ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Belagavi News: ಮದುವೆ ಆಗೋದಾಗಿ ನಂಬಿಸಿ ಯುವತಿ ಮೇಲೆ ನಿರಂತರ ಅತ್ಯಾಚಾರ, ವಂಚನೆ: ಆರೋಪಿ ಅರೆಸ್ಟ್‌

ಇನ್‌ಸ್ಟಾಗ್ರಾಂ ಮೂಲಕ ಯುವತಿಯ ಪರಿಚಯ ಮಾಡಿಕೊಂಡಿದ್ದ ಆರೋಪಿ, ಯುವತಿಯನ್ನು ಮದುವೆಯಾಗುವುದಾಗಿ ಬಣ್ಣಬಣ್ಣದ ಮಾತುಗಳನ್ನಾಡಿ ನಂಬಿಸಿ ನಿರಂತರ ಅತ್ಯಾಚಾರ ನಡೆಸಿದ್ದಾನೆ. ಈ ನಡುವೆ ಯುವತಿ ಮದುವೆಯಾಗು ಎಂದಿದ್ದಕ್ಕೆ, 3 ಕೋಟಿ ರೂಪಾಯಿ ಹಣ ನೀಡಬೇಕು ಎಂದು ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ. ಹೀಗಾಗಿ ಪೊಲೀಸರಿಗೆ ಯುವತಿ ದೂರು ನೀಡಿದ್ದಾಳೆ.

ಮದುವೆ ಆಗೋದಾಗಿ ನಂಬಿಸಿ ಯುವತಿ ಮೇಲೆ ನಿರಂತರ ಅತ್ಯಾಚಾರ, ವಂಚನೆ

ಅತ್ಯಾಚಾರ ಆರೋಪಿ ಈಶ್ವರ್‌ ಸಿಂಗ್. -

Prabhakara R
Prabhakara R Apr 6, 2026 6:24 PM

ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ನಿರಂತರ ಅತ್ಯಾಚಾರ ನಡೆಸಿ, ವಂಚನೆ ಮಾಡಿರುವ ಪ್ರಕರಣ ಜಿಲ್ಲೆಯಲ್ಲಿ (Belagavi News) ನಡೆದಿದ್ದು, ಇದಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಶಹಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಈಶ್ವರ್‌ ಸಿಂಗ್ ಬಡಗೂಜರ್ ಬಂಧಿತ ಆರೋಪಿಯಾಗಿದ್ದಾನೆ. ಈತ ಇನ್‌ಸ್ಟಾಗ್ರಾಂ ಮೂಲಕ ಯುವತಿಯ ಪರಿಚಯ ಮಾಡಿಕೊಂಡಿದ್ದನು. ಆರಂಭದಲ್ಲಿ ಸ್ನೇಹದಿಂದ ಶುರುವಾದ ಇವರ ಮಾತುಕತೆ ಬಳಿಕ ಪ್ರೀತಿಗೆ ತಿರುಗಿತ್ತು. ಯುವತಿಯನ್ನು ಮದುವೆಯಾಗುವುದಾಗಿ ಬಣ್ಣಬಣ್ಣದ ಮಾತುಗಳನ್ನಾಡಿ ನಂಬಿಸಿದ್ದ ಈಶ್ವರ್‌ಸಿಂಗ್, ಆಕೆಯನ್ನು ಪ್ರೀತಿಯ ಜಾಲದಲ್ಲಿ ಬೀಳಿಸಿದ್ದನು.

ತನ್ನನ್ನು ಮದುವೆಯಾಗುತ್ತಾನೆಂದು ಕುರುಡಾಗಿ ನಂಬಿದ್ದನ್ನು ಬಂಡವಾಳ ಮಾಡಿಕೊಂಡ ಆರೋಪಿ, ಆಕೆಯನ್ನು ವಿವಿಧೆಡೆ ಕರೆದೊಯ್ದು ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮದುವೆಯ ಭರವಸೆ ನೀಡಿ ಪದೇ ಪದೇ ಅತ್ಯಾಚಾರ ನಡೆಸಿದ್ದಲ್ಲದೆ, ಆಕೆಯ ಭಾವನೆಗಳೊಂದಿಗೆ ಚೆಲ್ಲಾಟವಾಡಿದ್ದಾನೆ. ಆದರೆ, ಯಾವಾಗ ಯುವತಿ ಮದುವೆ ಮಾಡಿಕೊಳ್ಳುವಂತೆ ಒತ್ತಾಯಿಸಲು ಆರಂಭಿಸಿದಳೋ, ಆಗ ಆರೋಪಿ ತನ್ನ ಅಸಲಿ ರೂಪವನ್ನು ಹೊರಹಾಕಿದ್ದಾನೆ.

ಮದುವೆಯಾಗಬೇಕಾದರೆ 3 ಕೋಟಿ ರೂಪಾಯಿ ಹಣ ನೀಡಬೇಕು ಎಂದು ಯುವತಿಗೆ ಆರೋಪಿ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. ಬಡ ಯುವತಿಗೆ ಅಷ್ಟು ದೊಡ್ಡ ಮೊತ್ತವನ್ನು ನೀಡಲು ಸಾಧ್ಯವಿಲ್ಲ ಎಂದು ತಿಳಿದಿದ್ದರೂ, ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದ ಈ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಹಣ ನೀಡದಿದ್ದರೆ ಮದುವೆಯಾಗುವುದಿಲ್ಲ ಎಂದು ಬೆದರಿಕೆ ಹಾಕಿದಾಗ ತಾನು ವಂಚನೆಗೆ ಒಳಗಾಗಿರುವುದು ಯುವತಿಗೆ ಅರಿವಾಗಿದೆ.

Love Jihad: ಹುಬ್ಬಳ್ಳಿ ಜಿಮ್‌ ಲವ್‌ ಜಿಹಾದ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡನ ಕೈವಾಡ: ಯುವತಿ ಆರೋಪ

ನ್ಯಾಯಕ್ಕಾಗಿ ಸಂತ್ರಸ್ತ ಯುವತಿಯು ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ನಡೆಸಿ, ತಲೆಮರೆಸಿಕೊಂಡಿದ್ದ ಆರೋಪಿ ಈಶ್ವರಸಿಂಗ್ ಬಡಗೂಜರ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.