SBI Recruitment 2025: ಕರ್ನಾಟಕ ಸೇರಿ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಎಸ್ಬಿಐ ಮರು ಅಧಿಸೂಚನೆ
Bank Jobs: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಾಕಾಂಕ್ಷಿಗಳಿಗೆ ಮೇ ತಿಂಗಳಲ್ಲಿ ಜೂನಿಯರ್ ಮ್ಯಾನೇಜ್ ಮೆಂಟ್ ಗ್ರೇಡ್ ಸ್ಕೇಲ್ -1 ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಿತ್ತು. ಮೇ ಕೊನೆಯ ವಾರದಲ್ಲಿ ಅರ್ಜಿ ಸಲ್ಲಿಕೆ ಕೊನೆಗೊಳಿಸಿದ್ದರೂ, ಇದೀಗ ಅದೇ ಅಧಿಸೂಚನೆಗೆ ಮತ್ತೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಕೋರಿದೆ. ಅಭ್ಯರ್ಥಿಗಳು ಜೂ. 30ರೊಳಗೆ ಅರ್ಜಿ ಸಲ್ಲಿಸಬೇಕು. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.


-ಆರ್.ಕೆ.ಬಾಲಚಂದ್ರ
ಬೆಂಗಳೂರು: ಭಾರತದಲ್ಲಿ ಬ್ಯಾಂಕಿಂಗ್ ವೃತ್ತಿಯನ್ನು ಆರಿಸಿಕೊಳ್ಳುವ ಹೊಸಬರಿಗೆ ಮತ್ತು ಅನುಭವಿ ವೃತ್ತಿಪರರಿಗೆ ಅತ್ಯಂತ ಪ್ರತಿಷ್ಠಿತ ಉದ್ಯೋಗಗಳಲ್ಲಿ ಒಂದಾಗಿದೆ. ಬ್ಯಾಂಕ್ಗಳು ತನ್ನ ಉದ್ಯೋಗಿಗಳಿಗೆ ಸುಂದರವಾದ ಪ್ಯಾಕೇಜ್ಗಳು, ಆಕರ್ಷಕ ಸಂಬಳ, ಉದ್ಯೋಗ ಭದ್ರತೆಯ ಜತೆಗೆ ಇತರ ಸವಲತ್ತುಗಳನ್ನು ನೀಡುತ್ತವೆ ಎಂಬುದು ಬಹಿರಂಗ ಸತ್ಯವಾಗಿದೆ (Bank Jobs). ಕನ್ನಡ ಓದಲು, ಬರೆಯಲು ಹಾಗೂ ಮಾತನಾಡಲು ಬಲ್ಲ ಅಭ್ಯರ್ಥಿಗಳಿಗೆ ಇವು ಮೀಸಲಾಗಿವೆ. ಉಳಿದ ಹುದ್ದೆಗಳಿಗೂ ಆಯಾ ರಾಜ್ಯಗಳ ಭಾಷಾ ನಿಯಮ ಅನ್ವಯವಾಗಲಿದೆ (SBI Recruitment 2025). ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಾಕಾಂಕ್ಷಿಗಳಿಗೆ, ಈ ಹಿಂದೆ ಮೇ ತಿಂಗಳಲ್ಲಿ ಈ ಕುರಿತು ಅಧಿಸೂಚನೆ ಪ್ರಕಟಿಸಿತ್ತು. ಮೇ ಕೊನೆಯ ವಾರದಲ್ಲಿ ಅರ್ಜಿ ಸಲ್ಲಿಕೆ ಕೊನೆಗೊಳಿಸಿದ್ದರೂ, ಇದೀಗ ಅದೇ ಅಧಿಸೂಚನೆಗೆ ಮತ್ತೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಕೋರಿದೆ. ಹೊಸ ಪ್ರಕಟಣೆಗಳ ಪ್ರಕಾರ, ಅಭ್ಯರ್ಥಿಗಳು ಜೂ. 30ರೊಳಗೆ ಅರ್ಜಿ ಸಲ್ಲಿಸಬೇಕು. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.
