IDBI Bank Recruitment 2026: ಐಡಿಬಿಐ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; 33 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಐಡಿಬಿಐ ಬ್ಯಾಂಕ್ 33 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮಾರ್ಚ್ 25ರಂದು ಆರಂಭವಾಗಿದ್ದು, ಏಪ್ರಿಲ್ 8ರವರೆಗೆ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ವಯೋಮಿತಿ, ಅರ್ಹತೆಗಳ ಕುರಿತಂತೆ ಹೆಚ್ಚಿನ ವಿವರ ಇಲ್ಲಿದೆ.
ಎಐ ಚಿತ್ರ -
ಬೆಂಗಳೂರು, ಏ. 2: ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೊಂದು (Bank Jobs) ಸಿಹಿ ಸುದ್ದಿ ಇದ್ದು, ಐಡಿಬಿಐ (IDBI) ನೇಮಕಾತಿ ಅಧಿಸೂಚನೆ ಹೊರಡಿಸಿದೆ. ದೇಶದ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು(Job Alert) ಭರ್ತಿ ಮಾಡಲು ಬ್ಯಾಂಕ್ ಮುಂದಾಗಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ವೃತ್ತಿ ಪ್ರಾರಂಭಿಸಬೇಕೆಂದು ಕನಸು ಕಾಣುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ವಯೋಮಿತಿ, ಅರ್ಹತೆಗಳ ಕುರಿತಂತೆ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ಈ ನೇಮಕಾತಿಯಡಿಯಲ್ಲಿ ಒಟ್ಟು 33 ಹುದ್ದೆಗಳು ಲಭ್ಯವಿದ್ದು, ವಿಭಿನ್ನ ವಿಭಾಗಗಳಲ್ಲಿ ಹಂಚಿಕೆ ಮಾಡಲಾಗಿದೆ:
ಐಟಿ & ಎಂಐಎಸ್ – 19 ಹುದ್ದೆಗಳು
ಸೆಕ್ಯುರಿಟಿ ಆಫೀಸರ್ (ಗ್ರೇಡ್-ಡಿ) – 8 ಹುದ್ದೆಗಳು
ರಿಸ್ಕ್ ಮ್ಯಾನೇಜ್ಮೆಂಟ್ (ಇನ್ಫರ್ಮೇಶನ್ ಸಿಸ್ಟಮ್ಸ್) – 4 ಹುದ್ದೆಗಳು
ಆಡಿಟ್ (ಇನ್ಫರ್ಮೇಶನ್ ಸಿಸ್ಟಮ್ಸ್, ಗ್ರೇಡ್-ಸಿ) – 2 ಹುದ್ದೆಗಳು
ವಿದ್ಯಾರ್ಹತೆ
- ಐಟಿ ಹಾಗೂ ಎಂಐಎಸ್ ಹುದ್ದೆಗಳಿಗೆ ಕಂಪ್ಯೂಟರ್ ಸೈನ್ಸ್, ಐಟಿ ಅಥವಾ ಎಲೆಕ್ಟ್ರಾನಿಕ್ಸ್‌ನಲ್ಲಿ ಪದವಿ ಕಡ್ಡಾಯವಾಗಿದ್ದು, ಸ್ನಾತಕೋತ್ತರ ಪದವೀಧರರಿಗೆ ಆದ್ಯತೆ.
- ರಿಸ್ಕ್ ಮತ್ತು ಆಡಿಟ್ ವಿಭಾಗಗಳಿಗೆ ಸಂಬಂಧಿತ ತಾಂತ್ರಿಕ ಪದವಿ ಪಡೆದಿರಬೇಕು.
- ಸೆಕ್ಯುರಿಟಿ ಆಫೀಸರ್ ಹುದ್ದೆಗೆ 12ನೇ ತರಗತಿ ಅಥವಾ ಡಿಪ್ಲೊಮಾ ಶಿಕ್ಷಣ ಪೂರ್ಣಗೊಳಿಸಿರಬೇಕು.
