ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IB Recruitment 2025: ಗುಪ್ತಚರ ಇಲಾಖೆಯಲ್ಲಿದೆ ಬರೋಬ್ಬರಿ 4,987 ಹುದ್ದೆ; 10ನೇ ತರಗತಿ ಪಾಸಾದವರು ಅಪ್ಲೈ ಮಾಡಿ

Job Guide: ಭಾರತ ಸರ್ಕಾರದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 4,987 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೆಕ್ಯುರಿಟಿ ಅಸಿಸ್ಟೆಂಟ್‌/ಎಕ್ಸಿಕ್ಯುಟಿವ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 17.

ಗುಪ್ತಚರ ಇಲಾಖೆಯಲ್ಲಿ ಖಾಲಿ ಇದೆ ಬರೋಬ್ಬರಿ 4,987 ಹುದ್ದೆ

ಸಾಂದರ್ಭಿಕ ಚಿತ್ರ.

Ramesh B Ramesh B Jul 28, 2025 5:10 PM

ಹೊಸದಿಲ್ಲಿ: ಒಂದೊಳ್ಳೆ ಸರ್ಕಾರಿ ಹುದ್ದೆ ಹೊಂದಬೇಕು ಎಂದು ಕನಸು ಕಾಣುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ನೀವು 10ನೇ ತರಗತಿ ಪಾಸಾಗಿದ್ದರೆ ಸಾಕು ಅರ್ಜಿ ಸಲ್ಲಿಸಬಹುದು. ಭಾರತ ಸರ್ಕಾರದ ಗುಪ್ತಚರ ಇಲಾಖೆ (Intelligence Bureau)ಯಲ್ಲಿ ಬರೋಬ್ಬರಿ 4,987 ಹುದ್ದೆ ಖಾಲಿ ಇದೆ (IB Recruitment 2025). ಸೆಕ್ಯುರಿಟಿ ಅಸಿಸ್ಟೆಂಟ್‌/ಎಕ್ಸಿಕ್ಯುಟಿವ್‌ ಹುದ್ದೆ (Security Assistant/Executive Posts) ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕು (Job Guide). ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 17.

ವಿದ್ಯಾರ್ಹತೆ

ಅಧಿಸೂಚನೆ ಪ್ರಕಾರ ದೇಶದ ಯಾವುದೇ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸಾದವರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರು. ಜತೆಗೆ ಅರ್ಜಿ ಸಲ್ಲಿಸುವ ರಾಜ್ಯದ ಭಾಷೆ ತಿಳಿದಿರಬೇಕು. ಕರ್ನಾಟಕದಲ್ಲಿ ಒಟ್ಟು 204 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಲ್ಲ ಅಭ್ಯರ್ಥಿಗಳು ಪ್ರೊಸೆಸಿಂಗ್‌ ಫೀಸ್‌ ಆಗಿ 550 ರೂ. ಪಾವತಿಸಬೇಕು. ಇನ್ನು ಪರೀಕ್ಷಾ ಶುಲ್ಕವಾಗಿ ಸಾಮಾನ್ಯ/ಇಡಬ್ಲ್ಯುಎಸ್‌/ಒಬಿಸಿ ಅಭ್ಯರ್ಥಿಗಳು 100 ರೂ. ಪಾವತಿಸಬೇಕು (ಒಟ್ಟು 650 ರೂ.). ಇನ್ನು ಎಸ್‌ಸಿ/ಎಸ್‌ಟಿ/ಮಹಿಳೆ ಮತ್ತು ಮಾಜಿ ಸೈನಿಕರಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನೂ ಓದಿ: IBPS Recruitment: ಬ್ಯಾಂಕ್‌ ಉದ್ಯೋಗಾರ್ಥಿಗಳಿಗೆ ಗುಡ್‌ನ್ಯೂಸ್‌; 6,215 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ IBPS

ಆಯ್ಕೆ ವಿಧಾನ

ಆನ್‌ಲೈನ್‌ ಪರೀಕ್ಷೆ, ವಿವರಣಾತ್ಮಕ ಪರೀಕ್ಷೆ, ವೈಯಕ್ತಿಕ ಸಂದರ್ಶನ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 21,700 ರೂ. - 69,100 ರೂ. ಮಾಸಿಕ ವೇತನ ದೊರೆಯಲಿದೆ. ಕರ್ನಾಟಕದಲ್ಲಿ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ಪರೀಕ್ಷಾ ಕೇಂದ್ರವಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

IB Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (https://cdn.digialm.com/EForms/configuredHtml/1258/94478/Index.html)
  • ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ. ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: mha.gov.inಗೆ ಭೇಟಿ ನೀಡಿ ಅಥವಾ ಹೆಲ್ಪ್‌ಲೈನ್‌ ನಂಬರ್‌: 022-61087512ಕ್ಕೆ ಕರೆ ಮಾಡಿ.