ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

SBI Recruitment 2025: ಪದವಿ ಹೊಂದಿದವರಿಗೆ ಗುಡ್‌ನ್ಯೂಸ್‌; ಬರೋಬ್ಬರಿ 5,180 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎಸ್‌ಬಿಐ

Job Guide: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ದೇಶಾದ್ಯಂತ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 5,180 ಜೂನಿಯರ್‌ ಅಸೋಸಿಯೇಟ್‌ (ಕಸ್ಟಮರ್‌ ಸಪೋರ್ಟ್‌ ಮತ್ತು ಸೇಲ್ಸ್‌) ಹುದ್ದೆ ಖಾಲಿ ಇದಾಗಿದ್ದು, ಕರ್ನಾಟಕದಲ್ಲಿ ಒಟ್ಟು 270 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಆಗಸ್ಟ್‌ 26.

5,180 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ SBI

ಸಾಂದರ್ಭಿಕ ಚಿತ್ರ.

Ramesh B Ramesh B Aug 8, 2025 3:47 PM

ಬೆಂಗಳೂರು: ಬ್ಯಾಂಕ್‌ ಉದ್ಯೋಗ (Bank Jobs) ಹೊಂದಬೇಕು ಎಂದು ಕನಸು ಕಾಣುವವರು ನೀವಾಗಿದ್ದರೆ ಇಲ್ಲಿದೆ ಗುಡ್‌ನ್ಯೂಸ್‌. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (State Bank of India) ದೇಶಾದ್ಯಂತ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SBI Recruitment 2025). 5,180 ಜೂನಿಯರ್‌ ಅಸೋಸಿಯೇಟ್‌ (ಕಸ್ಟಮರ್‌ ಸಪೋರ್ಟ್‌ ಮತ್ತು ಸೇಲ್ಸ್‌) (Junior Associate (Customer Support & Sales) ಹುದ್ದೆ ಖಾಲಿ ಇದ್ದು, ಕರ್ನಾಟಕದಲ್ಲಿ ಒಟ್ಟು 270 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ (Job Guide). ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನ ಆಗಸ್ಟ್‌ 26.

ಹುದ್ದೆಯ ವಿವರ ಮತ್ತು ವಿದ್ಯಾರ್ಹತೆ

ಜೂನಿಯರ್‌ ಅಸೋಸಿಯೇಟ್‌ (ಕಸ್ಟಮರ್‌ ಸಪೋರ್ಟ್‌ ಮತ್ತು ಸೇಲ್ಸ್‌) ಹುದ್ದೆ ಇದಾಗಿದ್ದು, ದೇಶದ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಎಸ್‌ಬಿಐ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳವರೆಗೆ ರಿಯಾಯಿತಿ ದೊರೆಯಲಿದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ/ಒಬಿಸಿ/ಇಡಬ್ಲ್ಯುಎಸ್‌ ಅಭ್ಯರ್ಥಿಗಳು 750 ರೂ. ಸಲ್ಲಿಸಬೇಕು. ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಅರ್ಜಿ ಶುಲ್ಕ ಸಲ್ಲಿಸಬೇಕಿಲ್ಲ. ಪಾವತಿ ವಿಧಾನ: ಆನ್‌ಲೈನ್‌.

ಈ ಸುದ್ದಿಯನ್ನೂ ಓದಿ: CSA Recruitment 2025: ದೇಶಾದ್ಯಂತ ಬರೋಬ್ಬರಿ 10,277 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ IBPS; ಪದವಿ ಪೂರೈಸಿದವರು ಅಪ್ಲೈ ಮಾಡಿ

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಪ್ರಿಲಿಮಿನರಿ ಪ್ರೀಕ್ಷೆ (ಆನ್‌ಲೈನ್‌), ಮೇನ್‌ ಪರೀಕ್ಷೆ (ಆನ್‌ಲೈನ್‌), ಲೋಕಲ್‌ ಲಾಂಗ್ವೇಜ್‌ ಪ್ರೊಫಿಯ್ಶೇನ್ಸಿ ಟೆಸ್ಟ್‌, ದಾಖಲಾತಿ ಪರಿಶೀಲನೆ ಮತ್ತು ಫೈನಲ್‌ ಸೆಲೆಕ್ಷನ್‌ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ರಾಜ್ಯದಲ್ಲಿ ಇಂಗ್ಲಿಷ್‌, ಹಿಂದಿ ಮತ್ತು ಕನ್ನಡದಲ್ಲಿ ಪರೀಕ್ಷೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 24,050 ರೂ. - 64,480 ರೂ. ಮಾಸಿಕ ವೇತನ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

SBI Recruitment 2025 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
  • (https://ibpsonline.ibps.in/sbijajul25/)
  • ಹೆಸರು ನೋಂದಾಯಿಸಿ. ಲಾಗಿನ್‌ ಆಗಿ.
  • ಎಚ್ಚರಿಕೆಯಿಂದ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಸರಿಯಾದ ಅಳತೆಯಲ್ಲಿ ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಹೆಚ್ಚಿನ ವಿವರಗಳಿಗೆ ಎಸ್‌ಬಿಐಯ ಅಧಿಕೃತ ವೆಬ್‌ಸೈಟ್‌ ವಿಳಾಸ: sbi.co.inಕ್ಕೆ ಭೇಟಿ ನೀಡಿ.