CSA Recruitment 2025: ದೇಶಾದ್ಯಂತ ಬರೋಬ್ಬರಿ 10,277 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ IBPS; ಪದವಿ ಪೂರೈಸಿದವರು ಅಪ್ಲೈ ಮಾಡಿ
Bank Jobs: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶಾದ್ಯಂತ ವಿವಿಧ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಬರೋಬ್ಬರಿ 10,277 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಕಸ್ಟಮರ್ ಸರ್ವಿಸ್ ಅಸೋಸಿಯೇಟ್ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕು. ಕೊನೆಯ ದಿನ ಆಗಸ್ಟ್ 21.

ಸಾಂದರ್ಭಿಕ ಚಿತ್ರ.

ಬೆಂಗಳೂರು: ನೀವು ಪದವಿ ಪೂರೈಸಿ ಬ್ಯಾಂಕ್ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಉತ್ತಮ ಅವಕಾಶ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection-IBPS) ದೇಶಾದ್ಯಂತ ವಿವಿಧ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಬರೋಬ್ಬರಿ 10,277 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಕಸ್ಟಮರ್ ಸರ್ವಿಸ್ ಅಸೋಸಿಯೇಟ್ ಹುದ್ದೆ (Customer Service Associates Posts) ಇದಾಗಿದೆ (CSA Recruitment 2025). ಕರ್ನಾಟಕದಲ್ಲಿ ಒಟ್ಟು 1,170 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ (Job Guide). ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಆಗಸ್ಟ್ 21.
ಯಾವೆಲ್ಲ ಬ್ಯಾಂಕ್‌ನಲ್ಲಿ ಎಷ್ಟು ಹುದ್ದೆಗಳಿವೆ? ವಿದ್ಯಾರ್ಹತೆ ಏನು?
ಕಸ್ಟಮರ್ ಸರ್ವಿಸ್ ಅಸೋಸಿಯೇಟ್ ಹುದ್ದೆ ಇದಾಗಿದ್ದು, ದೇಶದ ಯಾವುದೇ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಜತೆಗೆ ಕಂಪ್ಯೂಟ್ ಜ್ಞಾನ ಕಡ್ಡಾಯ. ಕರ್ನಾಟಕದಲ್ಲಿ ಬ್ಯಾಂಕ್ ಆಫ್ ಬರೋಡಾ-253, ಬ್ಯಾಂಕ್ ಆಫ್ ಇಂಡಿಯಾ-45, ಬ್ಯಾಂಕ್ ಆಫ್ ಮಹಾರಾಷ್ಟ್ರ-20, ಕೆನರಾ ಬ್ಯಾಂಕ್-675, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ-47, ಇಂಡಿಯನ್ ಓವರ್‌ಸೀಸ್ ಬ್ಯಾಂಕ್-44, ಪಂಜಾಬ್ ನ್ಯಾಶನಲ್ ಬ್ಯಾಂಕ್-6, ಪಂಜಾಬ್ & ಸಿಂಧ್ ಬ್ಯಾಂಕ್-30, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ-50 ಹುದ್ದೆಗಳಿವೆ ಎಂದು ಪ್ರಕಟಣೆ ತಿಳಿಸಿದೆ.
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತ ಇದೆ.
ಆಯ್ಕೆ ವಿಧಾನ
ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಪ್ರಿಲಿಮಿನರಿ ಪರೀಕ್ಷೆ ಅಕ್ಟೋಬರ್‌ನಲ್ಲಿ ಮತ್ತು ಮುಖ್ಯ ಪರೀಕ್ಷೆ ನವೆಂಬರ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಪರೀಕ್ಷಾ ಕೇಂದ್ರ ಇರಲಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.
IBPS Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://ibpsreg.ibps.in/crpcsaxvjl25/) - ಹೆಸರು ನೋಂದಾಯಿಸಿ.
- ಎಚ್ಚರಿಕೆಯಿಂದ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್ ಮಾಡಿ.
- ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ ವಿಳಾಸ: https://ibps.in/ಗೆ ಭೇಟಿ ನೀಡಿ.