IBPS Recruitment: ಬ್ಯಾಂಕ್ ಉದ್ಯೋಗಾರ್ಥಿಗಳಿಗೆ ಗುಡ್‌ನ್ಯೂಸ್; 6,215 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ IBPS
Job Guide: ದೇಶಾದ್ಯಂತ ಒಟ್ಟು 6,215 ಪ್ರೊಬೆಷನರಿ ಆಫೀಸರ್, ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿರುವ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ಆಸಕ್ತರು ಜುಲೈ 28ರವರೆಗೆ ಅಪ್ಲೈ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು: ದೇಶಾದ್ಯಂತ ಒಟ್ಟು 6,215 ಪ್ರೊಬೆಷನರಿ ಆಫೀಸರ್, ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿರುವ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ (IBPS Recruitment 2025). ಈ ಹಿಂದೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ಆಸಕ್ತರು ಜುಲೈ 28ರವರೆಗೆ ಅಪ್ಲೈ ಮಾಡಲು ಅವಕಾಶ ಕಲ್ಪಿಸಲಾಗಿದೆ (Job Guide). ಅರ್ಜಿ ಸಲ್ಲಿಸುವುದು ಹೇಗೆ? ಆಯ್ಕೆ ವಿಧಾನ ಯಾವ ರೀತಿ ಇರಲಿದೆ? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.
ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಪ ಮಹಾರಾಷ್ಟ್ರ, ಕೆನರಾ ಬ್ಯಾಂಕ್, ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಯುಸಿಒ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಇಂಡಿಯನ್ ಬ್ಯಾಂಕ್, ಪಂಜಾಬ್ & ಸಿಂಧ್ ಬ್ಯಾಂಕ್‌ಗಳಿಗೆ ನೇಮಕಾತಿ ನಡೆಯಲಿದೆ.
ವಿದ್ಯಾರ್ಹತೆ
ಪ್ರೊಬೆಷನರಿ ಆಫೀಸರ್- ಪದವಿ
ಐಟಿ ಆಫೀಸರ್-ಪದವಿ, ಸ್ನಾತಕೋತ್ತರ ಪದವಿ
ಅಗ್ರಿಕಲ್ಚರಲ್ ಫೀಲ್ಡ್ ಆಫೀಸರ್-ಪದವಿ, ಬಿ.ಇ ಅಥವಾ ಬಿ.ಟೆಕ್
ರಾಜ್ಯಭಾಷಾ ಅಧಿಕಾರಿ-ಸ್ನಾತಕೋತ್ತರ ಪದವಿ
ಲಾ ಆಫೀಸರ್-ಎಲ್‌ಎಲ್‌ಬಿ
ಎಚ್‌ಆರ್/ಪರ್ಸನಲ್ ಆಫೀಸರ್-ಪದವಿ, ಸ್ನಾತಕೋತ್ತರ ಪದವಿ
ಮಾರ್ಕೆಟಿಂಗ್ ಆಫೀಸರ್-ಪದವಿ, ಎಂಬಿಎ, ಎಂಎಂಎಸ್, ಪಿಜಿಡಿಬಿಎ, ಪಿಜಿಡಿಬಿಎಂ, ಪಿಜಿಪಿಎಂ, ಪಿಜಿಡಿಎಂ
ವಯೋಮಿತಿ
ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ, ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿರಿಯಾಯಿತಿ ಇದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಸಾಮಾನ್ಯ/ಒಬಿಸಿ/ಇಡಬ್ಲ್ಯುಸಿ ಅಭ್ಯರ್ಥಿಗಳು 850 ರೂ. ಮತ್ತು ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು 175 ರೂ. ಆನ್‌ಲೈನ್ ಮೂಲಕ ಪಾವತಿಸಬೇಕು.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಪ್ರಿಲಿಮಿನರಿ ಟೆಸ್ಟ್, ಮೈನ್ ಟೆಸ್ಟ್, ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 48,480 ರೂ. - 85,920 ರೂ. ಮಾಸಿಕ ವೇತನ ದೊರೆಯಲಿದೆ.
ಪ್ರೊಬೆಷನರಿ ಆಫೀಸರ್ ಹುದ್ದೆಗಳ ದಿನಾಂಕ ವಿಸ್ತರಣೆಯ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ದಿನಾಂಕ ವಿಸ್ತರಣೆಯ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸಲುವ ವಿಧಾನ
- ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://ibpsreg.ibps.in/crpspxvjun25/) - ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://ibpsreg.ibps.in/crppoxvjun25/) - ಲಾಗಿನ್ ಆಗಿ.
- ಎಚ್ಚರಿಕೆಯಿಂದ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್, ಸರಿಯಾದ ಅಳತೆಯಲ್ಲಿ ಫೋಟೊ ಅಪ್ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
ಹೆಚ್ಚಿನ ವಿವರಗಳಿಗೆ ವೆಸೈಟ್ ವಿಳಾಸ: https://www.ibps.in/ಗೆ ಭೇಟಿ ನೀಡಿ.