About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಸಾಲ ಮನ್ನಾ ವಿಚಾರದಲ್ಲಿ ರೈತರಿಗೆ ಮತ್ತೊಂದು ಸಿಹಿಸುದ್ದಿ..!

ಬೆಂಗಳೂರು:  ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಕೃಷಿ ಸಾಲ ಮನ್ನಾ ಸೌಲಭ್ಯ ಎಂಬ ನಿಯಮವನ್ನು ತಿದ್ದುಪಡಿ ಮಾಡಿ ಕುಟುಂಬದ ಎಷ್ಟೇ ಮಂದಿ ಸಾಲ ಪಡೆದಿದ್ದರೂ ಅವರಿಗೆ ಈ ಸೌಲಭ್ಯ ಅನ್ವಯವಾಗುವಂತೆ ತಿದ್ದುಪಡಿ ಮಾಡಲಾಗಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶಂಪುರ್ ಅವರು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ 103ನೇ ಜನ್ಮ ದಿನಾಚರಣೆಯಲ್ಲಿ ತಿಳಿಸಿದ್ದಾರೆ.

ವಿಧಾನಸೌಧದ ಮುಂದಿರುವ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆಮಾತನಾಡಿದ ಅವರು, ರೈತರ ಸಾಲ ಮನ್ನಾ ಆದೇಶ ಹೊರಡಿಸುವಾಗ ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಸಾಲ ಮನ್ನಾ ಎಂಬ ನಿಯಮವನ್ನು ಮಾಡಲಾಗಿತ್ತು. ಅದನ್ನು ತಿದ್ದುಪಡಿ ಮಾಡಿ ಕುಟುಂಬದ ಎಷ್ಟೇ ಮಂದಿ ಸಾಲ ಪಡೆದಿದ್ದರೂ ಎಲ್ಲವನ್ನು ಮನ್ನಾ ಮಾಡಲು ನಿರ್ಧಾರಿಸಲಾಗಿದೆ ಎಂದು ಹೇಳಿದರು.

Tags

Related Articles

Leave a Reply

Your email address will not be published. Required fields are marked *

Language
Close