Basanagowda Patil Yatnal: ಪ್ರಾದೇಶಿಕ ಪಕ್ಷ ಕಟ್ಟುವೆ, 2028ರಲ್ಲಿ ನಾನೇ ಸಿಎಂ: ಯತ್ನಾಳ್ ಘೋಷಣೆ
ಯಾರ ಕಾಲಿಗೂ ಬಿದ್ದು ಪಕ್ಷಕ್ಕೆ ಸೇರಿಸಿಕೊಳ್ಳಿ ಅಂತ ಹೇಳಲು ದೆಹಲಿಗೆ ಬಂದಿಲ್ಲ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಕಟ್ಟುತ್ತೇನೆ. ನಾನೇ ಸಿಎಂ ಆಗುತ್ತೇನೆ. 2028ಕ್ಕೆ ನಾನೇ ಸಿಎಂ ಆಗ್ತೀನಿ. ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಬಸನಗೌಡ ಪಾಟೀಳ್ ಯತ್ನಾಳ್ -
ಬೆಂಗಳೂರು, ಮಾರ್ಚ್ 9 : ಬಿಜೆಪಿಯಿಂದ (BJP) ಉಚ್ಚಾಟನೆಯಾಗಿರುವ ವಿಜಯಪುರ (Vijyapuara) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಪ್ರಾದೇಶಿಕ ಪಕ್ಷವನ್ನು ಸ್ಥಾಪಿಸುವ ಬಗ್ಗೆ ಸಮವಾರ ಮಹತ್ವದ ಘೋಷಣೆ ಮಾಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಬಿಜೆಪಿಯ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಬಂದಿಲ್ಲ. ಪುತ್ರನ ಮದುವೆಯ ಆಹ್ವಾನ ನೀಡಲು ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಂಸದ ಬಿವೈ ರಾಘವೇಂದ್ರ ಅವರಂತಹ ಕಡು ಭ್ರಷ್ಟ ಕುಟುಂಬ ಬಿಜೆಪಿಯಲ್ಲಿ ಇರುವವರೆಗೂ ಪಕ್ಷ ಸೇರಲು ಇಷ್ಟಪಡುವುದಿಲ್ಲ ಎಂದು ಯತ್ನಾಳ್ ಹೇಳಿದ್ದಾರೆ. ಬಿಜೆಪಿ ಕರೆಯುವ ನಿರೀಕ್ಷೆಯಲ್ಲಿ ಇರಲು ತಾನು ಹುಚ್ಚನಲ್ಲ ಎಂದು ಹೇಳಿದ ಅವರು, ಪಶ್ಚಿಮ ಬಂಗಾಳ, ಬಿಹಾರ್ ಅಥವಾ ಉತ್ತರ ಪ್ರದೇಶ ಚುನಾವಣೆಗಳ ನಂತರ ಬಿಜೆಪಿ ಕರೆದರೂ ನಿರ್ಧಾರ ಬದಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಯಾರ ಕಾಲಿಗೂ ಬಿದ್ದು ಪಕ್ಷಕ್ಕೆ ಸೇರಿಸಿಕೊಳ್ಳಿ ಅಂತ ಹೇಳಲು ಬಂದಿಲ್ಲ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಕಟ್ಟುತ್ತೇನೆ. ನಾನೇ ಸಿಎಂ ಆಗುತ್ತೇನೆ. 2028ಕ್ಕೆ ನಾನೇ ಸಿಎಂ ಆಗ್ತೀನಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಯತ್ನಾಳ್ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.