Sainik School Recruitment: ವಿಜಯಪುರ ಸೈನಿಕ ಶಾಲೆಯಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಯ ಮಾಹಿತಿ ಇಲ್ಲಿದೆ
ನೀವು ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಹಾಗೂ 10ನೇ ತರಗತಿ ಉತ್ತೀರ್ಣರಾಗಿದ್ದು, ಆಕರ್ಷಕ ಸಂಬಳದ ಉದ್ಯೋಗಾವಕಾಶಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಸುವರ್ಣವಾಕಾಶ. ವಿಜಯಪುರ ಸೈನಿಕ ವಸತಿ ಶಾಲೆಯಲ್ಲಿನ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂದರ್ಶನ, ಸ್ಕ್ರೀನಿಂಗ್ ಟೆಸ್ಟ್ ಮೂಲಕ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 16.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಜ. 9: ವಿಜಯಪುರ ಸೈನಿಕ ಶಾಲೆಯಲ್ಲಿ (Sainik School Bijapur) ಖಾಲಿ ಇರುವ ಹುದ್ದೆಗಳನ್ನು(Job) ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ವಿವಿಧ ಹುದ್ದೆಗಳ ಭರ್ತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಪಿಜಿಟಿ, ಟಿಜಿಟಿ ಸೇರಿದಂತೆ ಒಟ್ಟು 18 ಹುದ್ದೆಗಳ ಭರ್ತಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 16 ಆಗಿದ್ದು, ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳನ್ನು ತಾತ್ಕಾಲಿಕ ಒಪ್ಪಂದ ಅಥವಾ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದ್ದು, ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಖಾಲಿ ಇರುವ ಹುದ್ದೆಗಳ ವಿವರ, ವೇತನ, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರ
ಒಟ್ಟು18 ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯಲಿದ್ದು, ಪಿಜಿಟಿ ವಿಭಾಗದಲ್ಲಿ- 2, ಟಿಜಿಟಿ ವಿಭಾಗದಲ್ಲಿ- 7, ಸಂಗೀತ ಶಿಕ್ಷಕರು ವಿಭಾಗದಲ್ಲಿ- 1, ಸಮಾಲೋಚಕರು ವಿಭಾಗದಲ್ಲಿ- 1, ಕ್ರಾಫ್ಟ್ ಇನ್ಸ್‌ಟ್ರಕ್ಟರ್ ವಿಭಾಗದಲ್ಲಿ- 1, ವಾರ್ಡ್ ಬಾಯ್ಸ್ ವಿಭಾಗದಲ್ಲಿ- 4, ಪಿಇಎಂ/ ಪಿಟಿಐ ವಿಭಾಗದಲ್ಲಿ- 1 ಹಾಗೂ ನರ್ಸಿಂಗ್ ಸಿಸ್ಟರ್ ವಿಭಾಗದಲ್ಲಿ- 1 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ
ಪಿಜಿಟಿ, ಟಿಜಿಟಿ, ಸಂಗೀತ ಶಿಕ್ಷಕರು ಹಾಗೂ ಸಮಾಲೋಚಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿರಬೇಕು. ಕ್ರಾಫ್ಟ್ ಇನ್ಸ್‌ಟ್ರಕ್ಟರ್ ಹುದ್ದೆಗೆ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ನರ್ಸಿಂಗ್ ಸಿಸ್ಟರ್ ಹುದ್ದೆಗೆ ಬಿಎಸ್‌ಸಿ ಪದವಿ ಮತ್ತು ವಾರ್ಡ್ ಬಾಯ್ ಹಾಗೂ ಪಿಇಎಂ ಹುದ್ದೆಗಳಿಗೆ ಕನಿಷ್ಠ 10ನೇ ತರಗತಿ ಉತ್ತೀರ್ಣತೆ ಇರಬೇಕು.
ವಯೋಮಿತಿ
ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷವಾಗಿರಬೇಕು. ಪಿಜಿಟಿ ಹುದ್ದೆಗೆ ಗರಿಷ್ಠ 40 ವರ್ಷ, ಉಳಿದ ಹುದ್ದೆಗಳಿಗೆ ಗರಿಷ್ಠ 35 ವರ್ಷ ಮಿತಿಯಿದೆ. ವಾರ್ಡ್ ಬಾಯ್ಸ್, ಪಿಇಎಂ/ಪಿಟಿಐ ಮತ್ತು ನರ್ಸಿಂಗ್ ಸಿಸ್ಟರ್ ಹುದ್ದೆಗಳಿಗೆ ಗರಿಷ್ಠ ವಯೋಮಿತಿ 50 ವರ್ಷವನ್ನು ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
ನಿಗದಿತ ಅರ್ಜಿ ನಮೂನೆಯನ್ನು ಆನ್‌ಲೈನ್ ಮೂಲಕ ಪಡೆದು ಭರ್ತಿ ಮಾಡಿ, ಕೆಳಗೆ ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು. ಅರ್ಜಿದಾರರು 500 ರುಪಾಯಿ ಅರ್ಜಿ ಶುಲ್ಕವನ್ನು ಡಿಮಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು. ಜತೆಗೆ 55 ರುಪಾಯಿ ಮೌಲ್ಯದ ಅಂಚೆ ಚೀಟಿಯನ್ನು ಪೋಸ್ಟಲ್ ಚಾರ್ಜ್ ಆಗಿ ಅಂಟಿಸಬೇಕು.
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ನೀಡಲಾದ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿಕೊಡುವಂತೆ ತಿಳಿಸಲಾಗಿದೆ.
ಪ್ರಾಂಶುಪಾಲರು, ಸೈನಿಕ್ ಶಾಲೆ, ಬಿಜಾಪುರ – 586108.
ಅರ್ಜಿಯಲ್ಲಿ ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಬೇಕು. ಅರ್ಜಿಗಳನ್ನು ಅಂಚೆ ಮೂಲಕ ಮಾತ್ರ ಸ್ವೀಕರಿಸಲಾಗುತ್ತದೆ; ಖುದ್ದು ಅರ್ಜಿ ಸಲ್ಲಿಕೆಗೆ ಅವಕಾಶ ಇಲ್ಲ.
ಪ್ರಮುಖ ದಿನಾಂಕಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಡಿಸೆಂಬರ್ 27ರಿಂದ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 16. ಹೆಚ್ಚಿನ ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆಗಾಗಿ ಅಭ್ಯರ್ಥಿಗಳುssbj.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.