ಗೌರಿ ಹತ್ಯೆ ಪ್ರಕರಣ: ತೀವ್ರ ವಿಚಾರಣೆಯಲ್ಲಿ ಪರಶುರಾಮ ವಾಘ್ಮೋರೆ

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಬಂಧಿತ ಶ್ರೀರಾಮಸೇನೆ ಕಾರ್ಯ ಕರ್ತ ಪರಶುರಾಮ ಅಶೋಕ ವಾಘ್ಮೋರೆಯನ್ನು ವಿಶೇಷ ತನಿಖಾ ತಂಡ(ಎಸ್ಐಟಿ) ಅಧಿ ಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ವಿಜಯಪುರ ಜಿಲ್ಲೆ ಸಿಂದಗಿಯ ಪರಶುರಾಮ ಅಶೋಕ ವಾಘ್ಮೋರೆ(26)ಯನ್ನು ನಿನ್ನೆ 3ನೇ ಎಸಿ ಎಂಎಂ ನ್ಯಾಯಾಲಯದಲ್ಲಿ ಜೂನ್ 24ರವರೆಗೆ ವಶಕ್ಕೆ ಪಡೆದುಕೊಂಡ ಅಧಿಕಾರಿಗಳು ವಿಚಾರಣೆ ಗೊಳಪಡಿಸಿ ಮಹತ್ವದ ಮಾಹಿತಿ ಸಂಗ್ರಹಿಸಿದ್ದಾರೆ.

ಗೌರಿ ಹತ್ಯೆ ಪ್ರಕರಣದಲ್ಲಿ ಬಂಧಿತ ಪರಶುರಾಮನ ಪಾತ್ರವೇನು ಎಂಬುದರ ಬಗ್ಗೆ ವಿಸ್ತೃತ ತನಿಖೆ ನಡೆಸಲಾಗುತ್ತಿದ್ದು ಇನ್ನೂ ನಮಗೆ ಗೌರಿ ಅವರ ಮೇಲೆ ಗುಂಡು ಹಾರಿಸಿದ ಹಂತಕನ ಖಚಿತ ಸುಳಿವು ಲಭ್ಯವಾಗಿಲ್ಲ ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಗೌರಿ ಹತ್ಯೆ ಸಂಬಂಧ ಈಗಾಗಲೇ ಬಂಧಿಸಿರುವ ಶಿಕಾರಿಪುರದ ಕಪ್ಪನಹಳ್ಳಿಯ ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್ (37), ಮಹಾರಾಷ್ಟ್ರದ ಅಮೋಲ್ ಅಲಿಯಾಸ್ ಬಾಯ್ಸಾಬ್, ಅಮಿತ್ ದೇಗ್ವೇಕರ್ ಅಲಿಯಾಸ್ ಪ್ರದೀಪ (38) ಹಾಗೂ ವಿಜಯಪುರ ಜಿಲ್ಲೆ ರತ್ನಾಪುರದ ಮನೋಹರ್‌ ದುಂಡಪ್ಪ ಯಡವೆ ಅಲಿಯಾಸ್ ಮನೋಜ್ (29) ವಿಚಾರಣೆಯಲ್ಲಿ ನೀಡಿದ ಮಾಹಿತಿ ಆಧರಿಸಿ ಪರಶುರಾಮ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೇವೆ ಎನ್ನುತ್ತಾರೆ.

Leave a Reply

Your email address will not be published. Required fields are marked *

6 + 14 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top