ಹುದ್ದೆಗಳ ಸಂಖ್ಯೆ: 2025-26ನೇ ಸಾಲಿನಲ್ಲಿ ದೇಶಾದ್ಯಂತ ಒಟ್ಟು ರೆಗ್ಯುಲರ್ 2,600 ಮತ್ತು ಬ್ಯಾಕ್ಲಾಗ್ 364 ಹುದ್ದೆಗಳಿವೆ. 2,964 ರಲ್ಲಿ ಕರ್ನಾಟಕದಿಂದ 250 ರೆಗ್ಯುಲರ್ ಹಾಗೂ ಬ್ಯಾಕ್ ಲಾಗ್ 39 ಮಂದಿಗೆ ಅವಕಾಶ ಸಿಗಲಿದೆ. ಆನ್ಲೈನ್ ಪರೀಕ್ಷೆ ಮೂಲಕ ಕರ್ನಾಟಕ ಸೇರಿದಂತೆ ದೇಶದಾದ್ಯಂತವಿರುವ ಶಾಖೆಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಮತ್ತು ನೇಮಕ ಮಾಡಿಕೊಳ್ಳಲಾಗುತ್ತದೆ.
ಹುದ್ದೆಯ ಹೆಸರು: ಜೂನಿಯರ್ ಮ್ಯಾನೇಜ್ ಮೆಂಟ್ ಗ್ರೇಡ್ ಸ್ಕೇಲ್ -1
ಈ ಸುದ್ದಿಯನ್ನೂ ಓದಿ: Bank apprenticeship: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 4500 ಅಪ್ರೆಂಟಿಸ್ಶಿಪ್ ಹುದ್ದೆಗಳು
ವೇತನಶ್ರೇಣಿ: 48,480-85,920 ರೂ. ಇದಲ್ಲದೆ ಬ್ಯಾಂಕ್ ಹೆಚ್ಚುವರಿಯಾಗಿ, ವಿಶೇಷ ಭತ್ಯೆ, ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ, ವಸತಿ ಕ್ವಾರ್ಟರ್ಸ್/ಲೀಸ್ ಬಾಡಿಗೆ, ಬ್ಯಾಂಕಿನ ನೀತಿಯ ಪ್ರಕಾರ ವೈದ್ಯಕೀಯ ವೆಚ್ಚ ಮರುಪಾವತಿ ಹಾಗೂ LFC, ಮರುಪಾವತಿಯಂತಹ ಇತರ ಸೌಲಭ್ಯಗಳಿಗೆ ಅರ್ಹರಾಗಿರುತ್ತಾರೆ. ಮತ್ತು ಇತರ ಭತ್ಯೆಗಳನ್ನು ಚಾಲ್ತಿಯಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ ಪಾವತಿಸಲಾಗುವುದು.
ಅರ್ಜಿ ಶುಲ್ಕ : ಸಾಮಾನ್ಯ, ಒಬಿಸಿ ಹಾಗೂ ಇತರೆ ಅಭ್ಯರ್ಥಿಗಳಿಗೆ: ₹750. ಪ.ಜಾ, ಪ.ಪಂ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ನೋಂದಣಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.
ವಯೋಮಿತಿ: ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷಗಳಿಗಿಂತ ಹೆಚ್ಚಿರಬಾರದು. ಸರ್ಕಾರದ ನಿಯಮಾನುಸಾರ ಎಸ್.ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳಷ್ಟು ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಶೈಕ್ಷಣಿಕ ಅರ್ಹತೆ: ಯಾವುದೆ ವಿಷಯಗಳಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೈದ್ಯಕೀಯ, ಎಂಜಿನಿಯರಿಂಗ್, ಸಿ.ಎ. ಮಾಡಿದವರು ಕೂಡ ಅರ್ಜಿ ಸಲ್ಲಿಸಬಹುದು ಪದವಿಯ ಜತೆಯಲ್ಲಿ ಸ್ಥಳೀಯ ಭಾಷಾ ಜ್ಞಾನವನ್ನು (ಬರೆಯುವ, ಓದುವ ಮತ್ತು ಅರ್ಥಮಾಡಿಕೊಳ್ಳುವ) ಅಭ್ಯರ್ಥಿಯು ಹೊಂದಿರಬೇಕು.
ಎರಡು ವರ್ಷ ಯಾವುದೇ ವಾಣಿಜ್ಯ ಬ್ಯಾಂಕ್, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಅಥವಾ ಆರ್ಬಿಐನಿಂದ ಅಂಗೀಕೃತವಾಗಿರುವ ಯಾವುದೇ ಬ್ಯಾಂಕ್ನಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕಿರುತ್ತದೆ. ಅಲ್ಲದೆ, ಉತ್ತಮ ಸಿಬಿಲ್ ಸ್ಕೋರ್ ಹೊಂದಿರಬೇಕು.
