ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bellary News: ಮೊಬೈಲ್‌ನಲ್ಲಿ ಬರೋಬ್ಬರಿ 13 ಸಾವಿರ ಮಹಿಳೆಯರ ಅಶ್ಲೀಲ ಫೋಟೋ, ವಿಡಿಯೋ ಪತ್ತೆ; ಸಂಡೂರಿನಲ್ಲಿ ಕಾಮುಕ ಅರೆಸ್ಟ್

Bellary News: ನಕಲಿ‌ ಖಾತೆ ಸೃಷ್ಟಿಸಿ ಮಹಿಳೆ ಹಾಗೂ ಯುವತಿಯರ ನಗ್ನ ಪೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಕಾಮುಕನನ್ನು ಬಳ್ಳಾರಿಯ ಸಂಡೂರಿನಲ್ಲಿ ಬಂಧಿಸಲಾಗಿದೆ. ವಿದ್ಯಾರ್ಥಿನಿಯೊಬ್ಬಳು ನೀಡಿದ್ದ ದೂರಿನ ಅನ್ವಯ ಕೇಸ್ ದಾಖಲಿಸಿಕೊಂಡಿಸಿದ್ದ ಮುಂಬೈ ಪೊಲೀಸರು, ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

ಕಾಮುಕನ ಮೊಬೈಲ್‌ನಲ್ಲಿ 13 ಸಾವಿರ ಮಹಿಳೆಯರ ಅಶ್ಲೀಲ ಫೋಟೋ, ವಿಡಿಯೋ ಪತ್ತೆ!

Profile Prabhakara R Jun 18, 2025 5:27 PM

ಬಳ್ಳಾರಿ: ನಕಲಿ‌ ಖಾತೆ ಸೃಷ್ಟಿಸಿ ಮಹಿಳೆ ಹಾಗೂ ಯುವತಿಯರ ನಗ್ನ ಪೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಮೋಸ್ಟ್ ವಾಂಟೆಡ್​ ಕಾಮುಕ ಕೊನೆಗೂ ಬಳ್ಳಾರಿಯ ಸಂಡೂರಿನಲ್ಲಿ ಸಿಕ್ಕಿಬಿದ್ದಿದ್ದಾನೆ. ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್(25) ಬಂಧಿತ ಆರೋಪಿ. ಆರೋಪಿಯು ಬೆತ್ತಲೆ ಫೋಟೋ, ವಿಡಿಯೋಗಳನ್ನು ಅಪ್ಲೋಡ್ ಮಾಡಿ ಮಹಿಳೆಯರ ಮಾನಹಾನಿ ಮಾಡುತ್ತಿದ್ದ. ಈ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ್ದ ಮುಂಬೈ ಪೊಲೀಸರು, ಸಂಡೂರಿನಲ್ಲಿ ಕಾಮುಕ ಶುಭಂನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನ ಮೊಬೈಲ್‌​ನಲ್ಲಿ ಬರೋಬ್ಬರಿ 13,000 ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ಛಾಯಾಚಿತ್ರಗಳು ಮತ್ತು ವೀಡಿಯೊಗಳು ಪತ್ತೆಯಾಗಿದ್ದು, ಇವುಗಳನ್ನು ನೋಡಿ ಪೊಲೀಸರೇ ಶಾಕ್‌ ಆಗಿದ್ದಾರೆ.

ದೆಹಲಿಯಲ್ಲಿ ಡಿಪ್ಲೊಮಾ ಪಡೆದಿದ್ದ ಶುಭಂ, ಸಂಡೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಇದರ ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರು, ಯುವತಿಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರಿಗೆ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದಿದ್ದಾಗ ಅವರ ಹೆಸರಿನಲ್ಲೇ ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ಫೋಟೋ, ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದ.

ಈ ಸುದ್ದಿಯನ್ನೂ ಓದಿ | Actress Rachita Ram: ಅಡ್ವಾನ್ಸ್‌ ಹಣ ವಾಪಸ್‌ ಕೊಡದ ಆರೋಪ; ರಚಿತಾ ರಾಮ್‌ ವಿರುದ್ಧ ಮತ್ತೊಂದು ದೂರು

