ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bike Taxi services: ಬೈಕ್ ಟ್ಯಾಕ್ಸಿ ಸೇವೆ ಕಾನೂನುಬದ್ಧಗೊಳಿಸಿ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಬಿಟಿಎ ಮನವಿ

Bike Taxi services: ಬೈಕ್‌ ಟ್ಯಾಕ್ಸಿಗಳು ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. 6 ಲಕ್ಷಕ್ಕೂ ಹೆಚ್ಚು ಕನ್ನಡಿಗ ಚಾಲಕರ ಜೀವನೋಪಾಯದ ಅಗತ್ಯಗಳಿಗೆ ಒತ್ತು ನೀಡಲಾಗಿದೆ. ಹೀಗಾಗಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸೂಕ್ತ ನಿಯಮಗಳನ್ನು ರೂಪಿಸಬೇಕು ಎಂದು ಸರ್ಕಾರಕ್ಕೆ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಮನವಿ ಮಾಡಿದೆ.

ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿ; ಸಾರಿಗೆ ಸಚಿವರಿಗೆ ಬಿಟಿಎ ಮನವಿ

Profile Prabhakara R May 18, 2025 2:28 PM

ಬೆಂಗಳೂರು: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸೂಕ್ತ ನಿಯಮಗಳನ್ನು ರೂಪಿಸಿ ಕಾನೂನುಬದ್ಧಗೊಳಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ (ಬಿಟಿಎ) ಮನವಿ ಮಾಡಿದೆ. ನೂರಾರು ಬೈಕ್ ಟ್ಯಾಕ್ಸಿ ಚಾಲಕರು ಮೇ 17ರಂದು ಸಾರಿಗೆ ಸಚಿವರ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗಿದೆ.

ಈ ಮನವಿಯಲ್ಲಿ 6 ಲಕ್ಷಕ್ಕೂ ಹೆಚ್ಚು ಕನ್ನಡಿಗ ಚಾಲಕರ ಜೀವನೋಪಾಯದ ಅಗತ್ಯಗಳಿಗೆ ಒತ್ತು ನೀಡಲಾಗಿದೆ. ಶೇ. 75ರಷ್ಟು ಚಾಲಕರು ತಮ್ಮ ಮುಖ್ಯ ಆದಾಯಕ್ಕಾಗಿ ಬೈಕ್ ಟ್ಯಾಕ್ಸಿ ಸೇವೆಯನ್ನು ಅವಲಂಬಿಸಿದ್ದಾರೆ. ಚಾಲಕರು ನ್ಯಾಯಯುತ, ಎಲ್ಲರನ್ನೂ ಒಳಗೊಳ್ಳುವ ಮತ್ತು ಸುಸ್ಥಿರ ನಿಯಮಗಳನ್ನು ರೂಪಿಸುವಂತೆ ಕೋರಿದ್ದಾರೆ. ಬೈಕ್ ಟ್ಯಾಕ್ಸಿಗಳು ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಬಿಟಿಎ ಹೇಳಿದೆ.

ಬಿಟಿಎ ಪ್ರಕಾರ, ಬೈಕ್ ಟ್ಯಾಕ್ಸಿಗಳು ಮೋಟಾರು ವಾಹನ ಕಾಯ್ದೆ 1988ರ ನಿಯಮಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರಿನ 20 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಈ ಸೇವೆ ಒದಗುತ್ತಿದ್ದು, 50 ಲಕ್ಷಕ್ಕೂ ಹೆಚ್ಚು ರೈಡ್‌ಗಳನ್ನು ಮೊಬಿಲಿಟಿ ಪ್ಲಾಟ್‌ಫಾರ್ಮ್‌ಗಳ ಮೂಲಕ ನೀಡಲಾಗುತ್ತಿದೆ. ಇದು ಅಗತ್ಯ, ಸುರಕ್ಷಿತ, ಕೈಗೆಟುಕುವ ಮತ್ತು ದಕ್ಷ ಸಾರಿಗೆ ಸೇವೆಯಾಗಿದೆ.

