Anil Kumble: ಅರಣ್ಯ ಇಲಾಖೆ ರಾಯಭಾರಿಯಾಗಿ ಅನಿಲ್ ಕುಂಬ್ಳೆ ನೇಮಕ; ಸಂಭಾವನೆ ಬೇಡ ಎಂದ ಸ್ಪಿನ್ ದಿಗ್ಗಜ!
Anil Kumble: ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ಅವರು ವಿಶ್ವದಾದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.


ಬೆಂಗಳೂರು: ರಾಜ್ಯ ಅರಣ್ಯ ಇಲಾಖೆ ರಾಯಭಾರಿಯಾಗಿ (Forest Department ambassador) ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ (Anil Kumble) ಅವರನ್ನು ನೇಮಕ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ತಿಳಿಸಿದ್ದಾರೆ..
ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿಯಿದ್ದು, ಕಾಡಿನ ಬಗ್ಗೆ ಅಪಾರ ಪ್ರೀತಿಯಿದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.
ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದಾದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Tamannaah Bhatia: ತಮನ್ನಾ ಮೇಲೆ ಲವ್ ಇದ್ರೆ ಸಿನಿಮಾ ಮಾಡಿ; ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಯುಕವೇ ಆಕ್ರೋಶ