ಅನುಭವ ಕಡ್ಡಾಯ
- ಗ್ರೇಡ್ ಡಿ ಹುದ್ದೆಗಳಿಗೆ ಕನಿಷ್ಠ 10 ವರ್ಷ ಅನುಭವ
- ಗ್ರೇಡ್ ಸಿ ಹುದ್ದೆಗಳಿಗೆ 7 ವರ್ಷ ಅನುಭವ
- ಗ್ರೇಡ್ ಬಿ ಹುದ್ದೆಗಳಿಗೆ 4 ವರ್ಷ ಅನುಭವ
- ಸೆಕ್ಯುರಿಟಿ ಆಫೀಸರ್ ಹುದ್ದೆಗೆ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಕನಿಷ್ಠ 15 ವರ್ಷ ಜೆಸಿಒ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿರಬೇಕು
ವಯೋಮಿತಿ
ಅಭ್ಯರ್ಥಿಗಳ ವಯಸ್ಸು 25ರಿಂದ 45 ವರ್ಷಗಳೊಳಗೆ ಇರಬೇಕು. ಸರ್ಕಾರದ ನಿಯಮಾನುಸಾರ ಎಸ್‌ಸಿ, ಎಸ್‌ಟಿ, ಓಬಿಸಿ ಮತ್ತು ಇತರ ಮೀಸಲಾತಿ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ
ವೇತನ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,24,000 ರುಪಾಯಿಯಿಂದ 1,97,000 ರುಪಾಯಿವರೆಗೆ ವೇತನ ದೊರೆಯಲಿದೆ. ಜತೆಗೆ ಡಿಎ, ಎಚ್‌ಆರ್‌ಎ, ವೈದ್ಯಕೀಯ ಸೌಲಭ್ಯಗಳು, ನಿವೃತ್ತಿ ಪ್ರಯೋಜನಗಳು ಮತ್ತು ಇತರ ಭತ್ಯೆಗಳು ಕೂಡ ಲಭ್ಯ.
ಅರ್ಜಿ ಶುಲ್ಕ
ಸಾಮಾನ್ಯ / ಓಬಿಸಿ / ಇಡಬ್ಲ್ಯುಎಸ್ ಅಭ್ಯರ್ಥಿಗಳು -1,050 ರುಪಾಯಿ, ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು - 250 ರುಪಾಯಿ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹಲವು ಹಂತಗಳಲ್ಲಿ ನಡೆಯಲಿದೆ:
- ಅರ್ಜಿಗಳ ಶಾರ್ಟ್‌ಲಿಸ್ಟಿಂಗ್
- ಗುಂಪು ಚರ್ಚೆ (Group Discussion)
- ವೈಯಕ್ತಿಕ ಸಂದರ್ಶನ (Interview)
- ದಾಖಲೆ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಈಗಾಗಲೇ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅಭ್ಯರ್ಥಿಗಳು ಏಪ್ರಿಲ್ 8ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಐಡಿಬಿಐ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ idbibank.inಗೆ ಭೇಟಿ ನೀಡಬೇಕು. ಆನ್‌ಲೈನ್‌ನಲ್ಲಿ ಅರ್ಜಿ ಫಾರ್ಮ್ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು.
ಗಮನಿಸಬೇಕಾದ ಪ್ರಮುಖ ಅಂಶಗಳು
- ಅರ್ಜಿ ಸಲ್ಲಿಸುವ ಮೊದಲು ಅರ್ಹತಾ ಮಾನದಂಡಗಳನ್ನು ಪರಿಶೀಲಿಸಬೇಕು
- ಎಲ್ಲ ದಾಖಲೆಗಳನ್ನು ಸರಿಯಾಗಿ ಅಪ್‌ಲೋಡ್ ಮಾಡಬೇಕು
- ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿ ಅರ್ಜಿ ಸಲ್ಲಿಸುವುದು ಉತ್ತಮ
- ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದುವುದು ಅಗತ್ಯ