ಕಾಂಗ್ರೆಸ್‌ನಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ

Posted In : ರಾಜ್ಯ, ಶಿವಮೊಗ್ಗ

ಸೊರಬ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಮತ್ತೆ ಭುಗಿಲೆದ್ದಿದ್ದು, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ವಿರುದ್ಧ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಬಹಿರಂಗವಾಗಿ ಗುಡುಗಿದ್ದಾರೆ.

ಸೊರಬ ಕಾಂಗ್ರೆಸ್ ಕಚೇರಿಯಲ್ಲಿ ಎಪಿಎಂಸಿ ಚುನಾವಣೆ ನಿಮಿತ್ತ ಕರೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ತಿಮ್ಮಪ್ಪ ಅವರೇನು ಕಾಂಗ್ರೆಸ್ ಪಕ್ಷಕ್ಕೆ ಗೂಟವೇ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹಿನ್ನೆಡೆಗೆ ತಿಮ್ಮಪ್ಪ ಕಾರಣರಾಗಿದ್ದು, ವಿರೋಧ ಪಕ್ಷದವರನ್ನು ಹೊಗಳುತ್ತಾ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ. ಅವರು ಪ್ರತಿ ಚುನಾವಣೆ ಸಂದರ್ಭದಲ್ಲೂ ಪಕ್ಷದ ಕಾರ್ಯಕರ್ತರಿಗೆ ಗೊಂದಲವಾಗುವಂಥ ಹೇಳಿಕೆ ನೀಡುವ ಜತೆಗೆ ಬೇರೆ ಪಕ್ಷದವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದಾರೆ ಎಂದರು.

Leave a Reply

Your email address will not be published. Required fields are marked *

ten + 9 =

Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top