ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

KSRTC buses: ಪ್ರಯಾಣಿಕರಿಗೆ ಗುಡ್ ನ್ಯೂಸ್: ಕೆಎಸ್‌ಆರ್‌ಟಿಸಿಯ ಹೊಸ 115 ಬಸ್‌ಗಳಿಗೆ ಹಸಿರು ನಿಶಾನೆ

45 ಸಾಮಾನ್ಯ ಬಸ್ಸುಗಳ ಜತೆಗೆ 70 ಪಲ್ಲಕ್ಕಿ ಸ್ಲೀಪರ್‌ ಬಸ್ಸುಗಳನ್ನು ಬಿಡಲಾಗಿದೆ. ವಿಶೇಷವಾಗಿ ದೂರ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಆಧುನಿಕ ಸೌಲಭ್ಯಗಳೊಂದಿಗೆ ಈ ಪಲ್ಲಕ್ಕಿ ಬಸ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. ಈ ನೂತನ ಸ್ಲೀಪರ್ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ವಿನ್ಯಾಸ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ಹೊಸ 115 ಬಸ್‌ಗಳಿಗೆ ಸಚಿವರಿಂದ ಹಸಿರು ನಿಶಾನೆ

ಹೊಸ ಬಸ್‌ಗಳಿಗೆ ಸಚಿವರಿಂದ ಹಸಿರು ನಿಶಾನೆ -

ಹರೀಶ್‌ ಕೇರ
ಹರೀಶ್‌ ಕೇರ Mar 14, 2026 8:04 AM

ಬೆಂಗಳೂರು, ಮಾ. 14 : ಕೆಎಸ್‌ಆರ್‌ಟಿಸಿ 45 ಸಾಮಾನ್ಯ ಹಾಗೂ 70 ಪಲ್ಲಕ್ಕಿ ಸ್ಲೀಪರ್ ಬಸ್‌ಗಳು (Pallakki sleeper) ಸೇರಿದಂತೆ ಒಟ್ಟು 115 ನೂತನ ಬಸ್‌ಗಳಿಗೆ (KSRTC buses) ಸಚಿವ ರಾಮಲಿಂಗಾರೆಡ್ಡಿ (minister Ramalingareddy) ಹಸಿರು ನಿಶಾನೆ ತೋರಿಸಿದ್ದು, ಈ ಹೊಸ ಬಸ್‌ಗಳು ಬೆಂಗಳೂರಿನಿಂದ ರಾಜ್ಯದ ಹಲವು ಪ್ರಮುಖ ಮಾರ್ಗಗಳಿಗೆ ಸಂಚಾರ ನಡೆಸಲಿವೆ.

ಈ ಹಂತದಲ್ಲಿ ಒಟ್ಟು 115 ಬಸ್‌ಗಳನ್ನು ಸೇವೆಗೆ ಸೇರಿಸಲಾಗಿದೆ, ಅದರಲ್ಲಿ 45 ಸಾಮಾನ್ಯ ಬಸ್‌ಗಳು ಮತ್ತು 70 ಪಲ್ಲಕ್ಕಿ (ಸ್ಲೀಪರ್) ಬಸ್‌ಗಳು ಸೇರಿವೆ. ವಿಶೇಷವಾಗಿ ದೀರ್ಘ ದೂರ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಆಧುನಿಕ ಸೌಲಭ್ಯಗಳೊಂದಿಗೆ ಈ ಪಲ್ಲಕ್ಕಿ ಬಸ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. ಈ ನೂತನ ಸ್ಲೀಪರ್ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ವಿನ್ಯಾಸ ಮಾಡಲಾಗಿದೆ.

ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಸುಮಾರು 1.04 ಲಕ್ಷ ಸಿಬ್ಬಂದಿಗಳಿದ್ದು, ಇವರಲ್ಲಿ 8,956 ಮಹಿಳಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರಲ್ಲಿ 3167 ನಿರ್ವಾಹಕರು, 2254-ತಾಂತ್ರಿಕ ಸಿಬ್ಬಂದಿಗಳು, 3535 – ಆಡಳಿತ ಸಿಬ್ಬಂದಿಗಳಾಗಿರುತ್ತಾರೆ. ನಿಗಮದ 17 ವಿಭಾಗಗಳಿಂದ ತಲಾ ಒಬ್ಬರಂತೆ ಉತ್ತಮ ಕಾರ್ಯ ಸಾಧನೆ ತೋರಿದ, ತಾಂತ್ರಿಕ ಸಿಬ್ಬಂದಿ-19, ನಿರ್ವಾಹಕರು-15, ಹಾಗೂ ಕರಾಸಾ ಪೇದೆ-12, ಒಟ್ಟು 46 ಮಹಿಳಾ ಸಿಬ್ಬಂದಿಗಳನ್ನು ಪ್ರಶಸ್ತಿಯನ್ನು ಸ್ವೀಕರಿಸಿದರು

KSRTC 144 ಹೊಸ ಬಸ್‌ ಖರೀದಿ ಸರ್ಕಾರ ಒಪ್ಪಿಗೆ; ಬಜೆಟ್‌ಗೂ ಮುನ್ನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳೇನು?

ಹೊಸ ಬಸ್‌ಗಳು ಎಲ್ಲಿಂದ ಎಲ್ಲಿಗೆ ಸಂಚಾರ?

ಪಲ್ಲಕ್ಕಿ ನಾನ್‌ ಎಸಿ ಬಸ್‌ಗಳು ಉಡುಪಿ, ಮಂಗಳೂರು, ಮೈಸೂರು, ಧರ್ಮಸ್ಥಳ, ಶೃಂಗೇರಿ, ಹೊರನಾಡು, ಆಗುಂಬೆ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಂಪಿ, ರಾಯಚೂರು, ಜಮಖಂಡಿ, ಪುತ್ತೂರು, ಕಾಣಿಯೂರು, ಕುಕ್ಕೆ ಸುಬ್ರಹ್ಮಣ್ಯ, ಕಾಸರಗೋಡು, ಮಂತ್ರಾಲಯ, ತಿರುಚಿ, ಕೊಜಿಕ್ಕೋಡ್, ಮುನ್ನಾರ್, ಪಾಂಡಿಚೇರಿ, ತಂಜಾವೂರು, ಕೊಟ್ಟಾಯಂ, ಹೈದಾರಬಾದ್, ಚೆನ್ನೈ, ಪಣಜಿ, ಮಧುರೈ, ಕುಂಭಕೋಣಂ, ಎರ್ನಾಕುಲಂಗೆ ಕಾರ್ಯಾಚರಣೆ ಮಾಡಲಾಗುತ್ತದೆ.