ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬಳ್ಳಾರಿ ಚಲೋ ಸಮಾರೋಪಕ್ಕೆ ಸರ್ಕಾರದಿಂದ ಬಿಗ್‌ ಶಾಕ್‌; ಶಾಲಾ ಮೈದಾನ ಬಳಕೆಗೆ ನಿಷೇಧ!

Ballary Chalo: ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಸಂಡೂರು ತಾಲೂಕಿನ ದರೋಜಿ ಗ್ರಾಮದಲ್ಲಿ ಸೋಮವಾರ ಅಂತ್ಯಗೊಂಡಿದ್ದ ಪಾದಯಾತ್ರೆ ಇಂದು ಕುಡಿತಿನಿವರೆಗೆ ಮುಂದುವರಿಯಲಿದೆ.

ಬಳ್ಳಾರಿ ಚಲೋ ಸಮಾರೋಪಕ್ಕೆ ಸರ್ಕಾರದಿಂದ ಬಿಗ್‌ ಶಾಕ್‌!

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Sep 8, 2026 1:31 PM

ಬಳ್ಳಾರಿ: ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ (Ballari Chalo Rally) ಪಾದಯಾತ್ರೆ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಸಂಡೂರು ತಾಲೂಕಿನ ದರೋಜಿ ಗ್ರಾಮದಲ್ಲಿ ಸೋಮವಾರ ಅಂತ್ಯಗೊಂಡಿದ್ದ ಪಾದಯಾತ್ರೆ ಇಂದು ಕುಡಿತಿನಿವರೆಗೆ ಮುಂದುವರಿಯಲಿದೆ. ಇನ್ನೇನು ಕೊನೆ ಹಂತಕ್ಕೆ ತಲುಪಿರುವ ಪಾದಯಾತ್ರೆಗೆ ಶಾಕ್‌ ಎದುರಾಗಿದ್ದು, ಸರ್ಕಾರ ಸಮಾರೋಪ ಸಮಾರಂಭಕ್ಕೆ ಅನುಮತಿ ನೀಡಲು ನಿರಾಕರಿಸಿದೆ.

ಬಳ್ಳಾರಿ ನಗರದಲ್ಲಿ ಸೆಪ್ಟೆಂಬರ್‌ 10 ರಂದು ಬಿಜೆಪಿಯ ಬೃಹತ್ ಬಹಿರಂಗ ಸಮಾವೇಶಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನವನ್ನು ಬಳಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅನುಮತಿ ನಿರಾಕರಿಸಿದೆ. ಬಿಜೆಪಿ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಮೋಕಾ ಅವರು ಸೆ.7ರಂದು ಮನವಿ ಸಲ್ಲಿಸಿ, ಸೆ.10ರಂದು ಮಧ್ಯಾಹ್ನ 3 ರಿಂದ ಸಂಜೆ 8 ಗಂಟೆಯವರೆಗೆ ಸಮಾವೇಶ ನಡೆಸಲು ಮೈದಾನ ನೀಡುವಂತೆ ಕೋರಿದ್ದರು.

ಆದರೆ ಇದೀಗ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ 2015 ರ ಜೂನ್‌ 11ರ ಅಧಿಕೃತ ಸುತ್ತೋಲೆಯನ್ನು ಉಲ್ಲೇಖಿಸಿ ಬಳ್ಳಾರಿ ವಿಜಯನಗರ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಅನುಮತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಮೈದಾನ ಹಾಗೂ ಕಟ್ಟಡಗಳನ್ನು ಖಾಸಗಿ ಸಂಘ-ಸಂಸ್ಥೆಗಳ ಸಾರ್ವಜನಿಕ ಅಥವಾ ಖಾಸಗಿ ಸಮಾರಂಭಗಳಿಗೆ, ಪ್ರದರ್ಶನಗಳಿಗೆ, ವ್ಯಾಪಾರ ಮಳಿಗೆಗಳಿಗೆ ಹಾಗೂ ಮನೋರಂಜನಾ ಕಾರ್ಯಕ್ರಮಗಳಿಗೆ ನೀಡಬಾರದು ಎಂದು ಕಟ್ಟುನಿಟ್ಟಿನ ಆದೇಶವಿದೆ. ಈ ನಿಯಮವನ್ನು ಉಲ್ಲಂಘಿಸಿದರೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರನ್ನೇ ಹೊಣೆಗಾರರನ್ನಾಗಿ ಮಾಡಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಸುತ್ತೋಲೆ ಹೊರಡಿಸಲಾಗಿದೆ.

ರಾಯಚೂರಿನ ಲಿಂಗಸೂಗೂರಿನಲ್ಲಿ ಪಾದಯಾತ್ರೆಗೆ ಚಾಲನೆ, ಬಿಎಸ್‌ವೈ ಹಾಜರ್ : ಬಳ್ಳಾರಿ ಚಲೋಗೆ ಬಿಜೆಪಿ ಕಹಳೆ

ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಅನುಮತಿ ನಿರಾಕರಣೆ ಕುರಿತು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಶಿಕ್ಷಣ ಇಲಾಖೆಯ ಈ ಕ್ರಮದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲು ಪಕ್ಷ ತೀರ್ಮಾನಿಸಿದೆ. ಈ ಬಗ್ಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪಾದಯಾತ್ರೆಯ ಅಭೂತಪೂರ್ವ ಜನಬೆಂಬಲವನ್ನು ನೋಡಿ ಕಾಂಗ್ರೆಸ್ ಸರ್ಕಾರ ಹತಾಶೆಯಾಗಿದೆ, ಹೀಗಾಗಿ ಉದ್ದೇಶಪೂರ್ವಕವಾಗಿ ಮೈದಾನ ನಿರಾಕರಿಸಲಾಗುತ್ತಿದೆ. ಬಿಜೆಪಿ ತನ್ನ ಯಾತ್ರೆಯನ್ನು ಮುಂದುವರಿಸಿ, ಸಮಾರೋಪ ಸಮಾರಂಭವನ್ನು ಮಾಡುತ್ತೇವೆ ಎಂದು ಹೇಳಿದ್ದಾರೆ.