IOB Recruitment 2025: ಇಂಡಿಯನ್ ಓವರ್‌ಸಿಸ್ ಬ್ಯಾಂಕ್‌ನಲ್ಲಿದೆ 400 ಹುದ್ದೆ; ಹೀಗೆ ಅಪ್ಲೈ ಮಾಡಿ
Job Guide: ಬ್ಯಾಂಕ್ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುವವರು ನೀವಾಗಿದ್ದರೆ ಇಲ್ಲಿದೆ ಗುಡ್‌ನ್ಯೂಸ್. ದೇಶದ ಪ್ರತಿಷ್ಠಿತ ಇಂಡಿಯನ್ ಓವರ್‌ಸಿಸ್ ಬ್ಯಾಂಕ್ ದೇಶಾದ್ಯಂತ ಖಾಲಿ ಇರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 400 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು: ಬ್ಯಾಂಕ್ ಉದ್ಯೋಗ (Bank Jobs) ಹೊಂದಬೇಕು ಎನ್ನುವ ಕನಸು ಕಾಣುವವರು ನೀವಾಗಿದ್ದರೆ ಇಲ್ಲಿದೆ ಗುಡ್‌ನ್ಯೂಸ್. ದೇಶದ ಪ್ರತಿಷ್ಠಿತ ಇಂಡಿಯನ್ ಓವರ್‌ಸಿಸ್ ಬ್ಯಾಂಕ್ (Indian Overseas Bank) ದೇಶಾದ್ಯಂತ ಖಾಲಿ ಇರುವ ಲೋಕಲ್ ಬ್ಯಾಂಕ್ ಆಫೀಸರ್ (Local Bank Officer) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IOB Recruitment 2025). ಒಟ್ಟು 400 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ತಿಳಿಸಿದೆ (Job Guide). ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಮೇ 31.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ತಮಿಳುನಾಡು - 260
ಒಡಿಶಾ - 10
ಪಂಜಾಬ್ - 21
ಪಶ್ಚಿಮ ಬಂಗಾಳ - 34
ಗುಜರಾತ್ - 30
ಮಹಾರಾಷ್ಟ್ರ - 45 ಹುದ್ದೆಗಳಿವೆ.
ಅಧಿಸೂಚನೆ ಪ್ರಕಾರ ದೇಶದ ಯಾವುದೇ ವಿಶ್ವ ವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಗಮನಿಸಿ, ಒಬ್ಬರು 1 ರಾಜ್ಯದಿಂದ ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ರಾಜ್ಯದ ಸ್ಥಳೀಯ ಭಾಷೆ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು ಎಂದು ಅಧಿಸೂನೆಯಲ್ಲಿ ವಿವರಿಸಲಾಗಿದೆ.
ವಯೋಮಿತಿ
ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು 175 ರೂ., ಸಾಮಾನ್ಯ/ಇಡಬ್ಲ್ಯುಎಸ್/ಒಬಿಸಿ ಅಭ್ಯರ್ಥಿಗಳು 850 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್ ಎಂದು ಪ್ರಕಟಣೆ ತಿಳಿಸಿದೆ.
ಆಯ್ಕೆ ವಿಧಾನ
ಆನ್‌ಲೈನ್ ಪರೀಕ್ಷೆ, ಭಾಷಾ ಪ್ರಾವೀಣ್ಯ ಪರೀಕ್ಷೆ (Language Proficiency Test), ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯಥಿಗಳಿಗೆ 48,480 ರೂ. - 85,920 ರೂ. ಮಾಸಿಕ ವೇತನ ದೊರೆಯಲಿದೆ.
ಈ ಸುದ್ದಿಯನ್ನೂ ಓದಿ: BOB Recruitment 2025: 10ನೇ ತರಗತಿ ಪಾಸಾದವರಿಗೆ ಬಂಪರ್ ಚಾನ್ಸ್; ಬ್ಯಾಂಕ್ ಆಫ್ ಬರೋಡಾದಲ್ಲಿದೆ ಬರೋಬ್ಬರಿ 500 ಹುದ್ದೆ
IOB Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://ibpsonline.ibps.in/ioblboapr25/) - ನಿಮ್ಮ ಹೆಸರು ನೋಂದಾಯಿಸಿ.
- ಹೊಸ ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
- ಎಚ್ಚರಿಕೆಯಿಂದ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ಡಾಕ್ಯುಮೆಂಟ್, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
ಹೆಚ್ಚಿನ ವಿವರಗಳಿಗೆ ಇಂಡಿಯನ್ ಓವರ್‌ಸಿಸ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ ವಿಳಾಸ: iob.inಗೆ ಭೇಟಿ ನೀಡಿ.