ಮತ ಕಳ್ಳತನಕ್ಕೆ ಸಂಚು: ಮುಂದುವರಿದ ಎಸ್ಐಟಿ ತನಿಖೆ
ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ಸಂದರ್ಭದಲ್ಲಿ ನಡೆದಿರುವ ಮತ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯನ್ನು ತೀವ್ರಗೊಳಿಸಿರುವ ಎಸ್ಐಟಿಗೆ ಜಿಲ್ಲೆಯ ಮಾಜಿ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ್ ಅವರ ನಿವಾಸದ ಬಳಿ ಸುಟ್ಟ ಮತದಾರರ ದಾಖಲೆಗಳ ರಾಶಿ ಪತ್ತೆಯಾಗಿದೆ ಎನ್ನಲಾಗಿದೆ.