IDBI Recruitment 2026: ಐಡಿಬಿಐ ಬ್ಯಾಂಕ್‌ನಲ್ಲಿದೆ ಬರೋಬ್ಬರಿ 1,300 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
Bank Jobs: ದೇಶದ ಪ್ರತಿಷ್ಠಿತ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ಬರೋಬ್ಬರಿ 1,300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮಾರ್ಚ್ 19.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಮಾ. 12: ಬ್ಯಾಂಕ್ ಉದ್ಯೋಗ (Bank Jobs) ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್. ದೇಶದ ಪ್ರತಿಷ್ಠಿತ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (Industrial Development Bank of India) ಖಾಲಿ ಇರುವ ಬರೋಬ್ಬರಿ 1,300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IDBI Recruitment 2026). ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು (Job Guide). ಅಪ್ಲೈ ಮಾಡಲು ಕೊನೆಯ ದಿನ ಮಾರ್ಚ್ 19.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ (ಗ್ರೇಡ್ ‘O’) 1,100, ಅಸಿಸ್ಟಂಟ್ ಮ್ಯಾನೇಜರ್ 200 ಹುದ್ದೆಗಳಿವೆ. ಕರ್ನಾಟಕದಲ್ಲಿಯೇ 75 ಹುದ್ದೆ ಖಾಲಿ ಇದೆ. ದೇಶದ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಕಂಪ್ಯೂಟರ್ ಜ್ಞಾನ ತಿಳಿದಿರಬೇಕು. ಸ್ಥಳೀಯ ಭಾಷೆಯಲ್ಲಿ ಪರಿಣಿತಿ ಹೊಂದಿರಬೇಕು. ಜತೆಗೆ 2 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.
ವಯೋಮಿತಿ
ಐಡಿಬಿಐ ಅಧಿಸೂಚನೆ ಪ್ರಕಾರ ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಡಿ ಅಭ್ಯರ್ಥಿಗಳು 250 ರೂ. ಮತ್ತು ಇತರ ಎಲ್ಲ ಅಭ್ಯರ್ಥಿಗಳು 1,050 ರೂ. ಆನ್‌ಲೈನ್ ಮೂಲಕ ಪಾವತಿಸಬೇಕು.
ಎಸ್‌ಎಸ್‌ಸಿ ಜಿಡಿ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಮುಂದೂಡಿಕೆ
ಆಯ್ಕೆ ವಿಧಾನ
ಆನ್‌ಲೈನ್ ಟೆಸ್ಟ್, ದಾಖಲಾತಿ ಪರಿಶೀಲನೆ, ಪ್ರೀ-ರಿಕ್ರೂಟ್‌ಮೆಂಟ್ ಮೆಡಿಕಲ್ ಟೆಸ್ಟ್, ಸಂದರ್ಶನದ ಮೂಲಕ ಅಭ್ಯರ್ಥಿಗಳ ಅಯ್ಕೆ ನಡೆಯಲಿದೆ. ಲಾಜಿಕಲ್ ರೀಸನಿಂಗ್, ಡಾಟಾ ಅನಾಲಿಸಿಸ್ & ಇಂಟರ್‌ಪ್ರೆಟೇಶನ್, ಇಂಗ್ಲಿಷ್ ಭಾಷೆ, ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್, ಜನರಲ್/ಎಕಾನಮಿ/ಬ್ಯಾಂಕಿಂಗ್ ವಿಷಯಗಳ ಪ್ರಶ್ನೆ ಇರಲಿದೆ.
ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಯ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಯ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://ibpsreg.ibps.in/idbijamfeb26/) - ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://ibpsreg.ibps.in/idbiamnov25/) - ಹೆಸರು ನೋಂದಾಯಿಸಿ.
- ಹೊಸ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್ ಅಪ್ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್ಲೋಡ್ ಮಾಡಿಟ್ಟುಕೊಳ್ಳಿ
ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ ವಿಳಾಸ: idbibank.inಗೆ ಭೇಟಿ ನೀಡಿ.