ತನ್ನ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಸಂಬಂಧ ವಿದ್ಯಾರ್ಥಿನಿಯೊಬ್ಬಳು ನೀಡಿದ್ದ ದೂರು ದಾಖಲಿಸಿಕೊಂಡ ಬಳಿಕ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದರು. ಈ ಪ್ರಕರಣ ಸಂಬಂಧ ಗೂಗಲ್‌ನಿಂದ ತಾಂತ್ರಿಕ ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ಶುಭಂ 10 ನಕಲಿ ಖಾತೆಗಳನ್ನು ಮತ್ತು 90ಕ್ಕೂ ಹೆಚ್ಚು ಇ-ಮೇಲ್ ಐಡಿಗಳನ್ನು ಸೃಷ್ಟಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಬೆಂಗಳೂರಲ್ಲಿ ಖಾಸಗಿ ವಿಡಿಯೋ ತೋರಿಸಿ ಮಹಿಳೆಗೆ ಬ್ಲ್ಯಾಕ್‌ಮೇಲ್

ಬೆಂಗಳೂರು: ಖಾಸಗಿ ವಿಡಿಯೋಗಳನ್ನು ತೋರಿಸಿ ಬ್ಲ್ಯಾಕ್‌ಮೇಲ್ (Blackmail Case) ಮಾಡುತ್ತಿದ್ದಾರೆ ಎಂದು ಆರೋಪಿಸಿ 30 ವರ್ಷದ ಮಹಿಳೆಯೊಬ್ಬರು ತನ್ನ ಲಿವ್-ಇನ್ ಸಂಗಾತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ವಿವಾಹಿತ ಮಹಿಳೆಯಾಗಿರುವ ಸಂತ್ರಸ್ತೆ, ಕೌಟುಂಬಿಕ ಹಿಂಸಾಚಾರದ ಹಿನ್ನೆಲೆಯಲ್ಲಿ ಪತಿಯಿಂದ ಬೇರ್ಪಟ್ಟಿದ್ದು, ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದರು. ನಂತರ, ಆಕೆ ಆರೋಪಿಯನ್ನು ಭೇಟಿಯಾಗಿದ್ದು, ತಾನು ಕೆಲಸ ಪಡೆಯಲು ಸಹಾಯ ಮಾಡಿದ್ದರಿಂದ ಆತನೊಂದಿಗೆ ಆತ್ಮೀಯವಾಗಿದ್ದಳು.

ವಿವಾಹಿತನಾಗಿರುವ ಆರೋಪಿ, ತನ್ನ ಪತಿಗೆ ವಿಚ್ಛೇದನ ನೀಡುವಂತೆ ಮಹಿಳೆಯ ಮನವೊಲಿಸಿ, ಕಾಡುಗೋಡಿಯ ಕಾಶಿ ವಿಶ್ವನಾಥ ದೇವಸ್ಥಾನದ ಬಳಿಯ ಬಾಡಿಗೆ ಮನೆಯಲ್ಲಿ ಕಳೆದ ಆರು ವರ್ಷಗಳಿಂದ ಲಿವ್-ಇನ್ ಸಂಗಾತಿಯಾಗಿ ಸಂತ್ರಸ್ತೆಯ ಜತೆ ವಾಸಿಸಲು ಪ್ರಾರಂಭಿಸಿದನು. ನಂತರ ಆಕೆಯ ಗಮನಕ್ಕೆ ಬಾರದೆ ಖಾಸಗಿ ಕ್ಷಣಗಳನ್ನು ರೆಕಾರ್ಡ್ ಮಾಡಿಕೊಂಡಿದ್ದಾನೆ. ಬಳಿಕ ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

2023ರಲ್ಲಿ ಆರೋಪಿಯಿಂದ ಮಹಿಳೆ ತಪ್ಪಿಸಿಕೊಂಡು ಕೋಲಾರ ಜಿಲ್ಲೆಯ ಪೋಷಕರ ಮನೆಗೆ ಹೋಗಿದ್ದಾರೆ. ನಂತರ ಆರೋಪಿಯು ಆಕೆಯ ತಾಯಿಗೆ ಹಣಕ್ಕಾಗಿ ತೊಂದರೆ ನೀಡಲು ಪ್ರಾರಂಭಿಸಿದ್ದಾನೆ. ಹಣ ನೀಡದಿದ್ದರೆ ಮಹಿಳೆಯ ಖಾಸಗಿ ವಿಡಿಯೋಗಳನ್ನು ಸಾರ್ವಜನಿಕಗೊಳಿಸುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ಆರೋಪಿಸಲಾಗಿದೆ. ಆರೋಪಿ ಕಾಡುಗೋಡಿಯಲ್ಲಿ ಕಂಪ್ಯೂಟರ್ ಅಂಗಡಿ ನಡೆಸುತ್ತಿದ್ದು, ಆತನನ್ನು ಪೊಲೀಸರು ಬಂಧಿಸಿದ್ದು, ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.