ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

DCC Bank Recruitment: ಬಳ್ಳಾರಿ ಡಿಸಿಸಿ ಬ್ಯಾಂಕ್ ನೇಮಕಾತಿ; 10th, PU ಆದವರಿಗೆ ಉದ್ಯೋಗ, ಆಸಕ್ತರು ಅರ್ಜಿ ಹಾಕಿ

Ballari DCC Bankವು ಒಟ್ಟು 82 ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದೆ. ವ್ಯವಸ್ಥಾಪಕ, ಪ್ರಥಮ ಹಾಗೂ ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು ಮತ್ತು ಕಿರಿಯ ಸೇವಕರ ಹುದ್ದೆಗಳು ಲಭ್ಯವಿವೆ. ಪದವಿ, PUC ಹಾಗೂ SSLC ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆ ಆನ್‌ಲೈನ್ ಮೂಲಕ ಏಪ್ರಿಲ್ 6ರಿಂದ ಆರಂಭವಾಗಿ ಮೇ 6ರವರೆಗೆ ನಡೆಯಲಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಬ್ಯಾಂಕ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಉತ್ತಮ ಅವಕಾಶವಾಗಿದೆ.

ಬ್ಯಾಂಕ್ ಉದ್ಯೋಗಾವಕಾಶ; 82 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ ಡಿಸಿಸಿ ಬ್ಯಾಂಕ್ ನೇಮಕಾತಿ -

Profile
Sushmitha Jain Apr 9, 2026 1:41 PM

ಬೆಂಗಳೂರು: ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ (Ballari Chikballapura DCC Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 82 ಹುದ್ದೆಗಳು ಖಾಲಿ ಇದ್ದು, ವ್ಯವಸ್ಥಾಪಕರು, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಹುದ್ದೆ, ಡ್ರೈವರ್ ಹುದ್ದೆ ಹಾಗೂ ಕಿರಿಯ ಸೇವಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದ್ದು, ಮೇ 6, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಳ್ಳಾರಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾದ ಮಾಹಿತಿ ಇಲ್ಲಿದೆ.

ವಿದ್ಯಾರ್ಹತೆ:

ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಥಮ ದರ್ಜೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಹೊಂದಿರುವುದರ ಜೊತೆ ಕಂಪ್ಯೂಟರ್ ಜ್ಞಾನ ಅಗತ್ಯವಾಗಿದೆ.

ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಹಾಗೂ ಕಂಪ್ಯೂಟರ್ ಜ್ಞಾನ ಕಡ್ಡಾಯ

ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ವಾಹನ ಚಾಲಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು

ಎಸ್‌ಎಸ್‌ಎಲ್‌ಸಿ ಶಿಕ್ಷಣದ ಜೊತೆಗೆ ವಾಹನ ಚಾಲನಾ ಪರವಾನಗಿ ಇರಬೇಕು.

ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಕಿರಿಯ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಪಾಸ್ ಆಗಿರಬೇಕು. ಎಲ್ಲಾ ಹುದ್ದೆಗಳಿಗೂ ಕನ್ನಡ ಓದು, ಬರಹ, ಮಾತನಾಡುವ ಹಾಗೂ ಅರ್ಥೈಸುವ ಸಾಮರ್ಥ್ಯ ಕಡ್ಡಾಯ ಇರಬೇಕು.

IDBI Bank Recruitment 2026: ಐಡಿಬಿಐ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; 33 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಿತಿ:

ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:

ಜನರಲ್/ ಒಬಿಸಿ ಅಭ್ಯರ್ಥಿಗಳು- 1000 ರೂ.

SC/ST/ ಪ್ರವರ್ಗ-1/PH/ ಮಾಜಿ ಸೈನಿಕ/ ವಿಧವಾ ಅಭ್ಯರ್ಥಿಗಳು- 500 ರೂ.

ಪಾವತಿಸುವ ಬಗೆ- ಆನ್​ಲೈನ್

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಎಪ್ರಿಲ್​ 6ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮೇ 6 ಆಗಿದೆ.

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ bellarydcc.bank.in ಭೇಟಿ ನೀಡಿ.