ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RRB Recruitment 2025: 10, 12ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್; ರೈಲ್ವೆ ನೇಮಕಾತಿ ಮಂಡಳಿಯಿಂದ 6,238 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿ ಖಾಲಿ ಇರುವ ಬರೋಬ್ಬರಿ 6,238 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಟೆಕ್ನಿಶಿಯನ್‌ ಹುದ್ದೆ ಇದಾಗಿದ್ದು, ಡಿಪ್ಲೊಮಾ, 10, 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜು. 28.

ರೈಲ್ವೆ ನೇಮಕಾತಿ ಮಂಡಳಿಯಿಂದ 6,238  ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ.

Profile Ramesh B Jun 29, 2025 3:27 PM

ಹೊಸದಿಲ್ಲಿ: ರೈಲ್ವೆ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಖಾಲಿ ಇರುವ ಬರೋಬ್ಬರಿ 6,238 ಹುದ್ದೆಗಳ ಭರ್ತಿಗೆ ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿ (Railway Recruitment Board) ಅರ್ಜಿ ಆಹ್ವಾನಿಸಿದೆ (Latest Railway Jobs). ಟೆಕ್ನಿಶಿಯನ್‌ ಹುದ್ದೆ ಇದಾಗಿದ್ದು, ಡಿಪ್ಲೊಮಾ, 10, 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು (RRB Recruitment 2025). ಉದ್ಯೋಗದ ಸ್ಥಳ: ದೇಶಾದ್ಯಂತ (Job Guide). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜು. 28.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಟೆಕ್ನಿಶಿಯಲ್‌ ಗ್ರೇಡ್‌-I ಸಿಗ್ನಲ್‌-183 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ, ಬಿ.ಎಸ್‌ಸಿ, ಬಿ.ಇ ಅಥವಾ ಬಿ.ಟೆಕ್‌

ಟೆಕ್ನಿಶಿಯಲ್‌ ಗ್ರೇಡ್‌-III-6,055 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ, 12ನೇ ತರಗತಿ.

ವಯೋಮಿತಿ

ಟೆಕ್ನಿಶಿಯನ್‌ ಗ್ರೇಡ್‌-I ಸಿಗ್ನಲ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ, ಗರಿಷ್ಠ ವಯಸ್ಸು 33 ವರ್ಷ, ಟೆಕ್ನಿಶಿಯನ್‌ ಗ್ರೇಡ್‌-III ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ, ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ/ಮಾಜಿ ಯೋಧರಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ ಎಂದು ಅಧಿಸೂಚನೆ ತಿಳಿಸಿದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಎಸ್‌ಸಿ/ಎಸ್‌ಟಿ/ಮಾಜಿ ಯೋಧರು/ಪಿಡಬ್ಲ್ಯುಬಿಡಿ/ಮಹಿಳಾ/ತೃತೀಯ ಲಿಂಗಿಗಳು/ಅಲ್ಪ ಸಂಖ್ಯಾತ ಅಭ್ಯರ್ಥಿಗಳು 250 ರೂ. ಮತ್ತು ಇತರ ಎಲ್ಲ ಅಭ್ಯರ್ಥಿಗಳು 500 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 19,900 ರೂ. - 29,200 ರೂ. ಮಾಸಿಕ ವೇತನ ದೊರೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

RRB Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
    (
    https://www.rrbapply.gov.in/#/auth/home)
  • 'Create An Account' ಆಯ್ಕೆ ಮಾಡಿ ಕ್ಲಿಕ್ ಮಾಡಿ.
  • ಹೆಸರು ರಿಜಿಸ್ಟರ್ ಮಾಡಿಕೊಳ್ಳಿ.
  • ಲಾಗಿನ್‌ ಆಗಿ.
  • ಈಗ ಕಂಡುಬರುವ ಅರ್ಜಿಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅರ್ಜಿ ಶುಲ್ಕ ಭರ್ತಿ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: indianrailways.gov.inಗೆ ಭೇಟಿ ನೀಡಿ ಅಥವಾ ಫೋನ್‌ ನಂಬರ್‌ 9592001188/01725653333ಕ್ಕೆ ಕರೆ ಮಾಡಿ.