ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ; ಸಿಎಂ ಡಿಕೆ ಶಿವಕುಮಾರ್​ಗೆ ಅಧಿಕೃತ ಪತ್ರ ಸಲ್ಲಿಕೆ

Nagendra Resign: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಹೋರಾಟ ನಡೆಸಿತ್ತು. ಪರಿಣಾಮವಾಗಿ, ಅಧಿವೇಶನ ಎರಡು ದಿನ ಮೊದಲೇ ಮೊಟಕುಗೊಂಡಿತ್ತು. ಸೆ. 1ರಿಂದ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ನಾಯಕರು ಪ್ರಕಟಿಸಿದ್ದರು. ಇದರಿಂದಾಗಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿತ್ತು.

ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಿ ನಾಗೇಂದ್ರ

Nagendra Resign -

Abhilash BC
Abhilash BC Aug 28, 2026 12:32 PM

ಬೆಂಗಳೂರು, ಆ.28: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ರೂಪಾಯಿ ದುರ್ಬಳಕೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ನಾಗೇಂದ್ರ ವಿಪಕ್ಷಗಳ ಪ್ರತಿಭಟನೆಗೆ ಮಣಿದು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಶುಕ್ರವಾರ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರಿಗೆ ನಾಗೇಂದ್ರ ರಾಜೀನಾಮೆ ಪತ್ರ ನೀಡಿದರು.

ನಾಗೇಂದ್ರ ರಾಜೀನಾಮೆಗೆ ಪಟ್ಟುಹಿಡಿದು ಬಿಜೆಪಿ ಹೋರಾಟ ತೀವ್ರಗೊಳಿಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕಾಂಗ್ರೆಸ್‌ ವರಿಷ್ಠ ನಾಯಕ ರಾಹುಲ್‌ ಗಾಂಧಿ ಅವರನ್ನು ಗುರುವಾರ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ್ದರು.

ಇಂದು ಅರಮನೆಗೆ ಗಜಪಡೆ ಪ್ರವೇಶ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಹೋರಾಟ ನಡೆಸಿತ್ತು. ಪರಿಣಾಮವಾಗಿ, ಅಧಿವೇಶನ ಎರಡು ದಿನ ಮೊದಲೇ ಮೊಟಕುಗೊಂಡಿತ್ತು. ಸೆ. 1ರಿಂದ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ನಾಯಕರು ಪ್ರಕಟಿಸಿದ್ದರು. ಇದರಿಂದಾಗಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿತ್ತು. ಇದೀಗ ಬಿ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ಸಲ್ಲಿಸಿದ್ದಾರೆ. ಹೀಗಾಗಿ ಮತ್ತೊಂದು ಸ್ಥಾನ ಖಾಲಿಯಾಗಲಿದೆ.

ಎಸ್‌ಐಟಿ ನಾಗೇಂದ್ರ ಅವರಿಗೆ ಕ್ಲೀನ್‌ಚಿಟ್ ನೀಡಿದ್ದರೂ, ಪಕ್ಷಕ್ಕೆ ಮುಜುಗರ ಉಂಟು ಮಾಡಲು ತಾನು ಬಯಸುವುದಿಲ್ಲ ಎಂದು ನಾಗೇಂದ್ರ ಅವರು ಮುಖ್ಯಮಂತ್ರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಮಾತ್ರವಲ್ಲದೆ ಪಕ್ಷ ಸಂಘಟನೆಯಲ್ಲಿ ಭಾಗಿಯಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.