ಆನ್ಲೈನ್ ಪರೀಕ್ಷಾ ಕೇಂದ್ರಗಳು: ಬೆಂಗಳೂರು, ಧಾರವಾಡ/ಹುಬ್ಬಳ್ಳಿ, ಕಲಬುರಗಿ, ಮೈಸೂರು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗಲೇ ತಮ್ಮ ಹತ್ತಿರದ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು.
ಪರೀಕ್ಷಾ ಪೂರ್ವ ತರಬೇತಿ: ಬ್ಯಾಂಕ್ ವತಿಯಿಂದ ಎಸ್ಸಿ/ಎಸ್ಟಿ/ ಒಬಿಸಿ/ಧಾರ್ಮಿಕ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತದೆ. ಈ ತರಬೇತಿಯ ಅಗತ್ಯವಿದ್ದವರು ಅರ್ಜಿ ಸಲ್ಲಿಸುವಾಗಲೇ ಅರ್ಜಿಯಲ್ಲಿ ಇದಕ್ಕೆ ಸಂಬಂಧಿ ಸಿದಂತೆ ಮಾಹಿತಿಯನ್ನು ನೀಡಬೇಕಾಗುತ್ತದೆ
ನೇಮಕಾತಿ ಪ್ರಕ್ರಿಯೆ ಹೇಗೆ?: ಮೊದಲಿಗೆ ಆನ್ಲೈನ್ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಯ ದಾಖಲೆಗಳನ್ನು ಬ್ಯಾಂಕಿನ ‘ಪರಿಶೀಲನಾ ಸಮಿತಿ' (Screening Committee)ಪರಿಶೀಲಿಸಿ, ವೃತ್ತವಾರು ಮೆರಿಟ್ ಪಟ್ಟಿಯನ್ನು ಪ್ರಕಟಿಸಲಿದೆ. ಈ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಸಂದರ್ಶನ ನಡೆಸಿ, ಆನ್ಲೈನ್ ಪರೀಕ್ಷೆಯಲ್ಲಿ ಪಡೆದ ಅಂಕ ಮತ್ತು ಸಂದರ್ಶನದಲ್ಲಿ ಪಡೆದ ಅಂಕವನ್ನು 75:25 ಅನುಪಾತದಲ್ಲಿ ಲೆಕ್ಕಾಚಾರ ಹಾಕಿ ಹೆಚ್ಚು ಅಂಕಪಡೆದ ಅಭ್ಯರ್ಥಿಗಳ (ಮೀಸಲಾತಿ ಅನ್ವಯಿಸಿ) ಅಂತಿಮ ಆಯ್ಕೆ ಪಟ್ಟಿ ಸಿದ್ದಪಡಿಸಲಾಗುತ್ತದೆ. ಈ ಅಭ್ಯರ್ಥಿಗಳಲ್ಲಿ ಅಗತ್ಯ ಇರುವ ಅಭ್ಯರ್ಥಿಗಳಿಗೆ ಭಾಷಾ ಪರೀಕ್ಷೆ ನಡೆಸಿ, ಇದರಲ್ಲಿ ಅರ್ಹತೆ ಪಡೆದವರನ್ನು ನೇಮಕಮಾಡಿಕೊಳ್ಳಲಾಗುತ್ತದೆ.
ನೆನಪಿಡಿ: ಎಸ್ಸೆಸ್ಸೆಲ್ಸಿ ಅಥವಾ ಪಿಯುಸಿಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ಓದಿ, ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಈ ಭಾಷಾ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿರುತ್ತದೆ.
