ರಾಜ್ಯದ ಮೂವರು ಹಿರಿಯ ಐಪಿಎಸ್, ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ
Karnataka Governmnet: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ನಾಲ್ವರು ಐಎಎಸ್ ಮತ್ತು ಮೂವರು ಐಪಿಎಸ್ ಹಿರಿಯ ಅಧಿಕಾರಿಗಳ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಚೇತನ್ ಸಿಂಗ್ ರಾಥೋಡ್, ಸಂದೀಪ್ ಪಾಟೀಲ್, ನಿತೀಶ್ ಕೆ., ಮುಹಮ್ಮದ್ ಇಕ್ರಾಮುಲ್ಲಾ ಶರೀಫ್, ಡಾ. ಚೇತನ್ ಸಿಂಗ್ ರಾಥೋಡ್, ಸಂದೀಪ್ ಪಾಟೀಲ್ ಮತ್ತು ಅನುಪಮ್ ಅಗರ್ವಾಲ್ ವರ್ಗಾವಣೆಗೊಂಡ ಅಧಿಕಾರಿಗಳು.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಮೇ 6: ಕರ್ನಾಟಕ ಸರ್ಕಾರ (Karnataka Governmnet) ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ವರ್ಗಾವಣೆ (IAS And IPS Officers Transffer) ಮಾಡಿ ಆದೇಶ ಹೊರಡಿಸಿದೆ. ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ನಾಲ್ವರು ಐಎಎಸ್ ಮತ್ತು ಮೂವರು ಐಪಿಎಸ್ ಹಿರಿಯ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಜಿಲ್ಲಾಧಿಕಾರಿಗಳಾದ ಚೇತನ್ ಸಿಂಗ್ ರಾಥೋಡ್, ಸಂದೀಪ್ ಪಾಟೀಲ್, ನಿತೀಶ್ ಕೆ. ಮತ್ತು ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ ಅವರನ್ನ ವರ್ಗಾಯಿಸಲಾಗಿದೆ. ಇನ್ನು ಐಪಿಎಸ್ ಅಧಿಕಾರಿಗಳಾದ ಡಾ. ಚೇತನ್ ಸಿಂಗ್ ರಾಥೋಡ್, ಸಂದೀಪ್ ಪಾಟೀಲ್ ಮತ್ತು ಅನುಪಮ್ ಅಗರ್ವಾಲ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಕಲಬುರಗಿಯ ಜಿಲ್ಲಾಧಿಕಾರಿಯಾಗಿದ್ದ ಫೌಜಿಯಾ ತರನ್ನಮ್ ಅವರನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರನ್ನಾಗಿ ನೇಮಿಸಲಾಗಿದ್ದು ಅವರ ಸ್ಥಾನಕ್ಕೆ ಈ ಹಿಂದೆ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿದ್ದ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ ಬಂದಿದ್ದಾರೆ. ರಾಯಚೂರು ಜಿಲ್ಲಾಧಿಕಾರಿಯಾಗಿ ಪುವಿತಾ ಅವರನ್ನು ಸರ್ಕಾರ ನೇಮಿಸಿದೆ. ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ನಿತೀಶ್ ಕೆ. ಅವರಿಗೆ ಸದ್ಯ ಯಾವುದೇ ಹೊಸ ಹುದ್ದೆ ಸೂಚಿಸಿಲ್ಲ.
ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ವರ್ಗಾವಣೆ: ಮಹಮ್ಮದ್ ಇಕ್ರಾಮುಲ್ಲಾ ಶರೀಫ್ ನೂತನ ಡಿಸಿ
ವರ್ಗಾವಣೆಗೊಂಡ ಐಪಿಎಸ್ ಅಧಿಕಾರಿಗಳು
- ಸಂದೀಪ್ ಪಾಟೀಲ್
- ಚೇತನ್ ಸಿಂಗ್ ರಾಥೋಡ್
- ಅನುಪಮ್ ಅಗರವಾಲ್
ಕರ್ನಾಟಕ ಮೀಸಲು ಪೊಲೀಸ್ ಪಡೆಯ ಐಜಿಪಿಯಾಗಿದ್ದ ಸಂದೀಪ್ ಪಾಟೀಲ್ ಅವರನ್ನು ರಾಜ್ಯ ಉತ್ತರ ವಲಯ (ಬೆಳಗಾವಿ) ಐಜಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಅವರಿಂದ ತೆರವಾದ ಸ್ಥಾನಕ್ಕೆ ಅನುಪಮ್ ಅಗರ್ವಾಲ್ ಅವರನ್ನು ನಿಯುಕ್ತಿಗೊಳಿಸಲಾಗಿದೆ. ರಾಜ್ಯ ಉತ್ತರ ವಲಯ (ಬೆಳಗಾವಿ)ದ ಐಜಿಪಿಯಾಗಿದ್ದ ಡಾ.ಚೇತನ್ ಸಿಂಗ್ ರಾಥೋಡ್ ಅವರನ್ನು ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಐಜಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಹಾವೇರಿ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದ ರುಚಿ ಬಿಂದಾಲ್ ಅವರನ್ನು ಬೆಂಗಳೂರಿನ ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ-3 ಆಗಿ ವರ್ಗಾಯಿಸಲಾಗಿದೆ. ಆರ್ಥಿಕ ಇಲಾಖೆಯಲ್ಲಿದ್ದ ಡಾ. ಗೋಪಾಲಕೃಷ್ಣ ಬಿ. ಅವರನ್ನು ಬಜೆಟ್ ಮತ್ತು ಸಂಪನ್ಯೂಲ ವಿಭಾಗದ ಉಪ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
365 ನ್ಯಾಯಾಧೀಶರ ವರ್ಗಾವಣೆ
ಕೆಲವು ದಿನಗಳ ಹಿಂದೆಯಷ್ಟೇ ರಾಜ್ಯದ 365 ನ್ಯಾಯಾಧೀಶರ ವರ್ಗಾವಣೆ ಮಾಡಲಾಗಿತ್ತು. ಇದರಲ್ಲಿ 111 ಜಿಲ್ಲಾ ನ್ಯಾಯಾಧೀಶರು, 115 ಹಿರಿಯ ಸಿವಿಲ್ ನ್ಯಾಯಾಧೀಶರು, 139 ಸಿವಿಲ್ ಜಡ್ಜ್‌ಗಳು ಸೇರಿದ್ದಾರೆ. ವಿಶೇಷ ಎಂದರೆ ಯೋಗೀಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ನೀಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಸಂತೋಷ್ ಗಜಾನನ ಭಟ್ ಕೂಡ ವರ್ಗಾವಣೆ ಆಗಿದ್ದರು.
3 ವರ್ಷ ಕಾಲ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಧೀಶರಾಗಿದ್ದ ನ್ಯಾ. ಸಂತೋಷ್ ಗಜಾನನ ಭಟ್ ಅವರ ಸ್ಥಾನಕ್ಕೆ ಮಂಡ್ಯದ 1ನೇ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದ ಕೆ.ಬಿ. ಶಿವಪ್ರಸಾದ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು. ಶಿವಪ್ರಸಾದ್ ಪ್ರಸ್ತುತ ಮಂಡ್ಯದ 1ನೇ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದು, ಜೂನ್‌ನಿಂದ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.