Court Recruitment 2026: ಯಾದಗಿರಿ ಜಿಲ್ಲಾ ನ್ಯಾಯಾಲಯದ ವಿವಿಧ ಹುದ್ದೆಗಳಿಗೆ ನೇಮಕಾತಿ; SSLC ಪಾಸಾದವರಿಗೆ ಅವಕಾಶ
ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಪ್ಯೂನ್ ಮತ್ತು ಪ್ರೊಸೆಸ್ ಸರ್ವರ್ ಸೇರಿ 14 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. SSLC ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೆರಿಟ್ ಆಧಾರಿತ ಆಯ್ಕೆ ಬಳಿಕ ಸಂದರ್ಶನ ನಡೆಯಲಿದೆ. ಅರ್ಜಿ ಸಲ್ಲಿಕೆಗೆ ಏಪ್ರಿಲ್ 12 ಕೊನೆಯ ದಿನಾಂಕ.
ಎಐ ಚಿತ್ರ -
ಯಾದಗಿರಿ, ಮಾ. 24: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ14 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಜವಾನ (Peon), ಪ್ರೊಸೆಸ್ ಸರ್ವರ್ (Process Sever) ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ, ಪಿಯುಸಿ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಎಪ್ರಿಲ್ 12 ಆಗಿದ್ದು, ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ನೇಮಕಾತಿ ಹೇಗೆ ನಡೆಯಲಿದೆ, ಅರ್ಜಿ ಸಲ್ಲಿಕೆ ಹೇಗೆ ಮತ್ತು ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂಬಿತ್ಯಾದಿ ಮಾಹಿತಿ ಸೇರಿದಂತೆ ಅರ್ಜಿ ಸಲ್ಲಿಸಲು ಬೇಕಾದ ಇನ್ನಿತರ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು: ಪ್ಯೂನ್, ಪ್ರೊಸೆಸ್ ಸರ್ವರ್
ಹುದ್ದೆಗಳ ಸಂಖ್ಯೆ: 14
ಉದ್ಯೋಗ ಸ್ಥಳ: ಯಾದಗಿರಿ
ವಿದ್ಯಾರ್ಹತೆ:
ಯಾದಗಿರಿ ಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಪ್ಯೂನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು. ಪ್ರೊಸೆಸ್ ಸರ್ವರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಲಘು ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು.
ವಯೋಮಿತಿ
ಯಾದಗಿರಿ ಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳದೊಳಗೆ ಇರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 05 ವರ್ಷಗಳು ಹಾಗೂ ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 03 ವರ್ಷಗಳು ವಯೋಮಿತಿ ಸಡಿಲಿಕೆ ಇರಲಿದೆ.
ಎಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗಾವಕಾಶ; 81 ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳು: 100 ರುಪಾಯಿ ಹಾಗೂ ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 200 ರುಪಾಯಿ ಅರ್ಜಿ ಶುಲಕ್ ಪಾವತಿಸಬೇಕು. ವಿಶೇಷ ಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಆಯ್ಕೆ ಪ್ರಕ್ರಿಯೆ
ಯಾದಗಿರಿ ಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗೆ ಅಭ್ಯರ್ಥಿಯನ್ನು ಮೆರಿಟ್ ಆಧಾರಿತದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಬಳಿಕ ಸಂದರ್ಶನ ನಡೆಸಲಾಗುತ್ತದೆ. ಮಾರ್ಚ್ 13ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಏಪ್ರಿಲ್ 12 ಕೊನೆಯ ದಿನಾಂಕ. ಶುಲ್ಕ ಪಾವತಿಗೆ ಏಪ್ರಿಲ್ 13 ಅಂತಿಮ ದಿನ. ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ yadgir.dcourts.gov.inಗೆ ಭೇಟಿ ನೀಡಬಹುದು.