ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಉಗ್ರ ಸಂಘಟನೆಗಳ ಜತೆ ನಂಟು; ಬಳ್ಳಾರಿಯ ಅಬ್ದುಲ್ ಸಲಾಮ್ ಮನೆ ಮೇಲೆ ಎನ್‌ಐಎ ದಾಳಿ

ದೇಶದ ಭದ್ರತೆಗೆ ಧಕ್ಕೆ ತರಲು ಹೊಂಚು ಹಾಕಿದ್ದ ಉಗ್ರರ ಜಾಲವನ್ನು ಮಟ್ಟಹಾಕಲು ರಾಷ್ಟ್ರೀಯ ತನಿಖಾ ಸಂಸ್ಥೆ, ಇಂದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಪ್ರಮುಖ ನಗರಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ. ಬಳ್ಳಾರಿಯ ಕೌಲ್ ಬಜಾರ್ ನಿವಾಸಿಯಾದ ಅಬ್ದುಲ್ ಸಲಾಂ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿ, ತೀವ್ರ ಶೋಧ ನಡೆಸಿದ್ದಾರೆ.

ಬಳ್ಳಾರಿಯ ಅಬ್ದುಲ್ ಸಲಾಮ್ ಮನೆ ಮೇಲೆ ಎನ್‌ಐಎ ದಾಳಿ

‌ಆರೋಪಿ ಅಬ್ದುಲ್‌ ಸಲಾಮ್. -

Prabhakara R
Prabhakara R Jul 8, 2026 9:01 PM

ಬಳ್ಳಾರಿ: ಕೌಲ್ ಬಜಾರ್ ನಿವಾಸಿ ಅಬ್ದುಲ್ ಸಲಾಮ್ (Abdul Salam) ಮನೆ ಮೇಲೆ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಬುಧವಾರ ದಿಢೀರ್ ದಾಳಿ ನಡೆಸಿದ್ದಾರೆ. ಶೋಧ ಕಾರ್ಯ ನಡೆಸಿದ ಅಧಿಕಾರಿಗಳ ತಂಡ ಮೊಬೈಲ್ ಫೋನ್ ವಶಕ್ಕೆ ಪಡೆದಿದೆ.

ಆನ್‌ಲೈನ್ ಮೂಲಕ ಧರ್ಮ ಪ್ರಚೋದನೆ ಹಾಗೂ ಮೂಲಭೂತವಾದವನ್ನು ಹರಡಿ, ನಿಷೇಧಿತ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಹಿನ್ನೆಲೆಯಲ್ಲಿಆಂಧ್ರಪ್ರದೇಶದ ಎನ್‌ಟಿಆರ್ (NTR) ಜಿಲ್ಲೆಯಲ್ಲಿ ರೆಹಮತುಲ್ಲ ಷರಿಫ್ ಎಂಬಾತನ ವಿರುದ್ಧ ದಾಖಲಾಗಿತ್ತು.

ತನಿಖೆಯ ವೇಳೆ ರೆಹಮತುಲ್ಲ ಷರಿಫ್ ಜೊತೆಗೆ ಬಳ್ಳಾರಿಯ ಅಬ್ದುಲ್ ಸಲಾಮ್ ನಿಕಟ ನಂಟು ಹೊಂದಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ 26ರಂದೇ ಎನ್‌ಐಎ ಅಧಿಕಾರಿಗಳು ಅಬ್ದುಲ್ ಸಲಾಮ್‌ನನ್ನು ಬಂಧಿಸಿದ್ದರು.

ಬಂಧಿತ ಅಬ್ದುಲ್ ಸಲಾಮ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದರೂ, ಪ್ರಕರಣದ ಆಳವಾದ ತನಿಖೆಗಾಗಿ ಎನ್‌ಐಎ ತಂಡವು ಇಂದು ಮತ್ತೆ ಬಳ್ಳಾರಿಯ ಕೌಲ್ ಬಜಾರ್‌ನಲ್ಲಿರುವ ಆತನ ನಿವಾಸಕ್ಕೆ ಭೇಟಿ ನೀಡಿತ್ತು.

Viral Video: ನೆರೆಮನೆಯ ಯುವಕನಿಂದನೇ ಕಿರುಕುಳ; ವಿಡಿಯೊ ಮಾಡಿ ಕಣ್ಣೀರು ಹಾಕಿದ ಅಪ್ರಾಪ್ತ ಬಾಲಕಿ

ಬಳ್ಳಾರಿ ಮಾತ್ರವಲ್ಲದೆ ಆಂಧ್ರಪ್ರದೇಶದ ವಿಶಾಖಪಟ್ಟಣ, ತಮಿಳುನಾಡಿನ ಚೆನ್ನೈ ಸೇರಿದಂತೆ ದೇಶದ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಎನ್‌ಐಎ ಅಧಿಕಾರಿಗಳ ತಂಡಗಳು ದಾಳಿ ನಡೆಸಿವೆ.