ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ; ಓರ್ವ ಸಾವು
Janardhana Reddy: ಬಳ್ಳಾರಿಯ ಹವಂಬಾವಿ ಏರಿಯಾದಲ್ಲಿರುವ ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಓರ್ವ ಮೃತಪಟ್ಟಿದ್ದಾನೆ ಎಂದು ವರದಿಯೊಂದು ತಿಳಿಸಿದೆ. ಜತೆಗೆ ಸ್ಥಳದಲ್ಲಿ ಉದ್ವಿಗ್ನ ಸನ್ನಿವೇಶ ನಿರ್ಮಾಣವಾಗಿದೆ.
ಬಳ್ಳಾರಿಯಲ್ಲಿ ನಡೆದ ಗಲಾಟೆ, ಜನಾರ್ದನ ರೆಡ್ಡಿ -
ಬಳ್ಳಾರಿ, ಜ. 1: ಹವಂಬಾವಿ ಏರಿಯಾದಲ್ಲಿರುವ ಬಿಜೆಪಿ ನಾಯಕ ಜನಾರ್ದನ ರೆಡ್ಡಿ (G. Janardhana Reddy) ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಓರ್ವ ಮೃತಪಟ್ಟಿದ್ದಾನೆ ಎಂದು ವರದಿಯೊಂದು ತಿಳಿಸಿದೆ. ಸ್ಥಳದಲ್ಲಿ ಉದ್ವಿಗ್ನ ಸನ್ನಿವೇಶ ನಿರ್ಮಾಣವಾಗಿದೆ. ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ನಾಯಕ ನಾರಾ ಭರತ್ ರೆಡ್ಡಿ ಬೆಂಬಲಿಗರ ಮಧ್ಯೆ ಗಲಾಟೆ ಆರಂಭಗೊಂಡು ಕಲ್ಲು ತೂರಾಟ ನಡೆದಿದೆ. ಭಾರಿ ಸಂಖ್ಯೆಯಲ್ಲಿ ಎರಡೂ ಗುಂಪಿಗಳ ನಡುವೆ ಬಡಿದಾಟ ನಡೆದಿದೆ ಎಂದು ಮೂಲಗಳು ತಿಳಿಸಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಸ್ಥಿತಿ ನಿಯಂತ್ರಿಸಲು ಮುಂದಾಗಿದ್ದಾರೆ.
ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ. ಸ್ಥಳಕ್ಕೆ ಬಿಜೆಪಿ ನಾಯಕ ಶ್ರೀರಾಮುಲು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಭರತ್ ರೆಡ್ಡಿ ಬೆಂಬಲಿಗರು ತನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಜನಾರ್ದನ ರೆಡ್ಡಿಗಂಭೀರ ಆರೋಪ ಮಾಡಿದ್ದಾರೆ.
ಯಾಕಾಗಿ ಗಲಾಟೆ?
ಜನವರಿ 3ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನಲೆಯಲ್ಲಿ ಭರತ್ ರೆಡ್ಡಿ ಬೆಂಬಲಿಗರು ನಗರದೆಲ್ಲಡೆ ಬ್ಯಾನರ್ ಅಳವಡಿಸಿದ್ದಾರೆ. ಅದರಂತೆ ಜನಾರ್ದನ ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಅಳವಡಿಕೆಗೆ ಮುಂದಾಗಿದ್ದಾರೆ. ಇದಕ್ಕೆ ಅವರ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಗಲಾಟೆಗೆ ಕಾರಣವಾಗಿದ್ದು, ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ ಎಂದು ವರದಿಯೊಂದು ತಿಳಿಸಿದೆ. ಇದೇ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಜನಾರ್ದನ ರೆಡ್ಡಿ ನಿವಾಸಕ್ಕೆ ಬಿಜೆಪಿ ನಾಯಕ ಶ್ರೀರಾಮುಲು ಆಗಮಿಸಿದ್ದಾರೆ. ಭರತ್ ರೆಡ್ಡಿ ಬೆಂಬಲಿಗ ಸತೀಶ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ಮಧ್ಯೆ ಜಗಳ ವಾಗ್ವಾದ ನಡೆದಿದ್ದು ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸಿದೆ. ಈಗಾಗಲೇ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಸದ್ಯ ಸ್ತಳೀಯಾಡಳಿತ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಘಟನೆಯಲ್ಲಿ ಹಲವು ಮನೆಗಳ ಮೇಲೆ ಕಲ್ಲು ತೂರಾಟವೂ ನಡೆದಿದೆ.
ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಶಾಸಕತ್ವ ಅನರ್ಹತೆ ಆದೇಶ ವಾಪಸ್
ಇತ್ತೀಚೆಗೆ ಮುನಿಸು ಮರೆತು ಒಂದಾಗಿದ್ದ ಜನಾರ್ದನ ರೆಡ್ಡಿ- ಶ್ರೀರಾಮುಲು
ಬಳ್ಳಾರಿ ಜಿಲ್ಲೆಯಲ್ಲಿ ರಾಜಕೀಯದ ಮೂಲಕ ಒಂದು ಕಾಲದಲ್ಲಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದ ಬಿಜೆಪಿಯ ರೆಡ್ಡಿ-ರಾಮುಲು ಜೋಡಿ ಬಳಿಕ ವೈಯಕ್ತಿಕ ಭಿನ್ನಾಭಿಪ್ರಾಯಗಳಿಂದ ದೂರವಾಗಿದ್ದರು. ಇತ್ತೀಚೆಗೆ ಈ ಇಬ್ಬರು ನಾಯಕರು, ಮುನಿಸು ಮರೆತು ಒಂದಾಗಿದ್ದರು. ನರೇಂದ್ರ ಮೋದಿ ಪ್ರಧಾನಿಯಾಗಿ 11 ವರ್ಷಗಳಾಗಿದ್ದರಿಂದ ಅವರ ಸಾಧನೆ ತಿಳಿಸಲು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಕೆಲವು ತಿಂಗಳ ಹಿಂದೆ ಗಂಗಾವತಿಯಲ್ಲಿ ನಡೆದ ಸಭೆಯಲ್ಲಿ ಇಬ್ಬರು ನಾಯಕರು ಮತ್ತೆ ಒಂದಾಗಿದ್ದರು.
ಸಂಡೂರು ಉಪಚುನಾವಣೆಯ ಫಲಿತಾಂಶದ ಬಳಿಕ ಪರಸ್ಪರ ಟೀಕೆ, ಪ್ರತಿ ಟೀಕೆಗಳಲ್ಲಿ ತೊಡಗಿ ಮುನಿಸಿಕೊಂಡಿದ್ದ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು ಒಂದೇ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ, ಒಗ್ಗಟ್ಟಿನ ಸಂದೇಶ ಸಂದೇಶ ಸಾರಿದ್ದರು.