ಕಾಲೇಜ್ ಕ್ಯಾಂಪಸ್‌ನಲ್ಲಿ ಕನ್ನಡ ಧ್ವಜ ಹಾರಿಸದಂತೆ ಪತ್ರ!

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ಕಾಲೇಜ್ ಕ್ಯಾಂಪಸ್‌ನಲ್ಲಿ ಕನ್ನಡ ಧ್ವಜ ಹಾರಿಸಬಾರದೆಂದು ಹೊರ ರಾಜ್ಯದ ವಿದ್ಯಾರ್ಥಿಯೊಬ್ಬ ಕಾಲೇಜ್ ಪ್ರಾಂಶುಪಾಲರಿಗೆ ಇಮೇಲ್ ಮೂಲಕ ಸಂದೇಶ ಕಳುಹಿಸಿದ್ದಾನೆ. ಆರ್.ವಿ. ಕಾಲೇಜ್ ಆಫ್ ಎಂಜಿನಿಯರಿಂಗ್ ವಿದ್ಯಾರ್ಥಿ ರಾಜಸ್ಥಾನ ಮೂಲದ ಮಧೂಪ್ ಗುಪ್ತಾ ಎಂಬಾತ ಇ-ಮೇಲ್ ಮೂಲಕ ಕಾಲೇಜಿನ ಪ್ರಾಂಶುಪಾಲರಿಗೆ ಪತ್ರ ಬರೆದಿದ್ದಾನೆ.

ಕಾಲೇಜು ಕ್ಯಾಂಪಸ್‌ನಲ್ಲಿ ಕನ್ನಡ ಧ್ವಜ ಹಾರಿಸಬೇಡಿ ಎಂದು ಮನವಿ ಮಾಡಿದ್ದಾನೆ. ಮಧೂಪ್ ಗುಪ್ತಾ ಬಿಇ ಕಂಪ್ಯೂಟರ್ ಸೈನ್ಸ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ಕ್ಯಾಂಪಸ್‌ನಲ್ಲಿ ಕನ್ನಡ ಧ್ವಜ ಹಾರಿಸುವುದರಿಂದ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆಯುಂಟಾಗುತ್ತದೆ ಎಂದು ಪತ್ರದಲ್ಲಿ ಬರೆದಿದ್ದಾನೆ. ಈ ವಿಷಯವಾಗಿ ವ್ಯಾಪಕ ವಿರೋಧ ವ್ಯಕ್ತವಾದ ತಕ್ಷಣ ಆ ವಿದ್ಯಾರ್ಥಿ ಕ್ಷಮಾಪಣೆ ಕೇಳಿದ್ದಾನೆ.

Leave a Reply

Your email address will not be published. Required fields are marked *

four × five =

 
Back To Top