಂದಾಯಿಸಿ.
- ಎಚ್ಚರಿಕೆಯಿಂದ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಗಮನಿಸಿ: ಅಪ್ಲಿಕೇಷನ್‌ಗೆ 4.5 ಸಿಎಂ × 3.5 ಸಿಎಂ ಅಳತೆಯ ಫೋಟೊ, ಸಹಿ, ಎಡಗೈ ಹೆಬ್ಬೆರಳಿನ ಗುರುತು ಸ್ಕಾನ್ ಮಾಡಿ ನೀಡಬೇಕಾಗುತ್ತದೆ ಎಂದು ಅಧಿಸೂಚನೆ ತಿಳಿಸಿದೆ.
ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ ವಿಳಾಸ: ippbonline.comಗೆ ಭೇಟಿ ನೀಡಿ.