ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

WCD Recruitment: SSLC ಪಾಸ್ ಆಗಿದ್ರೆ ಇಲ್ಲಿದೆ ಉದ್ಯೋಗಾವಕಾಶ; 340 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಯಚೂರು ಜಿಲ್ಲೆಯ ದೇವದುರ್ಗ, ಗಿಲ್ಲೇಸುಗೂರು, ಲಿಂಗಸುಗೂರು, ಮಾನ್ವಿ, ರಾಯಚೂರು, ಸಿಂಧನೂರು, ಸಿರವಾರ ಹಾಗೂ ತುರುವಿಹಾಳ್​ ತಾಲೂಕುಗಳಲ್ಲಿ ಉದ್ಯೋಗಾವಕಾಶವಿದೆ. ಈ ಹುದ್ದೆಗಳಿಗೆ ಈಗಾಗಲೇ ಡಿಸೆಂಬರ್​ 19ರಂದು​ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜನವರಿ 7 ಕೊನೆಯ ದಿನವಾಗಿದೆ.

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ನೇಮಕ

ಸಾಂಧರ್ಬಿಕ ಚಿತ್ರ -

Profile
Sushmitha Jain Dec 18, 2025 5:21 PM

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಯಚೂರು (WCD) ಅಂಗನವಾಡಿ (Anganwadi) ಕಾರ್ಯಕರ್ತೆ (Anganwadi Worker) ಮತ್ತು ಸಹಾಯಕಿಯ(Anganwadi Helper) ಹುದ್ದೆಗಳನ್ನು(Job Alert) ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು

https://karnemakaone.kar.nic.in/abcd/

ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ರಾಯಚೂರು ಜಿಲ್ಲೆಯ ದೇವದುರ್ಗ, ಗಿಲ್ಲೇಸುಗೂರು, ಲಿಂಗಸುಗೂರು, ಮಾನ್ವಿ, ರಾಯಚೂರು, ಸಿಂಧನೂರು, ಸಿರವಾರ ಹಾಗೂ ತುರುವಿಹಾಳ್​ ತಾಲೂಕುಗಳಲ್ಲಿ ಉದ್ಯೋಗಾವಕಾಶವಿದೆ. ಈ ಹುದ್ದೆಗಳಿಗೆ ಈಗಾಗಲೇ ಡಿಸೆಂಬರ್​ 19ರಂದು​ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜನವರಿ 7 ಕೊನೆಯ ದಿನವಾಗಿದೆ.

ಶೈಕ್ಷಣಿಕ ಅರ್ಹತೆ

ಒಟ್ಟು 340 ಅಂಗನವಾಡಿ ಹುದ್ದೆಗಳು ಖಾಲಿ ಇದ್ದು, ರಾಯಚೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಾಸಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶಿವಮೊಗ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ SSLC ಪೂರ್ಣಗೊಳಿಸಿರಬೇಕು.

ಮನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರಿಗೆ ಅವಕಾಶ

ವಯೋಮಿತಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಯಚೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು. ಇತರ ಹಿಂದುಳಿದ ವರ್ಗದವರಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ, ವಿಶೇಷ ಚೇತನರಿಗೆ 10 ವರ್ಷ ವರ್ಗಾವಾರು ವಯಸ್ಸಿನ ಸಡಿಲಿಕೆ ಇರಲಿದೆ.

ಇನ್ನುಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅದೇ ಗ್ರಾಮ ಅಥವಾ ತಾಲೂಕು, ನಗರದ ಖಾಯಂ ನಿವಾಸಿ ಆಗಿರಬೇಕು. ಇಲ್ಲವೇ, ಕಳೆದ 3 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಅಲ್ಲಿಯ ನಿವಾಸಿಯಾಗಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://karnemakaone.kar.nic.in/ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲ ವಿವರಗಳನ್ನು ದಾಖಲಿಸಿ.

ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ Submit ಬಟನ್ ಮೇಲೆ ಕ್ಲಿಕ್ ಮಾಡಿ .

ಈ ದಾಖಲೆಗಳು ಅಗತ್ಯ

ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಅರ್ಜಿಗಳನ್ನು ಭರ್ತಿ ಮಾಡಿ ಅವಶ್ಯಕ ದೃಢಿಕೃತ ದಾಖಲೆಗಳನ್ನು ಸ್ಪಷ್ಟವಾಗಿ ಕಾಣಿಸುವಂತೆ ಸ್ಕ್ಯಾನ್ ಮಾಡಬೇಕು. ಆನ್‌ಲೈನ್ ಮೂಲಕವೇ ಎಲ್ಲ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಆಫ್‌ಲೈನ್‌ನಲ್ಲಿ ಸಲ್ಲಿಸುವ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ. ಇನ್ನು ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂರ್ಪಕಿಸಬಹುದು.