Next CM of Karnataka: ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಸಿಎಂ; ಯತೀಂದ್ರ ಹೊಸ ಬಾಂಬ್!
Karnataka Politics: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ನಂತರ ಎಂತಹವರು ನೇತೃತ್ವ ವಹಿಸಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

-

ಬೆಳಗಾವಿ, ಅ.22: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಯತೀಂದ್ರ ಸಿದ್ದರಾಮಯ್ಯ, ಸಿಎಂ ಸಿದ್ದರಾಮಯ್ಯನವರು ರಾಜಕೀಯ ಬದುಕಿನ ಕೊನೆ ಘಟ್ಟದಲ್ಲಿ ಇದ್ದಾರೆ. ಅವರ ಮುಂದಿನ ನೇತೃತ್ವ ವಹಿಸುವ ಶಕ್ತಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಇದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಮುಂದಿನ ಸಿಎಂ (Next CM of Karnataka) ಯಾರಾಗಬೇಕು ಎಂಬ ಸುಳಿವು ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ನಡೆದ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಯತೀಂದ್ರ ಮಾತನಾಡಿದರು. ತಂದೆಯವರು ರಾಜಕೀಯ ಬದುಕಿನ ಕೊನೆ ಘಟ್ಟದಲ್ಲಿ ಇದ್ದಾರೆ. ಇಂತಹ ಸಂದರ್ಭದಲ್ಲಿ ವೈಚಾರಿಕತೆ ಹಾಗೂ ಪ್ರಗತಿಪರ ಚಿಂತನೆ ಹೊಂದಿರುವವರಿಗೆ ಮಾರ್ಗದರ್ಶನ ನೀಡಲು ಸತೀಶ್ ಜಾರಕಿಹೊಳಿ ಅವರು ಸೂಕ್ತ ನಾಯಕರಾಗಿದ್ದಾರೆ ಎಂದು ಹೇಳುವ ಮೂಲಕ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಆಗಬೇಕು ಎಂದು ಪರೋಕ್ಷವಾಗಿ ಸುಳಿವು ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ | CM Siddaramaiah: ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲ ಮುಚ್ಚಲು ಸಿಎಂ ಸಿದ್ದರಾಮಯ್ಯ ಆದೇಶ
ಈ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ, ವಿನಯ್ ನಾವಲಗಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.