ಪರೀಕ್ಷೆಯ ಸ್ವರೂಪ: ಆನ್ಲೈನ್ ಪರೀಕ್ಷೆಯು 120 ಅಂಕಗಳಿಗೆ ನಡೆಯಲಿದ್ದು, ನಾಲ್ಕು ವಿಭಾಗಗಳನ್ನು ಹೊಂದಿರುತ್ತದೆ. ಅವುಗಳೆಂದರೆ:
- ಇಂಗ್ಲಿಷ್ ಭಾಷೆ. (English Language)
- ಬ್ಯಾಂಕಿಂಗ್ ಕ್ಷೇತ್ರದ ಜ್ಞಾನ (Banking Knowledge)
- ಸಾಮಾನ್ಯಜ್ಞಾನ/ಆರ್ಥಿಕತೆ (General Awareness/Economy)
- ಕಂಪ್ಯೂಟರ್ ಆಪ್ಟಿಟ್ಯೂಟ್ (Computer Aptitude) ಒಟ್ಟು 120 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪರೀಕ್ಷೆ ಬರೆಯಲು 2 ಗಂಟೆ ಕಾಲಾವಕಾಶ ನೀಡಲಾಗುತ್ತದೆ.
ಈ ಪರೀಕ್ಷೆಯ ಜತೆಯಲ್ಲಿಯೇ ಇಂಗ್ಲಿಷ್ ಭಾಷೆಗೆ ಸಂಬಂಧಿಸಿದ ವಿವರಣಾತ್ಮಕ ಪರೀಕ್ಷೆ (Descriptive Test)ನಡೆಯಲಿದೆ.ಪತ್ರ ಮತ್ತು ಪ್ರಬಂಧ ಬರೆಯುವುದಕ್ಕೆ ಸಂಬಂಧಿಸಿದಂತೆ ತಲಾ ಒಂದೊಂದು ಪ್ರಶ್ನೆ ಕೇಳಲಾಗಿರುತ್ತದೆ. ಇದಕ್ಕೆ ಉತ್ತರ ಬರೆಯಲು 30 ನಿಮಿಷ ಕಾಲಾವಕಾಶ ನೀಡಲಾಗುತ್ತದೆ. 50 ಅಂಕಗಳಿಗೆ ಈ ಪರೀಕ್ಷೆ ನಡೆಯಲಿದೆ.ಸಂದರ್ಶನಕ್ಕೆ 50 ಅಂಕ ನಿಗದಿಪಡಿಸಲಾಗಿರುತ್ತದೆ. ಇದರಲ್ಲಿ ಬ್ಯಾಂಕ್ ನಿಗದಿಪಡಿಸಿರುವಷ್ಟು ಕನಿಷ್ಠ ಅಂಕ ಪಡೆದ ಅಭ್ಯರ್ಥಿಗಳನ್ನು ಮಾತ್ರ ನೇಮಕಕ್ಕೆ ಪರಿಗಣಿಸಲಾಗುತ್ತದೆ.
ಋಣಾತ್ಮಕ ಮೌಲ್ಯಮಾಪನ ಇಲ್ಲ. ಆನ್ಲೈನ್ ಪರೀಕ್ಷೆಯ ವಸ್ತುನಿಷ್ಠ ಮಾದರಿಯಲ್ಲಿ ನಡೆಯುವ ಈ ಪರೀಕ್ಷೆಯ ಪ್ರತಿ ವಿಭಾಗದಲ್ಲಿಯೇ ಇಂತಿಷ್ಟೇ ಅಂಕ ಪಡೆದಿರಲೇಬೇಕೆಂಬ ನಿಯಮವೇನೂ ಇರುವುದಿಲ್ಲ. ಅಂತೆಯೇ ಋಣಾತ್ಮಕ ಮೌಲ್ಯಮಾಪನ ಕೂಡ ಇರುವುದಿಲ್ಲ. ಕನ್ನಡದಲ್ಲಿ ಪರೀಕ್ಷೆ ನಡೆಯೊದಿಲ್ಲ.
ಪ್ರೊಬೇಷನ್ ಅವಧಿ: ಆಯ್ಕೆಯಾದ ಅಭ್ಯರ್ಥಿಗಳು ಬ್ಯಾಂಕಿಗೆ ಸೇರಿದ ದಿನಾಂಕದಿಂದ 6 ತಿಂಗಳ ಕಾಲ ಸಕ್ರಿಯ ಸೇವೆಯ ಅವಧಿಗೆ ಪ್ರೊಬೇಷನ್ನಲ್ಲಿರುತ್ತಾರೆ.
ಅರ್ಜಿ ಸಲ್ಲಿಸಲು ವೆಬ್ ಲಿಂಕ್ ಹಾಗೂ ಅಧಿಸೂಚನೆಗೆ: https://bank.sbi/web/careers/current-openings ಮೇಲೆ ಕ್ಲಿಕ್ ಮಾಡಿ.