ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಮೈಸೂರಿನಲ್ಲಿ ಅಹಿಂದ ಸಮಾವೇಶಕ್ಕೆ ಮುಹೂರ್ತ ಫಿಕ್ಸ್

ಅಹಿಂದ ಸಮಾವೇಶಕ್ಕೆ ಮಹೂರ್ತಕ್ಕೆ ದಿನಾಂಕ ಫಿಕ್ಸ್ ಆಗಿದ್ದು ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತುಕೊಳ್ಳುವುದಕ್ಕೆ ಅಹಿಂದ ನಾಯಕರು ಮುಂದಾಗಿದ್ದಾರೆ. ಕುರ್ಚಿ ಕದನದ ನಡುವೆ ಸಿದ್ದರಾಮಯ್ಯ ಬೆಂಬಲಿಗರು ಹೊಸ ಅಸ್ತ್ರ ಪ್ರಯೋಗ ಮಾಡಲಿದ್ದು, ಜನವರಿ 25 ಕ್ಕೆ ಅಹಿಂದ ಸಮಾವೇಶ ನಡೆಯಲಿದೆ ಎನ್ನಲಾಗಿದೆ. ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಮೈಸೂರಿನಲ್ಲಿ ಅಹಿಂದ ಸಮಾವೇಶ ಮುಹೂರ್ತ ಫಿಕ್ಸ್

ಸಿಎಂ ಸಿದ್ದರಾಮಯ್ಯ -

ಹರೀಶ್‌ ಕೇರ
ಹರೀಶ್‌ ಕೇರ Dec 25, 2025 8:58 AM

ಬೆಂಗಳೂರು, ಡಿ.25 : ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟ್ ಮಧ್ಯೆ ಅಹಿಂದ ಸಮಾವೇಶಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಜನವರಿ 25 ರಂದು ಮೈಸೂರಿನಲ್ಲಿ (mysuru) ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಘೋಷಣೆ ಮಾಡಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಬೆನ್ನಿಗೆ ಅಹಿಂದ ಸಮುದಾಯಗಳು ನಿಂತಿದ್ದು, ಸಿದ್ದರಾಮಯ್ಯರನ್ನು ಬದಲಾಯಿಸದಂತೆ ಒತ್ತಡ ಹೇರಲು ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ.

ಅಹಿಂದ ಸಮಾವೇಶಕ್ಕೆ ಮಹೂರ್ತಕ್ಕೆ ದಿನಾಂಕ ಫಿಕ್ಸ್ ಆಗಿದ್ದು ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತುಕೊಳ್ಳುವುದಕ್ಕೆ ಅಹಿಂದ ನಾಯಕರು ಮುಂದಾಗಿದ್ದಾರೆ. ಕುರ್ಚಿ ಕದನದ ನಡುವೆ ಸಿದ್ದರಾಮಯ್ಯ ಬೆಂಬಲಿಗರು ಹೊಸ ಅಸ್ತ್ರ ಪ್ರಯೋಗ ಮಾಡಲಿದ್ದು, ಜನವರಿ 25 ಕ್ಕೆ ಅಹಿಂದ ಸಮಾವೇಶ ನಡೆಯಲಿದೆ ಎನ್ನಲಾಗಿದೆ. ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.

ನಿನ್ನೆ ಅಹಿಂದ ಸಮಾವೇಶ ನಡೆಸಲು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯಿಂದ ಸಿದ್ದತೆ ನಿಟ್ಟಿನಲ್ಲಿ ಪೂರ್ವಭಾವಿ ನಡೆಯಿತು, ಸಭೆಯಲ್ಲಿ ಎಲ್ಲರೂ ಕೂಡ ಜನವರಿ 25 ರಂದು ಅಹಿಂದ ಸಮಾವೇಶವನ್ನು ನಡೆಸುವುದಕ್ಕೆ ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ. ಅಹಿಂದ ಸಮಾವೇಶಕ್ಕೆ ಸುಮಾರು 15 ರಿಂದ 20 ಸಾವಿರ ಜನರನ್ನು ಸೇರಿಸಲು ಸಭೆಯಲ್ಲಿ ನಿರ್ಧಾರ ಮಾಡಿದ್ದಾರೆ. ಆ ಮೂಲಕ, ಸಿಎಂ ಬದಲಾವಣೆ ಮಾಡದಿರಲು ಹೈಕಮಾಂಡ್‌ ಗೆ ಅಹಿಂದ ನಾಯಕರು ನೇರ ಸಂದೇಶವನ್ನು ಕಳುಹಿಸುವುದಕ್ಕೆ ಮುಂದಾಗಿದ್ದಾರೆ.

ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡುವುದಿಲ್ಲ. ಅವರ ಪರವಾಗಿ ನಾವು ಸಮಾವೇಶ ಹಮ್ಮಿಕೊಂಡಿದ್ದೇವೆ ಅಂತ ಆಯೋಜಕರು ಹೇಳಿದ್ದಾರೆ. ಸಮಾವೇಶದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಶುಭ ಹಾರೈಸಿದ್ದಾರೆ. ಈ ಬಗ್ಗೆ ಅವರು ದೆಹಲಿಯಲ್ಲಿ ಮಾತನಾಡಿದರು. ದೆಹಲಿ ಭೇಟಿಗೆ ಸಂಬಂಧಪಟ್ಟಂತೆ ಅವರು ಮಾತನಾಡಿ, ನಾನು ಯಾರನ್ನೂ ಭೇಟಿ ಮಾಡಿಲ್ಲ, ನಾನು ಯಾರಿಗೂ ತೊಂದರೆ ನೀಡುವುದಕ್ಕೆ ಬಯಸುವುದಿಲ್ಲ. ಹೈಕಮಾಂಡ್ ನಮಗೆ ಫ್ರೀ ಹ್ಯಾಂಡ್‌ ಕೊಟ್ಟಿದೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.