ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Covid 19 alert: ಬೆಂಗಳೂರಿನಲ್ಲಿ 35 ಜನರಿಗೆ ಕೋವಿಡ್; ಮತ್ತೆ ಬಂತು ಮಾಸ್ಕ್‌, ಸ್ಯಾನಿಟೈಸರ್!‌

2025ನೇ ಸಾಲಿನಲ್ಲಿ ಈವರೆಗೆ ಯಾವುದೇ ಕೋವಿಡ್ (Covid 19) ಮರಣಗಳು ವರದಿಯಾಗಿರುವುದಿಲ್ಲ. ಪ್ರಸ್ತುತ, ಕೋವಿಡ್-19 ಪರಿಸ್ಥಿತಿಯು ಹತೋಟಿಯಲ್ಲಿದ್ದು ಸಾರ್ವಜನಿಕರು ಅನಗತ್ಯ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯನ್ನು ವಹಿಸುವುದು ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ 35 ಜನರಿಗೆ ಕೋವಿಡ್; ಮತ್ತೆ ಬಂತು ಮಾಸ್ಕ್‌, ಸ್ಯಾನಿಟೈಸರ್!‌

ಹರೀಶ್‌ ಕೇರ ಹರೀಶ್‌ ಕೇರ May 24, 2025 7:14 AM

ಬೆಂಗಳೂರು: ಬೆಂಗಳೂರು ನಗರದ (Bengaluru) ವಾಣಿ ವಿಲಾಸ ಆಸ್ಪತ್ರೆಗೆ ದಾಖಲಾಗಿದ್ದ 9 ತಿಂಗಳ ಮಗುವಿನಲ್ಲಿ ಕೋವಿಡ್ (Covid 19) ಸೋಂಕು ಪತ್ತೆಯಾಗಿದೆ. ಇದಲ್ಲದೆ ನಗರದಲ್ಲಿ 35 ಮಂದಿಯಲ್ಲಿ ಕೋವಿಡ್‌ (corona virus) ಕಂಡುಬಂದಿರುವುದು ದೃಢವಾಗಿದೆ. ಮಗುವಿನಲ್ಲಿ ಸೋಂಕು ಪತ್ತೆಯಾದ ಬೆನ್ನಲ್ಲೇ ಕೋವಿಡ್ ಮಾನಿಟರ್ ಮಾಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಈ ಬಗ್ಗೆ ಕೇಂದ್ರದಿಂದ ಯಾವುದೇ ಗೈಡ್ ಲೈನ್ಸ್ ಬಂದಿಲ್ಲ. ಜನ ಆತಂಕಪಡುವ ಅಗತ್ಯ ಇಲ್ಲ ಎಂದು ಸಚಿವರು ಹೇಳಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಮಗುವನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಬಳಿಕ ಮಗುವನ್ನು ವಾಣಿ ವಿಲಾಸ (Vani Vilas Hospital) ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಮಗುವಿಗೆ ಕೋವಿಡ್‌ ಸೋಂಕು ತಗುಲಿರುವುದು ದೃಢವಾಗಿದೆ.

ಆರೋಗ್ಯ ಇಲಾಖೆ ಮಾರ್ಗಸೂಚಿ

2025ನೇ ಸಾಲಿನಲ್ಲಿ ಈವರೆಗೆ ಯಾವುದೇ ಕೋವಿಡ್ ಮರಣಗಳು ವರದಿಯಾಗಿರುವುದಿಲ್ಲ. ಪ್ರಸ್ತುತ, ಕೋವಿಡ್-19 ಪರಿಸ್ಥಿತಿಯು ಹತೋಟಿಯಲ್ಲಿದ್ದು ಸಾರ್ವಜನಿಕರು ಅನಗತ್ಯ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯನ್ನು ವಹಿಸುವುದು ಅಗತ್ಯವಾಗಿದೆ. ಆದಾಗ್ಯೂ, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗರ್ಭಿಣಿಯರು, ಮಕ್ಕಳು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸುವುದು ಸೂಕ್ತವಾಗಿದೆ. ಹಾಗೂ ಕೋವಿಡ್ ಸ್ವಚ್ಛತೆ, ಹ್ಯಾಂಡ್ ಸ್ಯಾನಿಟೈಸರ್ ನ ಬಳಕೆ ಇತ್ಯಾದಿಗಳನ್ನು ಪಾಲಿಸುವುದು ಅಗತ್ಯವಾಗಿದೆ.

Severe Acute Respiratory Illness (SARI) ಲಕ್ಷಣಗಳನ್ನು ಹೊಂದಿರುವವರು, ಆದ್ಯತೆಯ ಮೇಲೆ ಕೋವಿಡ್ – 19 ಪರೀಕ್ಷೆಗೆ ಒಳಪಡುವುದರಿಂದ, ಸೂಕ್ತ ಚಿಕಿತ್ಸೆ ಪಡೆಯುವುದರೊಂದಿಗೆ ಕೋವಿಡ್ ಪ್ರಸರಣವನ್ನು ನಿಯಂತ್ರಿಸಬಹುದಾಗಿದೆ ಎಂದು ತಿಳಿಸಿದೆ.

ಆಂಧ್ರದಲ್ಲಿ ಮಾಸ್ಕ್‌ ಕಡ್ಡಾಯ

ದೇಶಾದ್ಯಂತ 257 ಸಕ್ರಿಯ ಪ್ರಕರಣಗಳಿದ್ದು, ನೆರೆ ರಾಜ್ಯ ಕೇರಳ ಒಂದರಲ್ಲೆ 186 ಕೇಸ್ ಇದ್ದು, 95 ಸಕ್ರಿಯ ಪ್ರಕರಣಗಳಿವೆ. ಕರ್ನಾಟಕದಲ್ಲಿ 35 ಕೇಸ್ ದಾಖಲಾಗಿದ್ದು, 16 ಸಕ್ರಿಯ ಪ್ರಕರಣಗಳಿವೆ. ಆಂದ್ರಪ್ರದೇಶದಲ್ಲಿ ಗುರುವಾರ 19 ಪಾಸಿಟಿವ್ ಕೇಸ್ ದಾಖಲಾಗಿದ್ದು, ಗುಜರಾತ್‍ನಲ್ಲಿ 15 ಕೇಸ್ ದಾಖಲಾಗಿವೆ. ಆಂಧ್ರಪ್ರದೇಶ ಮಾಸ್ಕ್ ಕಡ್ಡಾಯಗೊಳಿಸಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಮಾಸ್ಕ್ ಹಾಕಿಕೊಳ್ಳಲು ಸಲಹೆ ನೀಡಲಾಗಿದ್ದು, ರೋಗ ಲಕ್ಷಣ ಇದ್ದರೆ ಟೆಸ್ಟ್ ಮಾಡಿಸಲು ಸಲಹೆ ನೀಡಲಾಗಿದೆ. ‌

ಇದನ್ನೂ ಓದಿ: Corona Virus: ಕರ್ನಾಟಕದಲ್ಲಿ ಹೊಸ ಕೊರೊನಾ 16 ಪ್ರಕರಣ ಪತ್ತೆ, ಮುನ್ನೆಚ್ಚರಿಕೆ ಸೂಚನೆ