ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Boy Death: ನಾಪತ್ತೆಯಾಗಿದ್ದ 4 ವರ್ಷದ ಬಾಲಕ ಶವವಾಗಿ ಬಾವಿಯಲ್ಲಿ ಪತ್ತೆ

ಬಳ್ಳಾರಿ (Bellary news) ಜಿಲ್ಲೆಯ ಸಿರಗುಪ್ಪ ತಾಲೂಕಿನ ರವಿಹಾಳ ರವಿಹಾಳ ಗ್ರಾಮದ ವೀರೇಶ್ ಪುತ್ರ ಸಿರಿ (4) ಶವವಾಗಿ ಬಾವಿಯಲ್ಲಿ ಪತ್ತೆಯಾಗಿದ್ದಾನೆ. ಎರಡು ದಿನದ ಹಿಂದೆ ಬಾಲಕ ನಾಪತ್ತೆಯಾಗಿದ್ದ. ನಿನ್ನೆ ಸಂಜೆ ಬಾವಿಯಲ್ಲಿ ಸ್ಥಳೀಯರು ಶವ ತೇಲುತ್ತಿರುವುದನ್ನು ನೋಡಿದ್ದಾರೆ.

ನಾಪತ್ತೆಯಾಗಿದ್ದ 4 ವರ್ಷದ ಬಾಲಕ ಶವವಾಗಿ ಬಾವಿಯಲ್ಲಿ ಪತ್ತೆ

ಹರೀಶ್‌ ಕೇರ ಹರೀಶ್‌ ಕೇರ Aug 2, 2025 12:13 PM

ಬಳ್ಳಾರಿ: ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ (boy death, body found) ಪತ್ತೆಯಾಗಿದ್ದಾನೆ. ಘಟನೆ ಬಳ್ಳಾರಿ (Bellary news) ಜಿಲ್ಲೆಯ ಸಿರಗುಪ್ಪ ತಾಲೂಕಿನ ರವಿಹಾಳ ಗ್ರಾಮದಲ್ಲಿ ನಡೆದಿದೆ. ರವಿಹಾಳ ಗ್ರಾಮದ ವೀರೇಶ್ ಪುತ್ರ ಸಿರಿ (4) ಶವವಾಗಿ ಪತ್ತೆಯಾಗಿದ್ದಾನೆ. ಸಿರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಕುಟುಂಬ ಮತ್ತು ಗ್ರಾಮಸ್ಥರು ಇಡೀ ಗ್ರಾಮವನ್ನೇ ಹುಡುಕಾಡಿದರು ಪತ್ತೆಯಾಗಿರಲಿಲ್ಲ.

ನಿನ್ನೆ ಸಂಜೆ ಬಾವಿಯಲ್ಲಿ ಸ್ಥಳೀಯರು ಶವ ತೇಲುತ್ತಿರುವುದನ್ನು ನೋಡಿದ್ದಾರೆ. ಘಟನಾ ಸ್ಥಳಕ್ಕೆ ಸದ್ಯ ಸಿರುಗುಪ್ಪಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕಾಲು ಜಾರಿ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿರಬಹುದಾ ಅಥವಾ ಯಾರಾದರೂ ಕುಟುಂಬದ ಮೇಲಿನ ದ್ವೇಷದಿಂದ ಕೊಲೆ ಮಾಡಿರಬಹುದಾ ಎಂಬ ಶಂಕೆಯಿಂದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇಷ್ಟು ಸಣ್ಣ ಪ್ರಾಯದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೆರೆಗೆ ತಳ್ಳಿ ಕೊಂದ ಪತ್ನಿ

ಹಾವೇರಿ: ಅಕ್ರಮ ಸಂಬಂಧಕ್ಕೆ (Illicit Relationship) ಅಡ್ಡಿಯಾಗಿದ್ದಾನೆಂದು ಪತ್ನಿಯೇ (Wife) ಪ್ರಿಯಕರನ (Lover) ಜೊತೆ ಸೇರಿಕೊಂಡು ಪತಿಯನ್ನೇ (Husband) ಕೆರೆಗೆ ತಳ್ಳಿ ಕೊಲೆ (Murder case) ಮಾಡಿರುವ ಘಟನೆ ಹಾವೇರಿಯ (Haveri news) ರಟ್ಟಿಹಳ್ಳಿ ತಾಲೂಕಿನಲ್ಲಿ ನಡೆದಿದೆ. ಹರಿಹರ ಮೂಲದ ಶಫಿವುಲ್ಲಾ ಅಬ್ದುಲ್ ಮಹೀಬ್ (38) ಕೊಲೆಯಾದ ಪತಿ ಎಂದು ಗುರುತಿಸಲಾಗಿದೆ. ತಮ್ಮಿಬ್ಬರ ಪ್ರಣಯ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ಶಫಿವುಲ್ಲಾ ಅಬ್ದುಲ್ ಮಹೀಬ್‌ನನ್ನು ಕರೆಗೆ ತಳ್ಳಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಬಿಂಬಿಸಿದ್ದರು.

