ಆನೇಕಲ್ನಲ್ಲಿ ಪ್ರಾವಿಜನ್ ಸ್ಟೋರ್ ಮಾಲಿಕನ ಕತ್ತು ಕೊಯ್ದು ಹತ್ಯೆ
Bengaluru Crime news: ಕೊಲೆ ನಡೆದ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್ ಈ ಬಗ್ಗೆ ಮಾಧ್ಯಮದವರ ಜೊತೆಗೆ ಮಾತನಾಡಿದ್ದು, ಕತ್ತು ಕೊಯ್ದು ಕೊಲೆ ಮಾಡಲಾಗಿದೆ ಎಂದು 112ಗೆ ಫೋನ್ ಬಂದಿತ್ತು. ಕೂಡಲೇ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಹರಿತವಾದ ಆಯುಧದಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಪಕ್ಕದ ಮನೆಯ ನಿವಾಸಿಯೊಬ್ಬರು ಇದನ್ನು ನೋಡಿದ್ದಾರೆ. ಕೂಡಲೇ ಆರೋಪಿಯನ್ನು ಹಿಡಿಯಲು ಮುಂದಾಗಿದ್ದರು. ಈ ವೇಳೆ ಬೈಕ್ ಅಡ್ಡಗಟ್ಟುವಾಗ ಅವರ ಮೇಲೂ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾನೆ ಎಂದರು.