ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬಾಗಲಕೋಟೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮಕ್ಕಳ ದುರ್ಮರಣ

Bagalkot Tractor Accident: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬಾಗಲಕೋಟೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮಕ್ಕಳ ದುರ್ಮರಣ

ಸಾಂದರ್ಭಿಕ ಚಿತ್ರ -

Prabhakara R
Prabhakara R Jan 10, 2026 5:59 PM

ಬಾಗಲಕೋಟೆ, ಜ.10: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ (Bagalkot Tractor Accident) ಕಾರ್ಮಿಕರ ಇಬ್ಬರು ಮಕ್ಕಳು ಸ್ಥಳದಲ್ಲಿ ದುರ್ಮರಣ ಹೊಂದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ದುರ್ಘಟನೆಯಲ್ಲಿ 8 ವರ್ಷ ಮತ್ತು 10 ವರ್ಷದ ಬಾಲಕ ಮೃತಪಟ್ಟಿದ್ದಾರೆ. ಇದೇ ವೇಳೆ ಮತ್ತಿಬ್ಬರು ಬಾಲಕಿಯರಿಗೆ ಗಂಭೀರವಾದ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನಾ ಸ್ಥಳಕ್ಕೆ ಅಮೀನಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಚಿಕನ್ ಮಾಡಲು ಹಚ್ಚಿದ್ದ ಒಲೆಯ ಹೊಗೆ ರೂಮ್‌ ತುಂಬಾ ಆವರಿಸಿ ಒಬ್ಬ ಸಾವು, 6 ಮಂದಿ ಅಸ್ವಸ್ಥ

ಧಾರವಾಡ: ಚಿಕನ್ ಬಾರ್ಬೆಕ್ಯೂ ಮಾಡಲು ಹಚ್ಚಿದ್ದ ಒಲೆಯ ಹೊಗೆ ರೂಮ್‌ ತುಂಬಾ ಆವರಿಸಿ ಒಬ್ಬ ಮೃತಪಟ್ಟು, 6 ಮಂದಿ ಅಸ್ವಸ್ಥರಾದ ಘಟನೆ ಧಾರವಾಡದಲ್ಲಿ ನಡೆದಿದೆ. ಅಸ್ವಸ್ಥರಾದವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ನಗರದ ನಂದಿನಿ ಲೇಔಟ್‌ನಲ್ಲಿ ಈ ಅವಘಡ ಸಂಭವಿಸಿದೆ.

ಮೃತ ಕಾರ್ಮಿಕನನ್ನು ಬಿಬೆಕ್ ಎಂದು ಗುರುತಿಸಲಾಗಿದ್ದು, ನರೇಶ್ (45), ನಿತೇಶ್ (18), ಡಿಕೆಶಿ (40), ಸುಧನ್ (30), ಕುಮಾರ್ (50) ಮತ್ತು ಲಕ್ಷ್ಮಣ್ (30) ಎಂಬುವವರು ಅಸ್ವಸ್ಥರಾಗಿದ್ದಾರೆ. ಇವರನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಗಲಿದ ಪತಿಯ ನೋವಿನಲ್ಲಿದ್ದ ಕಾದಂಬರಿಕಾರ್ತಿ ಆಶಾ ರಘು ಆತ್ಮಹತ್ಯೆ

ಶುಕ್ರವಾರ ರಾತ್ರಿ ಈ ಏಳೂ ಜನ ಕೆಲಸಗಾರರು ತಾವು ವಾಸವಿದ್ದ ಮನೆಯಲ್ಲಿ ಚಿಕನ್‌ ಬಾರ್ಬೆಕ್ಯೂ ಮಾಡಲು ಒಲೆ ಹೊತ್ತಿಸಿದ್ದರು. ರಾತ್ರಿ ಊಟ ಮಾಡಿ ಎಲ್ಲರೂ ಮಲಗಿದ್ದರು. ಆದರೆ, ಒಲೆಯಿಂದ ಹೊಗೆ ಆವರಿಸಿ ಉಸಿರು ಗಟ್ಟಿ ಒಬ್ಬ ಮೃತಪಟ್ಟಿದ್ದು, 6 ಮಂದಿ ಅಸ್ವಸ್ಥರಾಗಿದ್ದಾರೆ. ಬೆಳಗಿನವರೆಗೂ ಏಳೂ ಜನ ಮಲಗಿದ ಜಾಗದಲ್ಲೇ ಮಲಗಿದ್ದರು. ಬೆಳಗ್ಗೆ ಕೆಲಸಕ್ಕೆ ಬಾರದೇ ಇದ್ದಾಗ ಮಾಲೀಕರೇ ಸ್ಥಳಕ್ಕೆ ಹೋಗಿ ನೋಡಿದಾಗ ಅವಘಡ ನಡೆದಿರುವುದು ಗೊತ್ತಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿದ್ಯಾಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.