ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

MGNREGA Recruitment 2025: ಮನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರಿಗೆ ಅವಕಾಶ

ರಾಯಚೂರು ಜಿಲ್ಲಾ ಪಂಚಾಯತ್‌ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ, ವಯೋಮಿತಿ ಇತರೆ ಅರ್ಹತೆಗಳನ್ನು ತಿಳಿದು ಅರ್ಜಿ ಸಲ್ಲಿಸಿ.

ರಾಯಚೂರು ಜಿಲ್ಲಾ ಪಂಚಾಯತ್‌ನಲ್ಲಿದೆ ಉದ್ಯೋಗಾವಕಾಶ

ಸಾಂದರ್ಭಿಕ ಚಿತ್ರ -

Profile
Sushmitha Jain Dec 17, 2025 10:02 PM

ಬೆಂಗಳೂರು ಡಿ. 17: ರಾಯಚೂರು ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (Mahatma Gandhi National Rural Development Guarantee Act)ಯಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 9 ಹುದ್ದೆಗಳು (Jobs) ಖಾಲಿ ಇದ್ದು, ತಾಂತ್ರಿಕ ಸಂಯೋಜಕರು, ತಾಲೂಕು ಎಂಐಎಸ್ ಸಂಯೋಜಕರು, ಆಡಳಿತ ಸಹಾಯಕರ ಹಾಗೂ ಗಣಕಯಂತ್ರ ನಿರ್ವಾಹಕರು ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ನವೆಂಬರ್ 20ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 24ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಬೇಕಾದ ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಇಲ್ಲಿದೆ ಮಾಹಿತಿ.

ಹುದ್ದೆಗಳ ವಿವರ

ತಾಂತ್ರಿಕ ಸಂಯೋಜಕರು - 2
ತಾಲೂಕು ಎಂಐಎಸ್ ಸಂಯೋಜಕರು - 2
ಆಡಳಿತ ಸಹಾಯಕರು - 3
ಕಂಪ್ಯೂಟರ್ ನಿರ್ವಾಹಕರು - 2

ವಿದ್ಯಾರ್ಹತೆ

ತಾಂತ್ರಿಕ ಸಂಯೋಜಕರು ಮತ್ತು ತಾಲೂಕು ಎಂಐಎಸ್ ಸಂಯೋಜಕರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್‌ನಿಂದ ಕಡ್ಡಾಯವಾಗಿ ಬಿ.ಇ, ಬಿಟೆಕ್, ಬಿಸಿಎ, ಬಿಎಸ್ಸಿ ಪದವಿ ಪಡೆದಿರಬೇಕು. ಆಡಳಿತ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್‌ನಿಂದ ಕಡ್ಡಾಯವಾಗಿ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿರಬೇಕು ಹಾಗೂ ಕನ್ನಡ ಮತ್ತು ಇಂಗ್ಲಿಷ್‌ ಟೈಪಿಂಗ್ ಗೊತ್ತಿರಬೇಕು. ಕಂಪ್ಯೂಟರ್ ನಿರ್ವಾಹಕರು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್‌ನಿಂದ ಪದವಿ ಜತೆಗೆ ಕಂಪ್ಯೂಟರ್ ಹಾಗೂ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಜ್ಞಾನ ಹೊಂದಿರಬೇಕು.

ತುಮಕೂರು ಜಿಲ್ಲೆಯಲ್ಲಿದೆ ಬರೋಬ್ಬರಿ 946 ಉದ್ಯೋಗಾವಕಾಶ

ವೇತನ

ತಾಂತ್ರಿಕ ಸಂಯೋಜಕರಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 33 ಸಾವಿರ ರು. ವೇತನ ಹಾಗೂ 2,000 ರು. ಪ್ರಯಾಣ ಭತ್ಯೆಯನ್ನು ನಿಗದಿ ಮಾಡಲಾಗಿದೆ. ತಾಲೂಕು ಎಂಐಎಸ್ ಸಂಯೋಜಕರು ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ 28,000 ರು. ವೇತನ ನೀಡಲಾಗುತ್ತದೆ. ಆಡಳಿತ ಸಹಾಯಕರು ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ 22,000 ರು. ಸಂಬಳ ಸಿಗಲಿದೆ. ಕಂಪ್ಯೂಟರ್‌ ನಿರ್ವಾಹಕರು ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ 18,480 ರು. ಭತ್ಯೆ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಿತಿ 40 ವರ್ಷ ಮೀರಿರಬಾರದು. ಇನ್ನು ಹೊರಗುತ್ತಿಗೆ ಅವಧಿಗೆ ಈ ಹುದ್ದೆಗಳ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಗಳನ್ನು ಮೆರಿಟ್ ಮೇಲೆ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗೆ ಅಭ್ಯರ್ಥಿಗಳು ಜಿಲ್ಲಾಡಳಿತದ ಅಧಿಕೃತ ಜಾಲತಾಣದಲ್ಲಿ ಅರ್ಜಿ ಸಲ್ಲಿಸಬೇಕು. ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.