ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹೊಸಪೇಟೆಯಲ್ಲಿ ಸರಣಿ ಅಪಘಾತ; ಬೈಕ್, ಕಾರು, ಬಸ್​ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿ, ನಾಲ್ವರ ಸಾವಿನ ಶಂಕೆ

Hosapete Road Accident: ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಬೈಕ್, ಕಾರು, ಬಸ್​ಗೆ ಲಾರಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಸರಣಿ ಅಪಘಾತ; ಬೈಕ್, ಕಾರು, ಬಸ್​ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿ

ಹೊಸಪೇಟೆ ಅಪಘಾತ -

Vishakha Bhat Heggar
Vishakha Bhat Heggar Apr 19, 2026 12:37 PM

ಬಳ್ಳಾರಿ: ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ಸರಣಿ ಅಪಘಾತ (Road Accident) ಸಂಭವಿಸಿದ್ದು, ಬೈಕ್, ಕಾರು, ಬಸ್​ಗೆ ಲಾರಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಶಂಕೆ ಇದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮೇಲೆ ಲಾರಿ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದೆ.

ತಕ್ಷಣ ಅಪಘಾತದ ಸ್ಥಳಕ್ಕೆ ವಿಜಯನಗರ ಎಸ್ಪಿ ಎಸ್. ಜಾಹ್ನವಿ ಭೇಟಿ ನೀಡಿದ್ದು, ಸ್ಪಾಟ್ ನಲ್ಲೇ ಮುಂದೆ ನಿಂತು ಗಾಯಾಳುಗಳನ್ನ ರವಾನಿಸಿದ್ದಾರೆ. ಜೆಸಿಬಿ ಮೂಲಕ ಕೆಳಗೆ ಬಿದ್ದಿರೋ ಲಾರಿ ಮೇಲೆತ್ತಲು ಕಾರ್ಯಾಚರಣೆ ನಡೆದಿದೆ. ಅಪಘಾತ ಕಂಡು ಸುತ್ತಮುತ್ತಲು ಗ್ರಾಮಸ್ಥರು ಕೂಡ ಸ್ಥಳಕ್ಕೆ ಜಮಾಯಿಸಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್​​ ಜಾಮ್​​ ಉಂಟಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಬಿಎಂಎಂ ಫ್ಯಾಕ್ಟರಿ ಬಳಿ ಎದುರಿಗೆ ಬರುತ್ತಿದ್ದಂತೆ ನಿಯಂತ್ರಣ ತಪ್ಪಿದ ಲಾರಿ ಬೈಕ್​​ಗೆ ಗುದ್ದಿದೆ. ಬಳಿಕ ಅಲ್ಲಿಂದ ತಪ್ಪಿಸಿಕೊಳ್ಳಲು ಹೋಗಿ ಮತ್ತೊಂದು ಕಾರು, KSRTC ಬಸ್​​ಗೆ ಲಾರಿಯನ್ನು ಚಾಲಕ ಡಿಕ್ಕಿ ಹೊಡೆಸಿದ್ದಾನೆ. ಅಂತಿಮವಾಗಿ ಬಸ್​​ಗೆ ಗುದ್ದಿದ ರಭಸಕ್ಕೆ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಆ ಪೈಕಿ ಐವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳಕ್ಕೆ ರವಾನೆ ಮಾಡಲಾಗಿದೆ.

CPI PV Salimath: ಕಾರು ಅಪಘಾತದಲ್ಲಿ ಸಜೀವ ದಹನಗೊಂಡ ಸಿಪಿಐ ಸಾಲಿಮಠ: ಕಾರು ಅಪಘಾತ ಸಂಭವಿಸಿದ್ದು ಹೇಗೆ?

ಸಕ್ಕರೆ ತುಂಬಿದ್ದ ಲಾರಿ ಅಪಘಾತ

ಕೊಳ್ಳೇಗಾಲದಿಂದ ತಮಿಳುನಾಡಿನ ತಂಜಾವೂರು ಸಮೀಪದ ಪಾರ್ಲೆ-ಜಿ ಬಿಸ್ಕೆಟ್ ಕಂಪನಿಗೆ ಸಕ್ಕರೆ ಮೂಟೆಗಳನ್ನು ಸಾಗಿಸುತ್ತಿದ್ದ ವೇಳೆ, ನಾಲ್‌ರೋಡ್‌ ಬಳಿ ಲಾರಿಯ ಬ್ರೇಕ್ ವೈಫಲ್ಯಗೊಂಡು ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಲಾರಿ ಪಲ್ಟಿಯಾಗಿ, ಚಾಲಕ ಅದರ ಕೆಳಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ತಿಳಿದ ಸಾರ್ವಜನಿಕರು ತಕ್ಷಣ ರಾಮಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರ ಸಹಕಾರದಿಂದ ಶವವನ್ನು ಹೊರತೆಗೆದಿದ್ದಾರೆ.