ಮುಬಾರಕ್ ಖಲಂದರಸಾಬ್ ಮತ್ತು ಶಹೀನಾಬಾನು ಮಧ್ಯೆ ಅನೈತಿಕ ಸಂಬಂಧ ಇತ್ತು. ಮುಬಾರಕ್ ಖಲಂದರಸಾಬ್‌ನನ್ನು ಮದುವೆ ಆಗುವಂತೆ ಶಹೀನಾಬಾನು ಪೀಡಿಸುತ್ತಿದ್ದಳು. ನಮ್ಮಿಬ್ಬರ ಮದುವೆಗೆ ನಿನ್ನ ಪತಿ ಅಡ್ಡಿಯಾಗಿದ್ದಾನೆಂದು ಹೇಳಿದ್ದ. ಹೀಗಾಗಿ ಇಬ್ಬರೂ ಸೇರಿ ಶಫೀವುಲ್ಲಾನ ಹತ್ಯೆಗೆ ಸಂಚು ರೂಪಿಸಿದ್ದರು. ಬಳಿಕ ಮುಬಾರಕ್ ಖಲಂದರಸಾಬ್, ಶಫೀವುಲ್ಲಾ ಜೊತೆ ಗೆಳೆತನ ಬೆಳಸಿ ಮನೆಗೆ ಬಂದು ಹೋಗಿ ಮಾಡುತ್ತಿದ್ದ. ಅದರಂತೆ ಜುಲೈ 27ರಂದು ಕೆರೆ ನೋಡಲು ಹೋಗೋಣ ಎಂದು ಪುಸಲಾಯಿಸಿ ಶಫೀವುಲ್ಲಾನನ್ನು ಕೆರೆ ಕಡೆ ಕರೆದುಕೊಂಡು ಹೋಗಿದ್ದು, ಅಲ್ಲಿ ಭರ್ಜರಿ ಎಣ್ಣೆ ಪಾರ್ಟಿ ಮಾಡಿದ್ದಾರೆ.

ಬಳಿಕ ಶಫೀವುಲ್ಲಾನನ್ನು ಕೆರೆಗೆ ತಳ್ಳಿದ್ದಾರೆ. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಿಂಬಿಸಿದ್ದರು. ಆದರೆ, ಪೊಲೀಸರ ತನಿಖೆ ವೇಳೆ ಪತ್ನಿ ಶಹೀನಾಬಾನು ಹಾಗೂ ಆಕೆಯ ಪ್ರಿಯಕರ ಮುಬಾರಕ್ ಖಲಂದರಸಾಬ್‌ನ ನವರಂಗಿ ಆಟ ಬಯಲಿಗೆ ಬಂದಿದೆ. ಮೃತದೇಹ ಪತ್ತೆಯಾದ ಬಳಿಕ, ದೇಹದಲ್ಲಿ ಗಾಯಗಳಿರುವುದು ಕಂಡು ಅನುಮಾನ ಮೂಡಿತ್ತು. ಪೊಲೀಸರು ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿದ ಈ ವೇಳೆ ಕೊಲೆ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಸದ್ಯ ಹಿರೇಕೆರೂರು ಪೊಲೀಸರು, ಆರೋಪಿಗಳಾದ ಪತ್ನಿ ಶಹೀನಾಬಾನು ಹಾಗೂ ಆಕೆಯ ಪ್ರಿಯಕರ ಮುಬಾರಕ್ ಖಲಂದರಸಾಬ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Kalabhavan Navas: ಮಲಯಾಳಂ ಖ್ಯಾತ ನಟ ಹೋಟೆಲ್‌ ರೂಂನಲ್ಲಿ ಶವವಾಗಿ ಪತ್ತೆ!