ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: 5 ವರ್ಷ ನಾನೇ ಮುಖ್ಯಮಂತ್ರಿ: ಗೊಂದಲಗಳಿಗೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ

CM Siddaramaiah: ನಮ್ಮ ಸರ್ಕಾರ ಬಂಡೆಯ ರೀತಿ 5 ವರ್ಷಗಳ ಕಾಲ ಇರಲಿದೆ. ಭಾರತೀಯ ಜನತಾ ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ. ಬಿಜೆಪಿಯವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಬಿಜೆಪಿಯವರು ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಾನೇ ಐದು ವರ್ಷಗಳ ಕಾಲ ಸಿಎಂ ಆಗಿರುತ್ತೇನೆ ಎಂದಿದ್ದಾರೆ ಸಿದ್ದರಾಮಯ್ಯ.

5 ವರ್ಷ ನಾನೇ ಮುಖ್ಯಮಂತ್ರಿ: ಗೊಂದಲಗಳಿಗೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ

ಹರೀಶ್‌ ಕೇರ ಹರೀಶ್‌ ಕೇರ Jul 2, 2025 12:43 PM

ಚಿಕ್ಕಬಳ್ಳಾಪುರ : ಪ್ರಸ್ತುತ ಅವಧಿಯ 5 ವರ್ಷವೂ ನಾನೇ ಸಿಎಂʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ (Chief minister) ನಡೆಯಲಿದೆ ಎಂಬ ಊಹಾಪೋಹಗಳಿಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಇಂದು ಚಿಕ್ಕಬಳ್ಳಾಪುರದ (Chikkaballapura) ನಂದಿ ಬೆಟ್ಟದಲ್ಲಿ (Nandi hills) ಸಂಪುಟ ಸಭೆ ನಡೆಯುತ್ತಿದ್ದು, ಈ ಸಭೆಗೆ ಆಗಮಿಸಿದ ವೇಳೆಯಲ್ಲಿ ಅವರು ಮಾಧ್ಯಮಗಳ ಮುಂದೆ ಈ ಸ್ಪಷ್ಟನೆ ನೀಡಿದರು.

ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದಲ್ಲಿ ಭೋಗ ನಂದೀಶ್ವರ ದೇಗುಲಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು ಹಗಲು ಕನಸು ಕಾಣುತ್ತಿದ್ದಾರೆ. 5 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದರು. ನೀವು 5 ವರ್ಷ ಸಿಎಂ ಆಗಿ ಇರಲ್ಲ ಎಂದು ಪಕ್ಷಗಳು ಹೇಳಿಕೆ ನೀಡುತ್ತಿವೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಅವರೇನು ಹೈಕಮಾಂಡಾ? 5 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳಿದರು.

ನಮ್ಮ ಸರ್ಕಾರ ಬಂಡೆಯ ರೀತಿ 5 ವರ್ಷಗಳ ಕಾಲ ಇರಲಿದೆ. ಭಾರತೀಯ ಜನತಾ ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ. ಬಿಜೆಪಿಯವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಬಿಜೆಪಿಯವರು ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಾನೇ ಐದು ವರ್ಷಗಳ ಕಾಲ ಸಿಎಂ ಆಗಿರುತ್ತೇನೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: BR Patil: ಸಿಎಂ ಸಿದ್ದರಾಮಯ್ಯ ಮತ್ತು ನನ್ನ ಸಂಬಂಧ ಹಾಳು ಮಾಡಲು ಪ್ರಯತ್ನ: ಬಿಆರ್‌ ಪಾಟೀಲ್