ಶೇ.80ಕ್ಕಿಂತ ಹೆಚ್ಚು ಚಾಲಕರು ಸ್ಥಳೀಯ ಕನ್ನಡಿಗ ಪುರುಷರು ಮತ್ತು ಮಹಿಳೆಯರಾಗಿದ್ದು, ಕಳೆದ 6 ವರ್ಷಗಳಿಂದ ಬೈಕ್ ಟ್ಯಾಕ್ಸಿ ಮೂಲಕ ಗೌರವಯುತ ಜೀವನ ನಡೆಸುತ್ತಿದ್ದಾರೆ. ಸರ್ಕಾರ ಪರ್ಮಿಟ್ ಶುಲ್ಕ ಅಥವಾ ತೆರಿಗೆ ವಿಧಿಸಿದರೆ ಅದನ್ನು ಪಾವತಿಸಲು ಸಿದ್ಧರಿದ್ದಾರೆ ಎಂದು ಸಂಘದ ಸದಸ್ಯರು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Fraud case: ಡಿಸಿಸಿ ಬ್ಯಾಂಕ್‌ಗೆ ವಂಚನೆ ಕೇಸ್‌ನಲ್ಲಿ ಬಂಧನವಾಗಿದ್ದ ಡಿ.ಕೆ.ಸಿದ್ರಾಮ್‌ ಬಿಡುಗಡೆ

