ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

KEA Group C Exam Hall Ticket: ಜ.25ರ ಎಸ್‌ಡಿಎ ಸೇರಿ ಗ್ರೂಪ್‌-ಸಿ ಹುದ್ದೆಗಳ ಪರೀಕ್ಷೆ ಪ್ರವೇಶ ಪತ್ರ ಪ್ರಕಟ

KEA Recruitment Exam: ಕೃಷಿ ಮಾರುಕಟ್ಟೆ ಇಲಾಖೆ, ಬಿಡಿಎ, ಬಿಡಬ್ಲ್ಯುಎಸ್‌ಎಸ್‌ಬಿ, ಕೆಕೆಆರ್‌ಟಿಸಿ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ, ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಗ್ರೂಪ್‌-ಸಿ ಹುದ್ದೆಗಳಿಗೆ ಜ.25ರಂದು ನೇಮಕಾತಿ ಪರೀಕ್ಷೆ ನಡೆಯಲಿದೆ.

ಜ.25ರ ಗ್ರೂಪ್‌-ಸಿ ಹುದ್ದೆಗಳ ಪರೀಕ್ಷೆ ಪ್ರವೇಶ ಪತ್ರ ಪ್ರಕಟ

ಸಾಂದರ್ಭಿಕ ಚಿತ್ರ -

Prabhakara R
Prabhakara R Jan 21, 2026 6:47 PM

ಬೆಂಗಳೂರು: ಜನವರಿ 25ಕ್ಕೆ ನಿಗದಿಯಾಗಿರುವ ವಿವಿಧ ಇಲಾಖೆಗಳ ಎಸ್‌ಡಿಎ ಸೇರಿ ಗ್ರೂಪ್‌-ಸಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರವನ್ನು (Group C Exam Hall Ticket) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ(KEA) ಹಾಲ್‌ ಟಿಕೆಟ್‌ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಕೃಷಿ ಮಾರುಕಟ್ಟೆ ಇಲಾಖೆ (ಮಾರಾಟ ಸಹಾಯಕರು-ಎಸ್‌ಡಿಎ), ಬಿಡಿಎ (ಎಸ್‌ಡಿಎ), ಬಿಡಬ್ಲ್ಯುಎಸ್‌ಎಸ್‌ಬಿ (ಕಿರಿಯ ಸಹಾಯಕ, ಮೀಟರ್ ರೀಡರ್, ಎರಡನೇ ದರ್ಜೆ ಉಗ್ರಾಣ ಪಾಲಕ), ಕೆಕೆಆರ್‌ಟಿಸಿ (ಕಂಡಕ್ಟರ್), ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ (KSSIDC) & ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ (ಕಿರಿಯ ಸಹಾಯಕ) ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ATI) ಹುದ್ದೆಗಳ ನೇಮಕಾತಿಗೆ - ಪತ್ರಿಕೆ 1 (GK) ಪರೀಕ್ಷೆ ಜ.25 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30 ರವರೆಗೆ ಮತ್ತು ಪತ್ರಿಕೆ 2 (KEC) ಅದೇ ದಿನ ಮಧ್ಯಾಹ್ನ 02:30 ರಿಂದ ಸಂಜೆ 04:30 ರವರೆಗೆ ನಡೆಯಲಿದೆ.

ಹಾಲ್‌ ಟಿಕೆಟ್‌ ಪಡೆಯುವುದು ಹೇಗೆ?

  • ಕೆಇಎ ವೆಬ್‌ಸೈಟ್‌ಗೆ (https://cetonline.karnataka.gov.in/kea/indexnew) ಭೇಟಿ ನೀಡಿ.
  • ಮುಖಪುಟದಲ್ಲಿ ನೇಮಕಾತಿ ಕೆಟಗರಿ ಮೇಲೆ ಕ್ಲಿಕ್‌ ಮಾಡಿ.
  • ನಂತರ ವಿವಿಧ ಇಲಾಖೆಗಳ ನೇಮಕಾತಿ (Non-HK) ಆಯ್ಕೆ ಒತ್ತಿ.
  • ಕೃಷಿ ಇಲಾಖೆ ಸೇರಿ ವಿವಿಧ ಇಲಾಖೆಗಳ ಪ್ರವೇಶ ಪತ್ರ ಲಿಂಕ್ ಕ್ಲಿಕ್ಕಿಸಿದರೆ, ಪಿಡಿಎಫ್‌ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

RBI Recruitment 2026: ಆರ್‌ಬಿಐಯಲ್ಲಿದೆ ಬರೋಬ್ಬರಿ 572 ಹುದ್ದೆ; ಎಸ್‌ಎಸ್‌ಎಲ್‌ಸಿ ಪಾಸಾಗಿದ್ದರೆ ಸಾಕು ಅಪ್ಲೈ ಮಾಡಿ

ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಪ್ರವೇಶ ಪರೀಕ್ಷೆಗೆ ವಸ್ತ್ರಸಂಹಿತೆ

ಕೆಇಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಪ್ರವೇಶ ಪರೀಕ್ಷೆಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ.

ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ:

  • ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸಲಾಗುವುದಿಲ್ಲ. ಹೀಗಾಗಿ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸಬೇಕು. ಸಾಧ್ಯವಾದಷ್ಟು ಕಾಲರ್‌ರಹಿತ ಸಾಧಾರಣ ಶರ್ಟ್/ ಟಿ-ಶರ್ಟ್ ಧರಿಸಲು ಆದ್ಯತೆ ನೀಡುವುದು.
  • ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ / ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮವನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.
  • ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು, ಅಂದರೆ ಜಿಪ್ (ZIP) ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು.
  • ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು.
  • ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ

  • ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
  • ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಮತ್ತು ಮೇಲೆ ಉಲ್ಲೇಖಿಸಿರುವ ಬಗೆಯಲ್ಲಿ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
  • ಎತ್ತರವಾದ ಹಿಮ್ಮಡಿಯ ಶೂಗಳನ್ನು/ ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
  • ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).

ನಿಷೇಧಿತ ವಸ್ತುಗಳ ಪಟ್ಟಿ:

  • ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜತೆಗೆ, ಕೆಳಗೆ ಪಟ್ಟಿ ಮಾಡಲಾದ ಯಾವುದೇ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಖಚಿತಪಡಿಸಿಕೊಳ್ಳಬೇಕು. ಹೋಗದಂತೆ, ಅಭ್ಯರ್ಥಿಗಳು
  • ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‌ಗಳು, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.
  • ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗೂ ತಿನ್ನುವುದನ್ನು ನಿಷೇಧಿಸಲಾಗಿದೆ, ಬಣ್ಣದ ಹಾಗೂ ಲೋಹದ ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ.
  • ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು.
  • ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ.
  • ತಲೆಯ ಮೇಲೆ ಟೋಪಿ/ HAT ಧರಿಸುವಂತಿಲ್ಲ.
  • ಯಾವುದೇ ರೀತಿಯ ಮುಖ ಮುಚ್ಚುವಂತ ಮಾಸ್ಕನ್ನು ಧರಿಸುವಂತಿಲ್ಲ.