BOB Recruitment 2026: ಬ್ಯಾಂಕ್ ಆಫ್ ಬರೋಡದಲ್ಲಿದೆ 253 ಹುದ್ದೆ; ಅಪ್ಲೈ ಮಾಡುವ ವಿಧಾನ ಹೇಗೆ? ವಿದ್ಯಾರ್ಹತೆ ಏನು? ಇಲ್ಲಿದೆ ಸಂಪೂರ್ಣ ವಿವರ
Job Guide: ಬ್ಯಾಂಕ್ ಆಫ್ ಬರೋಡ ಖಾಲಿ ಇರುವ 253 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಫೆಬ್ರವರಿ 26.
ಸಾಂದರ್ಭಿಕ ಚಿತ್ರ. -
ಬೆಂಗಳೂರು, ಫೆ. 8: ದೇಶದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡ (Bank of Baroda) ಖಾಲಿ ಇರುವ 253 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BOB Recruitment 2026). ಅಸಿಸ್ಟಂಟ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ ಮುಂತಾದ ಹುದ್ದೆಗಳಿದ್ದು, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆ ತಿಳಿಸಿದೆ (Bank Jobs). ಉದ್ಯೋಗ ಸ್ಥಳ: ದೇಶಾದ್ಯಂತ (Job Guide). ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಫೆಬ್ರವರಿ 26.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಅಸಿಸ್ಟಂಟ್ ವೈಸ್ ಪ್ರೆಸಿಡೆಂಟ್-1-ಎಂಎಸ್‌ಎಂಇ ರಿಲೇಷನ್‌ಶಿಪ್-14, ಡೆಪ್ಯುಟಿ ಮ್ಯಾನೇಜರ್-ಎಂಎಸ್‌ಎಂಇ ರಿಲೇಷನ್‌ಶಿಪ್- 62 ಮತ್ತು ಅಸಿಸ್ಟಂಟ್ ಮ್ಯಾನೇಜರ್-ಎಂಎಸ್‌ಎಂಇ ಸೇಲ್ಸ್- 177 ಹುದ್ದೆಗಳಿವೆ. ದೇಶದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಫುಲ್ ಟೈಮ್ ಎಂಬಿಎ/ಪಿಜಿಡಿಎಂ ಮಾಡಿದವರಿಗೆ ಆದ್ಯತೆ. ಜತೆಗೆ 2ರಿಂದ 5 ವರ್ಷಗಳ ಕಾರ್ಯಾನುಭವ ಕಡ್ಡಾಯ.
ವಯೋಮಿತಿ
ಅಸಿಸ್ಟಂಟ್ ವೈಸ್ ಪ್ರೆಸಿಡೆಂಟ್ ಹುದ್ದೆಗೆ ಕನಿಷ್ಠ ವಯಸ್ಸು 26, ಗರಿಷ್ಠ ವಯಸ್ಸು 36 ವರ್ಷ, ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಕನಿಷ್ಠ ವಯಸ್ಸು 24, ಗರಿಷ್ಠ ವಯಸ್ಸು 34 ವರ್ಷ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದಗೆ ಕನಿಷ್ಠ ವಯಸ್ಸು 22, ಗರಿಷ್ಠ ವಯಸ್ಸು 32 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.
ಪದವೀಧರರಿಗೆ ಗುಡ್‌ನ್ಯೂಸ್; ಬರೋಬ್ಬರಿ 2,273 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎಸ್‌ಬಿಐ
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಡಿ/ಮಹಿಳಾ ಅಭ್ಯರ್ಥಿಗಳು 175 ರೂ. ಮತ್ತು ಸಾಮಾನ್ಯ/ಇಡಬ್ಲ್ಯುಎಸ್/ಒಬಿಎಸ್ ಅಭ್ಯರ್ಥಿಗಳು 850 ರೂ. ಆನ್‌ಲೈನ್ ಮೂಲಕ ಪಾವತಿಸಬೇಕು.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಆನ್‌ಲೈನ್ ಟೆಸ್ಟ್, ಸಂದರ್ಶನ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
BOB Recruitment 2026 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://bankappsweb.bankofbaroda.bank.in/BOBRECRUITMENT_FEB_MSMEC2608829/) - ಹೆಸರು ನೋಂದಾಯಿಸಿ.
- ಹೊಸ ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
- ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ ವಿಳಾಸ: bankofbaroda.inಗೆ ಭೇಟಿ ನೀಡಿ.