ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Women Reservation: ಇನ್ನು ಶಾಲೆಗಳಲ್ಲೂ ಹೆಣ್ಣು ಮಕ್ಕಳಿಗೆ ಶೇ. 50 ಸೀಟುಗಳು ಮೀಸಲು

ಪ್ರತೀ ತರಗತಿಯಲ್ಲಿ ಲಭ್ಯವಿರುವ ಸೀಟುಗಳಲ್ಲಿ ಶೇಕಡಾ 50ರಷ್ಟು ಹೆಣ್ಣು ಮಕ್ಕಳಿಗೆ ಮೀಸಲು, ನಿರೀಕ್ಷಿತ ಅರ್ಜಿಗಳು ಲಭ್ಯವಿಲ್ಲದೇ ಇದ್ದಾಗ ಉಳಿದ ಸೀಟುಗಳನ್ನು ಬಾಲಕರಿಗೆ ಹಂಚಿಕೆ ಮಾಡಬೇಕು. ಭಾಷಾ ಮತ್ತು ಧಾರ್ಮಿಕ ಅಲ್ಪ ಸಂಖ್ಯಾತ ಶಾಲೆ ಹೊರತು ಪಡಿಸಿ, ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳು ಬಾಲಕಿಯರಿಗೆ ಮೀಸಲು ಇಡಬೇಕು.

ಇನ್ನು ಶಾಲೆಗಳಲ್ಲೂ ಹೆಣ್ಣು ಮಕ್ಕಳಿಗೆ ಶೇ. 50 ಸೀಟುಗಳು ಮೀಸಲು

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Apr 21, 2025 8:44 AM

ಬೆಂಗಳೂರು: ರಾಜ್ಯ ಸರಕಾರ (Karnataka government) ಮಹಿಳೆಯರ ಅಭಿವೃದ್ಧಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ರಾಜ್ಯದ ಹೆಣ್ಣು ಮಕ್ಕಳಿಗೆ (girl Students) ಶಿಕ್ಷಣ ಇಲಾಖೆ (Education Department) ಶುಭ ಸುದ್ದಿ ಕೊಟ್ಟಿದ್ದು, ಇನ್ಮುಂದೆ ಎಲ್ಲಾ ಶಾಲೆಗಳಲ್ಲೂ ಹೆಣ್ಣು ಮಕ್ಕಳಿಗೆ ಶೇಕಡಾ 50ರಷ್ಟು ಸೀಟುಗಳನ್ನು ಮೀಸಲಿಡಲು (Women reservation) ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದು ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳಿಗೂ ಕೂಡ ಅನ್ವಯವಾಗಲಿದೆ. CBSE, ICSE ಕೇಂದ್ರ ಪಠ್ಯಕ್ರಮ ಅನುಸರಿಸುವ ಶಾಲೆಗಳಿಗೂ ಅನ್ವಯವಾಗುವಂತೆ ಮೀಸಲಾತಿ ಜಾರಿಗೊಳಿಸಿ ಸರಕಾರ ಆದೇಶಿಸಿದೆ.

ಪ್ರತೀ ತರಗತಿಯಲ್ಲಿ ಲಭ್ಯವಿರುವ ಸೀಟುಗಳಲ್ಲಿ ಶೇಕಡಾ 50ರಷ್ಟು ಹೆಣ್ಣು ಮಕ್ಕಳಿಗೆ ಮೀಸಲು, ನಿರೀಕ್ಷಿತ ಅರ್ಜಿಗಳು ಲಭ್ಯವಿಲ್ಲದೇ ಇದ್ದಾಗ ಉಳಿದ ಸೀಟುಗಳನ್ನು ಬಾಲಕರಿಗೆ ಹಂಚಿಕೆ ಮಾಡಬೇಕು. ಭಾಷಾ ಮತ್ತು ಧಾರ್ಮಿಕ ಅಲ್ಪ ಸಂಖ್ಯಾತ ಶಾಲೆ ಹೊರತು ಪಡಿಸಿ, ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳು ಬಾಲಕಿಯರಿಗೆ ಮೀಸಲು ಇಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳಿಗೆ ಮೀಸಲಾತಿ ಪಾಲನೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

7 ಸಚಿವರನ್ನೊಳಗೊಂಡ ಸಚಿವ ಸಂಪುಟದ ಉಪ ಸಮಿತಿ

ಬೆಂಗಳೂರು- ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆ ಅನುಷ್ಠಾನ ಕುರಿತು ಇದುವರೆಗೂ ಆಗಿರುವ ಪ್ರಗತಿ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು 7 ಸಚಿವರನ್ನೊಳಗೊಂಡ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಈ ಸಮಿತಿಯ ಅಧ್ಯಕ್ಷರಾಗಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ. ಪಾಟೀಲ್, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ. ಹೆಚ್. ಮುನಿಯಪ್ಪ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್. ಸಿ. ಮಹಾದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಮಿತಿಯ ಸದಸ್ಯರಾಗಿದ್ದಾರೆ. ಈ ಸಮಿತಿಯು ಕಾನೂನು ತಜ್ಞರು ಹಾಗೂ ವಿಷಯದ ಪರಿಣಿತರೊಂದಿಗೆ ಚರ್ಚಿಸಿ ಕಾನೂನಾತ್ಮಕವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಎರಡು ತಿಂಗಳೊಳಗೆ ತನ್ನ ವರದಿ ನೀಡಲಿದೆ. ಲೋಕೋಪಯೋಗಿ ಇಲಾಖೆಯು ಈ ಸಚಿವ ಸಂಪುಟ ಉಪ ಸಮಿತಿಗೆ ಅಗತ್ಯ ನೆರವು ನೀಡಲಿದೆ.

ಇದನ್ನೂ ಓದಿ: ದ್ವಿತೀಯ ಪಿಯು ಫಲಿತಾಂಶ: ಎಪಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಶೇ 92ರಷ್ಟು ತೇರ್ಗಡೆ