ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

KAS Exam Age Relaxation: ಕೆಎಎಸ್‌ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; 5 ವರ್ಷ ವಯೋಮಿತಿ ಸಡಿಲಿಸಿ ಕೆಪಿಎಸ್‌ಸಿ ಆದೇಶ

ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಜನವರಿಯಲ್ಲಿ ಒಪ್ಪಿಗೆ ನೀಡಿತ್ತು. ನಂತರ ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು. ಇದೀಗ ಕೆಎಎಸ್‌ ಹುದ್ದೆಗಳ ನೇಮಕಾತಿಗೆ ವಯೋಮಿತಿ ಸಡಿಲಿಕೆ ಮಾಡಿರುವುದಾಗಿ ಕೆಪಿಎಸ್‌ಸಿ ಮಾಹಿತಿ ನೀಡಿದೆ.

ಕೆಎಎಸ್‌ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; 5 ವರ್ಷ ವಯೋಮಿತಿ ಸಡಿಲಿಕೆ

-

Prabhakara R
Prabhakara R Aug 13, 2026 9:34 PM

ಬೆಂಗಳೂರು: ಕೆಎಎಸ್‌ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್‌ 'ಎ' ಮತ್ತು ಗ್ರೂಪ್ 'ಬಿ' ವೃಂದದ ಒಟ್ಟು 319 ಹುದ್ದೆಗಳ ಭರ್ತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ (KAS Exam Age Relaxation) ನೀಡುವುದಾಗಿ ರಾಜ್ಯ ಸರ್ಕಾರ ಇತ್ತೀಚೆಗೆ ಘೋಷಿಸಿತ್ತು. ಇದೀಗ ವಯೋಮಿತಿ ಸಡಿಲಿಕೆ ಮಾಡಿರುವ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗವು (KPSC) ಅಧಿಕೃತ ಪ್ರಕಟಣೆ ಹೊರಡಿಸಿದೆ.

ಈ ಕುರಿತು ಕೆಪಿಎಸ್‌ಸಿ ಕಾರ್ಯದರ್ಶಿ ಜ್ಯೋತಿ ಕೆ. ಅವರು ಗುರುವಾರ ಪ್ರಕಟಣೆ ಹೊರಡಿಸಿದ್ದಾರೆ. ಉಳಿಕೆ ಮೂಲ ವೃಂದದ 297 ಹಾಗೂ ಹೈದರಾಬಾದ್-ಕರ್ನಾಟಕ (ಕಲ್ಯಾಣ ಕರ್ನಾಟಕ) ವೃಂದದ 22 ಹುದ್ದೆಗಳು ಸೇರಿದಂತೆ ಒಟ್ಟು 319 ಕೆಎಎಸ್‌ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಜುಲೈ 31, 2026 ರಂದು ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿತ್ತು.

ನಿಯಮಾನುಸಾರ ನಿಗದಿಪಡಿಸಿರುವ ವಯೋಮಿತಿಗೆ ಸರ್ಕಾರದ ಆದೇಶದ ಅನ್ವಯ ಹೆಚ್ಚುವರಿಯಾಗಿ 05 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಅಳವಡಿಸಿಕೊಂಡು ಸರ್ಕಾರದಿಂದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಅದರಂತೆ ಸದರಿ ಹುದ್ದೆಗಳ ಅಧಿಸೂಚನೆಯಲ್ಲಿ ಕೆಳಕಂಡಂತೆ ವಯೋಮಿತಿಯನ್ನು ನಿಗದಿಪಡಿಸಲಾಗಿರುತ್ತದೆ.

ಕನಿಷ್ಠ ವಯೋಮಿತಿ: 21 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷ (ಈ ಹಿಂದೆ 35 ವರ್ಷವಿತ್ತು)
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: ಗರಿಷ್ಠ 43 ವರ್ಷ (ಈ ಹಿಂದೆ 38 ವರ್ಷವಿತ್ತು)
ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ: ಗರಿಷ್ಠ 45 ವರ್ಷ (ಈ ಹಿಂದೆ 40 ವರ್ಷವಿತ್ತು)

KAS Recruitment 2026: 319 ಕೆಎಎಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ; ನೇಮಕಾತಿಯ ಸಂಪೂರ್ಣ ವಿವರ ಇಲ್ಲಿದೆ

ರಾಜ್ಯ ಸರ್ಕಾರದ ಈ ನಿರ್ಧಾರದಿಂದಾಗಿ ವಯೋಮಿತಿ ಮೀರುತ್ತಿದ್ದ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಕೆಪಿಎಸ್‌ಸಿ ಪರೀಕ್ಷೆ ಬರೆಯಲು ಮತ್ತೊಂದು ಅವಕಾಶ ಲಭಿಸಿದಂತಾಗಿದೆ.