ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Class 1 admission: ಒಂದನೇ ತರಗತಿ ಪ್ರವೇಶಕ್ಕೆ ಮುಂದಿನ ವರ್ಷದಿಂದ 6 ವರ್ಷ ಕಡ್ಡಾಯ

Class 1 admission: ಒಂದನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ ಈ ವರ್ಷಕ್ಕೆ ಮಾತ್ರ ಅನ್ವಯವಾಗಲಿದ್ದು, ಮುಂದಿನ ವರ್ಷದಿಂದ ಈ ಮೊದಲಿನಂತೆ ಜೂನ್ ಒಂದನೇ ತಾರೀಖಿಗೆ 06 ವರ್ಷಗಳು ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ಒಂದನೇ ತರಗತಿಗೆ ದಾಖಲಿಸಿಕೊಳ್ಳಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಣ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಒಂದನೇ ತರಗತಿ ಪ್ರವೇಶಕ್ಕೆ ಮುಂದಿನ ವರ್ಷದಿಂದ 6 ವರ್ಷ ಕಡ್ಡಾಯ

Profile Prabhakara R Apr 29, 2025 8:47 PM

ಬೆಂಗಳೂರು: ಒಂದನೇ ತರಗತಿ ಪ್ರವೇಶಕ್ಕಾಗಿ ಮಕ್ಕಳ ವಯೋಮಿತಿಗೆ ಸಂಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ವರ್ಷಕ್ಕೆ (2025-26ನೇ ಶೈಕ್ಷಣಿಕ ವರ್ಷ) ಮಾತ್ರ ಅನ್ವಯವಾಗುವಂತೆ 5 ವರ್ಷ 5 ತಿಂಗಳು ಪೂರ್ಣಗೊಂಡಿರುವ ಮಕ್ಕಳನ್ನು ಒಂದನೇ ತರಗತಿಗೆ ದಾಖಲು ಮಾಡಿಕೊಳ್ಳಲು ಇತ್ತೀಚೆಗೆ ಶಿಕ್ಷಣ ಇಲಾಖೆ ಅನುಮತಿ ನೀಡಿತ್ತು. ಇದಕ್ಕೆ ಸಂಬಂಧಿಸಿ ಇದೀಗ ಅಧಿಕೃತ ಆದೇಶ ಹೊರಬಿದ್ದಿದೆ. ವಯೋಮಿತಿ ಸಡಿಲಿಕೆ ಈ ವರ್ಷಕ್ಕೆ ಮಾತ್ರ ಅನ್ವಯವಾಗಲಿದ್ದು, ಮುಂದಿನ ವರ್ಷದಿಂದ ಈ ಮೊದಲಿನಂತೆ ಜೂನ್ ಒಂದನೇ ತಾರೀಖಿಗೆ 06 ವರ್ಷಗಳು ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ಒಂದನೇ ತರಗತಿಗೆ ದಾಖಲಿಸಿಕೊಳ್ಳಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಣ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ 5 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿರುವುದಕ್ಕೆ ಈ ವರ್ಷ ಒಂದು ಬಾರಿಯ ಕ್ರಮವಾಗಿ ಸಡಿಲಿಕೆಯನ್ನು ನೀಡಲಾಗಿದೆ. ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿರುವ ಹಾಗೂ ಜೂನ್ 1 ನೇ ತಾರೀಖಿಗೆ 5 ವರ್ಷ 5 ತಿಂಗಳು ಪೂರ್ಣಗೊಂಡಿರುವ ಮಕ್ಕಳನ್ನು 2025-26ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಸೀಮಿತಗೊಳಿಸಿ ಒಂದನೇ ತರಗತಿಗೆ ದಾಖಲು ಮಾಡಿಕೊಳ್ಳಲು ಆದೇಶಿಸಲಾಗಿದೆ.

ಮುಂದುವರಿದು, 2026-27ನೇ ಶೈಕ್ಷಣಿಕ ವರ್ಷದಿಂದ ಜೂನ್ ಒಂದನೇ ತಾರೀಖಿಗೆ 06 ವರ್ಷಗಳು ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ಒಂದನೇ ತರಗತಿಗೆ ದಾಖಲಿಸಿಕೊಳ್ಳಬೇಕು. ಈಗಾಗಲೇ ಎಲ್‌ಕೆಜಿ ಪ್ರವೇಶಾತಿಗೆ 4 ವರ್ಷ ಮತ್ತು ಯು.ಕೆ.ಜಿ ಪ್ರವೇಶಾತಿಗೆ 5 ವರ್ಷಗಳ ಕನಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಅದರಂತೆ 2025-26ನೇ ಶೈಕ್ಷಣಿಕ ವರ್ಷದಿಂದ ಎಲ್.ಕೆ.ಜಿ. ಅಥವಾ ತತ್ಸಮಾನ ದಾಖಲಾತಿಗೆ 4 ವರ್ಷ ಪೂರ್ಣಗೊಂಡಿರುವ ಮತ್ತು ಯು.ಕೆ.ಜಿ ಅಥವಾ ತತ್ಸಮಾನ ದಾಖಲಾತಿಗೆ 5 ವರ್ಷ ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ದಾಖಲಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

Class 1 (1)

ಈ ಸುದ್ದಿಯನ್ನೂ ಓದಿ | BPNL Recruitment 2025: 10ನೇ ತರಗತಿ ಪಾಸಾದವರಿಗೆ ಬಂಪರ್‌ ಚಾನ್ಸ್‌; ಭಾರತೀಯ ಪಶುಪಾಲನ್‌ ನಿಗಮ್‌ ಲಿಮಿಟೆಡ್‌ನಲ್ಲಿದೆ ಬರೋಬ್ಬರಿ 12,981 ಹುದ್ದೆ

ಆ ಆದೇಶವನ್ನು ತಮ್ಮ ಆಡಳಿತ ವ್ಯಾಪ್ತಿಯ ಎಲ್ಲಾ ಶಾಲೆಗಳಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಶಾಲಾ ಮುಖ್ಯಸ್ಥರಿಗೆ ತಿಳಿಸಲಾಗಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಣ ನಿರ್ದೇಶಕರು ತಿಳಿಸಿದ್ದಾರೆ.