ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬಾಗಲಕೋಟೆ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಡಿಕೆಶಿಯಿಂದ ಬಿ ಫಾರಂ

Bagalkot by election: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕೈ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಅವರನ್ನು ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ ಘೋಷಿಸಿದೆ.

ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಬಿ ಫಾರಂ

ಡಿ.ಕೆ.ಶಿವಕುಮಾರ್ ಅವರಿಂದ ಬಾಗಲಕೋಟೆ ಕೈ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಮಂಜುನಾಥ್ ಬಿ ಫಾರಂ ಸ್ವೀಕರಿಸಿದರು. -

Prabhakara R
Prabhakara R Mar 22, 2026 3:18 PM

ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ (Bagalkot by election) ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ಮಂಜುನಾಥ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಸದಾಶಿವನಗರ ನಿವಾಸದಲ್ಲಿ ಭಾನುವಾರ ಬಿ ಫಾರಂ ಸ್ವೀಕರಿಸಿದರು.

ಕಾಂಗ್ರೆಸ್‌ ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ, ಎಚ್‌ವೈ ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವುದರಿಂದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬಿ ಫಾರಂ ವಿತರಿಸಿದ್ದಾರೆ.

ಬಾಗಲಕೋಟೆಗೆ ಉಮೇಶ್ ಮೇಟಿ, ದಾವಣಗೆರೆ ದಕ್ಷಿಣಕ್ಕೆ ಸಮರ್ಥ್ ಶಾಮನೂರು ಅಭ್ಯರ್ಥಿ

_by election

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕೈ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಅವರನ್ನು ಕಾಂಗ್ರೆಸ್‌ ಹೈಕಮಾಂಡ್‌ ಘೋಷಿಸಿದೆ.

ಬಾಗಲಕೋಟೆಯಲ್ಲಿ ಟಿಕೆಟ್‌ ನಮಗೆ ಬೇಕು ಎಂದು ದಿವಂಗತ ಶಾಸಕ ಎಚ್‌.ವೈ. ಮೇಟಿಯವರ ನಾಲ್ಕು ಮಕ್ಕಳು ಕೂಡ ಪಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಸಿಎಂ ಸಿದ್ದರಾಮಯ್ಯ ಅವರೇ ಖುದ್ದು ಮಲ್ಲಿಕಾರ್ಜುನ್ ಮೇಟಿ, ಉಮೇಶ್‌ ಮೇಟಿ, ಮಹಾದೇವಿ, ಬಾಯಕ್ಕ ಅವರನ್ನು ಕರೆದು ಮಾತುಕತೆ ನಡೆಸಿ ಸಂಧಾನ ಮಾಡಿದ್ದರು. ಕೊನೆಗೆ ಹೈಕಮಾಂಡ್‌ ಮೇಟಿಯವರ ಕಿರಿಯ ಪುತ್ರ ಉಮೇಶ್‌ಗೆ ಟಿಕೆಟ್‌ ನೀಡಿದೆ.

ಎರಡೂ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಪೈಪೋಟಿ ಇತ್ತು. ಆದರೆ, ಅಂತಿಮವಾಗಿ ಅನುಕಂಪದ ಮಾನದಂಡ ಇಟ್ಟುಕೊಂಡು ಶಾಮನೂರು ಹಾಗೂ ಮೇಟಿ ಕುಟುಂಬಕ್ಕೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ.

ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆ; ಕಾಂಗ್ರೆಸ್‌ನಿಂದ ಅಧಿಕೃತ ಟಿಕೆಟ್‌ ಘೋಷಣೆ

ಮಾರ್ಚ್‌ 23 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮಾರ್ಚ್‌ 24 ನಾಮಪತ್ರ ಪರಿಶೀಲನೆ, ಮಾರ್ಚ್‌ 26 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಏಪ್ರಿಲ್‌ 9 ಮತದಾನ ನಡೆಯಲಿದೆ. ಮೇ 4 ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ.