ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Basavaraj Bommai: ಕಾಂಗ್ರೆಸ್‌ನಲ್ಲಿ ಸತ್ಯ ಹೇಳುವವರಿಗೆ ಸ್ಥಳವಿಲ್ಲ: ಬೊಮ್ಮಾಯಿ

Basavaraj Bommai: ರಾಜಣ್ಣ ಹೇಳಿದಂತೆ ಕಾಂಗ್ರೆಸ್‌ನಲ್ಲಿ ಕ್ರಾಂತಿ ಪ್ರಾರಂಭ ಆಗಿದೆ. ಏನೇ ಆದರೂ ಮತ ಸೇರ್ಪಡೆ ಕಾಂಗ್ರೆಸ್ ಆಡಳಿತದಲ್ಲಿ ಆಗಿದೆ ಎನ್ನುವುದು ಕಟು ಸತ್ಯ. ಅದನ್ನು ಅಳಿಸಲು ಸಾಧ್ಯವಿಲ್ಲ. ಸತ್ಯದ ಕನ್ನಡಿಯಂತೆ ರಾಹುಲ್ ಗಾಂಧಿಗೆ ಹೇಳಿರುವುದಕ್ಕೆ ರಾಜಣ್ಣ ಅವರನ್ನು ಮೆಚ್ಚಬೇಕು. ಆದರೆ ಪ್ರಮಾಣಿಕರಿಗೆ ಕಾಂಗ್ರೆಸ್‌ನಲ್ಲಿ ಸ್ಥಳ ಇಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ಸತ್ಯ ಹೇಳುವವರಿಗೆ ಸ್ಥಳವಿಲ್ಲ: ಬೊಮ್ಮಾಯಿ

Profile Siddalinga Swamy Aug 11, 2025 10:51 PM

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಸತ್ಯಕ್ಕೆ ಸ್ಥಳವಿಲ್ಲ. ಸತ್ಯ ಹೇಳುವವರಿಗೂ ಸ್ಥಳವಿಲ್ಲ. ಕಾಂಗ್ರೆಸ್‌ನ ಮತಕ್ಕೆ ಓಲೈಕೆ ರಾಜಕಾರಣದ ಜತೆಗೆ ಆಂತರಿಕವಾಗಿ ಸಂವಿಧಾನದ ವಿರೋಧ ನಡೆದರೂ ಹೈಕಮಾಂಡ್ ವಿರುದ್ಧ ಧ್ವನಿ ಎತ್ತುವ ಸ್ವತಂತ್ರ ಇಲ್ಲ‌. ಗುಲಾಮರಂತೆ ನಡೆಸಿಕೊಳ್ಳುವ ಮನಸ್ಥಿತಿ ಮೂರನೇ ತಲೆಮಾರಿನ ಕಾಂಗ್ರೆಸ್ ನಾಯಕರಿಗೆ ಇನ್ನೂ ಹೋಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ʼಎಕ್ಸ್ʼನಲ್ಲಿ ಪೋಸ್ಟ್‌ ಮಾಡಿರುವ ಅವರು, ಕೆ.ಎನ್. ರಾಜಣ್ಣ ಒಬ್ಬ ಹಿರಿಯ ಅನುಭವಿ ರಾಜಕಾರಣಿ. ತಮ್ಮ ಇಲಾಖೆಯಲ್ಲಿ ದಕ್ಷತೆಯಿಂದ ಕೆಲಸ ಮಾಡಿದ್ದರು. ಎಸ್ಟಿ ಸಮುದಾಯದ ಹಿರಿಯ ನಾಯಕ ಅವರಿಗೆ ರಾಜಿನಾಮೆ ಕೊಡಲು ಅವಕಾಶ ಕೊಡದಿರುವುದು ಅವರ ಅನುಭವ, ದಕ್ಷತೆ, ಎಸ್ಟಿ ಜನಾಂಗಕ್ಕೆ ಮಾಡಿರುವ ಅವಮಾನ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿಯನ್ನೂ ಓದಿ | Indian Railway: ರೈಲ್ವೇ ಪ್ರಯಾಣಿಕರಿಗೆ ಗುಡ್‌ನ್ಯೂಸ್‌! ಹಬ್ಬಕ್ಕಾಗಿ ಭರ್ಜರಿ ಆಫರ್‌

ಒಂದು ರೀತಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಿನ್ನಡೆ ಮುಂದಿನ ದಿನಗಳಲ್ಲಿ ಎಚ್ಚರಿಕೆ ಗಂಟೆ. ಇದರಿಂದ ರಾಜಣ್ಣ ಹೇಳಿದಂತೆ ಕಾಂಗ್ರೆಸ್‌ನಲ್ಲಿ ಕ್ರಾಂತಿ ಪ್ರಾರಂಭ ಆಗಿದೆ. ಏನೇ ಆದರೂ ಮತ ಸೇರ್ಪಡೆ ಕಾಂಗ್ರೆಸ್ ಆಡಳಿತದಲ್ಲಿ ಆಗಿದೆ ಎನ್ನುವುದು ಕಟು ಸತ್ಯ. ಅದನ್ನು ಅಳಿಸಲು ಸಾಧ್ಯವಿಲ್ಲ. ಸತ್ಯದ ಕನ್ನಡಿಯಂತೆ ರಾಹುಲ್ ಗಾಂಧಿಗೆ ಹೇಳಿರುವುದಕ್ಕೆ ರಾಜಣ್ಣ ಅವರನ್ನು ಮೆಚ್ಚಬೇಕು. ಆದರೆ ಪ್ರಮಾಣಿಕರಿಗೆ ಕಾಂಗ್ರೆಸ್‌ನಲ್ಲಿ ಸ್ಥಳ ಇಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.‌