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರ ಮುಚ್ಚಲು ರಾಜ್ಯ ಸರ್ಕಾರ ಆದೇಶ

Janaushadhi Kendra

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು (Janaushadhi Kendra) ಮುಚ್ಚಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲೇ ಉಚಿತವಾಗಿ ಔಷಧ ವಿತರಣೆ ಮಾಡುತ್ತಿರುವುದರಿಂದ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವಿಲ್ಲ ಎಂದು ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶ್ರೀಪತಿ ಪಿ.ಕೆ. ಅವರು ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ ಸರ್ಕಾರಿ ಆಸ್ಪತ್ರೆಗಳ ವೈದ್ಯರು ರೋಗಿಗಳಿಗೆ ಯಾವುದೇ ಔಷಧಿಗಳನ್ನು ಹೊರಗಿನಿಂದ ಖರೀದಿಸಲು ಶಿಫಾರಸು ಮಾಡದಂತೆ ನೋಡಿಕೊಳ್ಳುವುದು ಸರ್ಕಾರದ ನೀತಿಯಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದೊಳಗೆ ಜನಔಷಧಿ ಕೇಂದ್ರಗಳನ್ನು ತೆರೆಯುವುದು ಸರ್ಕಾರದ ನೀತಿಗೆ ವ್ಯತಿರಿಕ್ತವಾಗಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಜನೌಷಧಿ ಕೇಂದ್ರಗಳ ಹಂಚಿಕೆಯನ್ನು ಸ್ಥಗಿತಗೊಳಿಸಲು ಮತ್ತು ಅದಕ್ಕೆ ಅನುಗುಣವಾಗಿ ಜನೌಷಧಿ ಕೇಂದ್ರಗಳ ಪ್ರಾರಂಭಕ್ಕಾಗಿ ಆಯುಕ್ತಾಲಯದಲ್ಲಿ ಅನುಮೋದನೆಗಾಗಿ ಬಾಕಿ ಇರುವ 31 ಅರ್ಜಿಗಳನ್ನು ತಿರಸ್ಕರಿಸಲು ಅನುಮೋದನೆ ನೀಡಲಾಗಿದೆ. ಆದಾಗ್ಯೂ, ಸರ್ಕಾರಿ ಆಸ್ಪತ್ರೆಗಳ ಹೊರಗೆ ಜನೌಷಧಿ ಕೇಂದ್ರಗಳ ಸ್ಥಾಪನೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರದ ಕಾರಣ ಮುಂದುವರಿಯಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮುಂದುವರೆದು, ಪ್ರಸ್ತುತ ಇಲಾಖೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಅಸ್ತಿತ್ವದಲ್ಲಿರುವ ಜನೌಷಧಿ ಕೇಂದ್ರಗಳನ್ನು ಅವರೊಂದಿಗೆ ಮಾಡಿಕೊಂಡಿರುವ ಒಪ್ಪಂದ ನಿಯಮಗಳ ಪ್ರಕಾರ ಸ್ಥಗಿತಗೊಳಿಸಲು ಅಗತ್ಯ ಕ್ರಮವಹಿಸಬೇಕು. ಹಾಗೆಯೇ, ಜೆನೆರಿಕ್ ಔಷಧಿಗಳ ಖರೀದಿಗೆ ಬಿ.ಪಿ.ಪಿ.ಐ ಯೊಂದಿಗೆ ಕೆಎಸ್‌ಎಂಎಸ್‌ಸಿಎಲ್ ಅವರು ವಿಶೇಷ ದರಗಳನ್ನು ರೂಪಿಸಲು ಸೂಚಿಸಿದೆ. ಪರ್ಯಾಯವಾಗಿ, ಆಸ್ಪತ್ರೆಗಳು ಬಿ.ಪಿ.ಪಿ.ಐ (BPPI) ಯಿಂದ ಔಷಧಗಳನ್ನು ಖರೀದಿಸಿ ರೋಗಿಗಳಿಗೆ ಉಚಿತವಾಗಿ ವಿತರಿಸಲು ಕ್ರಮವಹಿಸಕ್ಕದ್ದು ಎಂಬುದಾಗಿ ತಿಳಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಮಾರು 200 ಜನೌಷಧಿ ಮಳಿಗೆಗಳನ್ನು ಸ್ಥಾಪಿಸಲು ಈ ಹಿಂದೆ ಸರ್ಕಾರ ಅನುಮತಿ ನೀಡಿತ್ತು. ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರು ಬ್ರಾಂಡೆಡ್ ಔಷಧಗಳನ್ನು ರೋಗಿಗಳಿಗೆ ಸಲಹಾ ಚೀಟಿ (Prescription) ರೂಪದಲ್ಲಿ ನೀಡುವುದನ್ನು ನಿಷೇಧಿಸಲಾಗಿತ್ತು. ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿರದ ಔಷಧಗಳನ್ನು ಸಲಹಾ ಚೀಟಿಯನ್ನು Generic ಹೆಸರಿನಲ್ಲಿ ಬರೆಯಲು ಕಡ್ಡಾಯವಾಗಿ ಸೂಚಿಸಲಾಗಿತ್ತು. ಈ ಔಷಧಗಳನ್ನು ಆರೋಗ್ಯ ಸಂಸ್ಥೆಯ ಆವರಣದಲ್ಲಿ ಸ್ಥಾಪಿಸಿರುವ ಜನೌಷಧಿ ಮಳಿಗೆಯಲ್ಲಿ ಕಡಿಮೆ ದರದಲ್ಲಿ ಔಷಧಿ ಸಿಗುವ ಬಗ್ಗೆ ರೋಗಿಗಳಿಗೆ ವಿವರಿಸಿ ಅಲ್ಲಿಂದ ಆ ಔಷಧಿಗಳನ್ನು ಖರೀದಿಸಲು ಸಲಹೆ ನೀಡುವಂತೆ ಸಹ ಸೂಚಿಸಲಾಗಿತ್ತು.

ಈ ಸುದ್ದಿಯನ್ನೂ ಓದಿ | Bengaluru-Tumkur Metro Project: ಸ್ಟುಪಿಡ್‌ ಐಡಿಯಾ; ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಣೆಗೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಸ್ತುತ 207 ಜನೌಷಧಿ ಕೇಂದ್ರಗಳಿಗೆ ಅನುಮತಿ ನೀಡಲಾಗಿದೆ. ಪ್ರಸ್ತುತ ಜನೌಷಧಿ ಕೇಂದ್ರಗಳ ಸ್ಥಾಪನೆಗೆ 31 ಅರ್ಜಿಗಳು ಆಯುಕ್ತರ ಹಂತದಲ್ಲಿ ಬಾಕಿ ಇರುತ್ತವೆ. ಸದರಿ ಜನೌಷಧಿ ಕೇಂದ್ರಗಳ ಸ್ಥಾಪನೆಗೆ ಸಂಬಂಧಿಸಿದ ಈಗಿನ ನೀತಿಯು, ಕಾರ್ಯವಿಧಾನಕ್ಕೆ ಸಂಬಂಧಿಸಿದಂತೆ ಹಳೆಯದಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಆದೇಶಿಸಿದೆ.